AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

Prem about song: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ ಮೂಲಕ ಹಾಡಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್
Prem Dhruva Sarja
ಮಂಜುನಾಥ ಸಿ.
|

Updated on:Mar 18, 2026 | 7:03 PM

Share

ಧ್ರುವ ಸರ್ಜಾ (Dhrva Sarja) ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ ಮೂಲಕ ಹಾಡಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ನಿರ್ದೇಶಕ ಪ್ರೇಮ್, ‘ಯಾರೂ ಸಹ ಬೇಕೆಂದು ಅಥವಾ ತಿಳಿದು-ತಿಳಿದು ತಪ್ಪು ಮಾಡುವುದಿಲ್ಲ. ಸಾಕಷ್ಟು ಹಾಡುಗಳನ್ನು ನಾನು ಈ ವರೆಗೆ ಬರೆದಿದ್ದೇನೆ. ತಾಯಿಯ ಬಗ್ಗೆ, ದೇವರ ಬಗ್ಗೆ, ಅಣ್ಣ-ತಮ್ಮ, ಪ್ರೀತಿ ಬಗ್ಗೆ, ಜನಪದ ಹೀಗೆ ಹಲವು ರೀತಿ ಹಾಡು ಬರೆದಿದ್ದೀನಿ. ಜನ ಸಹ ಪ್ರೇಮ್ ಸಿನಿಮಾನಲ್ಲಿ ಒಳ್ಳೆಯ ಹಾಡುಗಳು ಇರುತ್ತವೆ ಎಂದೇ ಸಿನಿಮಾಕ್ಕೆ ಬರುತ್ತಾರೆ. ಅದಕ್ಕೆ ಋಣಿಯಾಗಿ ಇರುತ್ತೇನೆ. ಈ ಹಾಡು (ಸರ್ಸೆ ಸೆರಗು) ಬರೆದಾಗ ನಾನು ಬೇರೊಂದು ದೃಷ್ಟಿಕೋನದಿಂದ ಬರೆದಿದ್ದೆ’ ಎಂದಿದ್ದಾರೆ.

‘ಆ ಹಾಡು ಬರೆಯುವಾಗ ನನ್ನ ದೃಷ್ಟಿಕೋನದಲ್ಲಿ ನಾನು ಬರೆದೆ. ಎಣ್ಣೆ ಬಾಟಲಿ, ಉಪ್ಪಿನಕಾಯಿ ಇದನ್ನು ಕಲ್ಪಿಸಿಕೊಂಡು ಹಾಡು ಬರೆದಿದ್ದೆ. ಬಾಟಲ್​​ನ ಮೇಲೆತ್ತಿ ಎಂದು ಬರೆಯಬೇಕಿತ್ತು ಆದರೆ ಆ ಬಾಟಲಿ ಪದವನ್ನು ನಾನು ಕೊನೆಯಲ್ಲಿ ಬಳಸಿದೆ. ಹಾಡಿನಲ್ಲಿ ಕುತೂಹಲ ಇರಲಿ ಎಂಬ ಕಾರಣಕ್ಕೆ ಹಾಗೆ ಮಾಡಿದೆ. ಆದರೆ ಜನ ಅದನ್ನು ಬೇರೆಯದ್ದೇ ರೀತಿಯಲ್ಲಿ ಅರ್ಥ ಮಾಡಿಕೊಂಡಿದ್ದಾರೆ. ಕೆಲವರು ನನ್ನ ವಿರುದ್ಧ ಕಾಲೆಳೆಯಲು, ಹೀಗಳೆಯಲು ಈ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ. ಲೈಕು, ಕಮೆಂಟಿಗಾಗಿ ವಿಡಿಯೋ ಮಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ’ ಎಂದಿದ್ದಾರೆ ಪ್ರೇಮ್.

ಇದನ್ನೂ ಓದಿ:ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

‘ನಾನು ಈ ವರೆಗೆ ಕೆಟ್ಟ ಅರ್ಥದ ಹಾಡುಗಳನ್ನು ಬರೆದಿಲ್ಲ, ಅದು ನನಗೆ ಬೇಕಾಗಿಯೂ ಇಲ್ಲ. ನಾನು ಬರೆದಿದ್ದ ಅರ್ಥವೇ ಬೇರೆ ಆಗಿತ್ತು. ಇದನ್ನು ಈ ಹಿಂದೆಯೂ ನಾನು ಮೀಡಿಯಾ ಮುಂದೆ ಹೇಳಿದ್ದೇನೆ. ಆದರೆ ಹಾಡು ಕೇಳಿದ ಕೆಲವರಿಗೆ ಹರ್ಟ್ ಆಗಿರಬಹುದು, ಪ್ರೇಮ್ ಹೀಗೆ ಮಾಡಿದ್ದಾರಾ? ಪ್ರೇಮ್ ಈ ಥರಾನ? ಅನಿಸಿರಬಹುದು. ಸಾಹಿತಿ ಆದ ಮೇಲೆ ಎಲ್ಲ ರೀತಿಯಲ್ಲಿಯೂ ಬರೆಯಬೇಕಾಗುತ್ತದೆ. ಆದರೆ ನಾನು ಅಶ್ಲೀಲ ಅರ್ಥದಲ್ಲಿ ಬರೆದಿಲ್ಲ. ನನ್ನಿಂದ ಬೇಸರ ಆಗಿದ್ದರೆ ಕ್ಷಮೆ ಕೇಳುವೆ. ಹಾಡನ್ನು ರೀರೈಟ್ ಮಾಡುವೆ, ಬೇರೆ ರೀತಿ ಬರೆದು ಮತ್ತೆ ಅಪ್​ಲೋಡ್ ಮಾಡುತ್ತೀವಿ, ನಿಮಗೆ ಹರ್ಟ್ ಮಾಡಲು ಇಷ್ಟವಿಲ್ಲ’ ಎಂದಿದ್ದಾರೆ ಪ್ರೇಮ್.

ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ಗೊಂದಲ ಇತ್ತು. ಹಿಂದಿ ಪದಗಳು ಕೆಲವು ನನಗೆ ಇಷ್ಟವಾಗಲಿಲ್ಲ. ಆದರೆ ಭಾಷೆ ಸಮಸ್ಯೆಯಿಂದ ನಾನು ಪ್ರಶ್ನೆ ಮಾಡಲಿಲ್ಲ. ಆದರೆ ಹಿಂದಿ ಹಾಡು ಬರೆದಿರುವ ರತಿ ಬಾಲಮ್ ಅವರು ಎಲ್ಲ ತಪ್ಪನ್ನು ನನ್ನ ಮೇಲೆ ಹೊರಿಸಿದ್ದಾರೆ. ಅಸಲಿಗೆ ನನ್ನ ಹಿಂದಿನ ಹಿಟ್ ಹಾಡುಗಳನ್ನು ಕನ್ನಡದಿಂದ ಹಿಂದಿಗೆ ಬರೆದಿದ್ದು ಅವರೇ. ಆದರೆ ಅವರು ಸಮಜಾಯಿಷಿಕೊಳ್ಳಲಿಲ್ಲ, ಎಲ್ಲ ತಪ್ಪು ನನ್ನ ಮೇಲೆ ಹಾಕಿದರು, ಬಹುಷಃ ಭಯಪಟ್ಟು ನನ್ನ ಮೇಲೆ ಹಾಕಿದ್ದಾರೆ’ ಎಂದಿದ್ದಾರೆ ಪ್ರೇಮ್.

ಇನ್ನು ನಟಿ ನೋರಾ ಫತೇಹಿ ಸ್ಪಷ್ಟನೆ ಬಗ್ಗೆಯೂ ಮಾತನಾಡಿರುವ ಪ್ರೇಮ್, ‘ನೋರಾ ಫತೇಹಿ ಮಾತನಾಡಿರುವುದು ತಪ್ಪು. ಅವರಿಗೆ ಸಾಹಿತ್ಯ ಗೊತ್ತಿತ್ತು. ಸಾಹಿತ್ಯ ಗೊತ್ತಿಲ್ಲದೆ ಯಾವ ನಟರೂ ನಟಿಸುವುದಿಲ್ಲ, ಸಾಹಿತ್ಯ ಗೊತ್ತಿಲ್ಲದೆ ಎಕ್ಸ್​ಪ್ರೆಷನ್ ಹೇಗೆ ಬರುತ್ತೆ? ಅವರು ಹಾಗೆ ಮಾತನಾಡಬಾರದಿತ್ತು. ಈಗ ಆಗಿರುವ ವಿವಾದದಿಂದ ತಪ್ಪಿಸಿಕೊಳ್ಳಲು ಹಾಗೆ ಮಾಡಿದ್ದಾರೆ. ಅನಿಸುತ್ತದೆ. ಇತ್ತೀಚೆಗೆ ನಡೆದ ಆಡಿಯೋ ಪ್ರೋಗ್ರಾಂನಲ್ಲಿ ಸಹ ಅವರು ಹಾಡಿನ ಬಗ್ಗೆ ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ್ದರು. ಆದರೆ ಈಗ ಹೀಗೆ ಮಾತನಾಡುತ್ತಿದ್ದಾರೆ. ಇರಲಿ ನಾನು ಹಾಡನ್ನು ರೀರೈಟ್ ಮಾಡುತ್ತೀನಿ. ಮತ್ತೆ ಅಪ್​​ಲೋಡ್ ಮಾಡುತ್ತೀನಿ’ ಎಂದಿದ್ದಾರೆ ಪ್ರೇಮ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Wed, 18 March 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ