AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್‌ ಆಫೀಸ್‌ನಲ್ಲಿ ‘ಪ್ರೇಮದ ಊರಲಿ’ ಸಿನಿಮಾದ ಅಬ್ಬರ: 19ನೇ ದಿನ 4 ಕೋಟಿ ರೂ. ಗಳಿಕೆ

ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ಪ್ರೇಮದ ಊರಲಿ' ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾಗಿ 19 ದಿನಗಳನ್ನು ಪೂರೈಸಿರುವ ಈ ಚಿತ್ರವು ಒಟ್ಟು 67 ಕೋಟಿ ರೂಪಾಯಿಗಳಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಯಶಸ್ವಿ ಪ್ರದರ್ಶನ ಮುಂದುವರಿಸಿದೆ.

ಬಾಕ್ಸ್‌ ಆಫೀಸ್‌ನಲ್ಲಿ ‘ಪ್ರೇಮದ ಊರಲಿ’ ಸಿನಿಮಾದ ಅಬ್ಬರ: 19ನೇ ದಿನ 4 ಕೋಟಿ ರೂ. ಗಳಿಕೆ
ಪ್ರೇಮದ ಊರಲಿ
ರಾಜೇಶ್ ದುಗ್ಗುಮನೆ
|

Updated on: Oct 14, 2026 | 9:53 AM

Share

ಮುಖ್ಯಾಂಶಗಳು

  • ಬಾಕ್ಸ್‌ ಆಫೀಸ್‌ನಲ್ಲಿ ಪ್ರೇಮದ ಊರಲಿ ಹವಾ
  • 19ನೇ ದಿನವೂ ಭರ್ಜರಿ ಕಲೆಕ್ಷನ್ ಮಾಡಿದ 'ಪ್ರೇಮದ ಊರಲಿ'
  • 57 ಕೋಟಿ ರೂ. ಗಡಿ ದಾಟಿದ ಒಟ್ಟು ಭಾರತೀಯ ನೆಟ್ ಕಲೆಕ್ಷನ್

ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಬಿಡುಗಡೆಯಾದಾಗಿನಿಂದಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತ ಬಂದಿರುವ ಈ ಚಿತ್ರವು, ದಿನ ಕಳೆದಂತೆ ತನ್ನ ಗಳಿಕೆಯ ಗಡಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಸದ್ಯ ಬಿಡುಗಡೆಯಾಗಿ 19 ದಿನಗಳನ್ನು ಪೂರೈಸಿರುವ ಈ ಸಿನಿಮಾ ಗಳಿಕೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ದಾಟುತ್ತಿದೆ.

ಚಿತ್ರವು ತನ್ನ 19ನೇ ದಿನದಂದು (ಮಂಗಳವಾರ) ಬರೋಬ್ಬರಿ 4.75 ಕೋಟಿ ರೂ. ನೆಟ್ ಕಲೆಕ್ಷನ್ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಒಟ್ಟು 1,355 ಪ್ರದರ್ಶನಗಳನ್ನು ಕಂಡಿದ್ದು, ಶೇಕಡಾ 57 ರಷ್ಟು ಆಕ್ಯುಪೆನ್ಸಿ ದಾಖಲಿಸಿದೆ. ಇದರೊಂದಿಗೆ ಚಿತ್ರದ ಒಟ್ಟು ಭಾರತದ ಗ್ರಾಸ್ ಗಳಿಕೆ 67.46 ಕೋಟಿ ರೂ. ತಲುಪಿದ್ದರೆ, ಒಟ್ಟು ನೆಟ್ ಗಳಿಕೆ 57.72 ಕೋಟಿ ರೂ. ಗಡಿ ದಾಟಿದೆ.

ಮೊದಲ ವಾರದಲ್ಲಿ ಸಾಧಾರಣ ಆರಂಭ ಪಡೆದುಕೊಂಡಿದ್ದ ಸಿನಿಮಾ, ಎರಡನೇ ಹಾಗೂ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಗಳಿಕೆಯಲ್ಲಿ ಭಾರಿ ಜಿಗಿತ ಕಂಡಿತು. ವಿಶೇಷವಾಗಿ ಮೂರನೇ ವಾರದ ವೀಕೆಂಡ್‌ಗಳಲ್ಲಿ (ಶನಿವಾರ ಮತ್ತು ಭಾನುವಾರ) ಕ್ರಮವಾಗಿ 6.75 ಕೋಟಿ ರೂ. ಮತ್ತು 8 ಕೋಟಿ ರೂ. ಗಳಿಸುವ ಮೂಲಕ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಂಡಿತು. ವಾರದ ದಿನಗಳಲ್ಲೂ ಕೂಡ ಇದರ ಗಳಿಕೆ ಸ್ಥಿರವಾಗಿ ಮುಂದುವರಿದಿದೆ.

ಇದನ್ನೂ ಓದಿ: ಮೂರನೇ ಸೋಮವಾರವೂ ದಾಖಲೆಯ ಗಳಿಕೆ ಮಾಡಿದ ‘ಪ್ರೇಮದ ಊರಲಿ’ ಸಿನಿಮಾ

ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚುತ್ತಿರುವುದು ಚಿತ್ರತಂಡಕ್ಕೆ ದೊಡ್ಡ ಉತ್ಸಾಹ ತಂದಿದೆ. 1,300ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಮುಂದಿನ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಬರೆಯುವ ಮುನ್ಸೂಚನೆ ನೀಡಿದೆ. ಚಿತ್ರದ ಈ ಅದ್ಭುತ ಯಶಸ್ಸು ಸ್ಯಾಂಡಲ್‌ವುಡ್ ವಲಯದಲ್ಲಿ ಎಲ್ಲರ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ದೇವನಹಳ್ಳಿ ಬಳಿ ಕಾರಿಗೆ ಲಾರಿ ಡಿಕ್ಕಿ; ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ದೇವನಹಳ್ಳಿ ಬಳಿ ಕಾರಿಗೆ ಲಾರಿ ಡಿಕ್ಕಿ; ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಊಟ-ನಿದ್ದೆ!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಊಟ-ನಿದ್ದೆ!
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ