‘ಪ್ರೇಮದ ಊರಲಿ’ ಸಿನಿಮಾಗೆ ಸಿಕ್ತು ಉತ್ತಮ ಪ್ರತಿಕ್ರಿಯೆ; ಏರಿಕೆ ಕಂಡ ಶೋಗಳ ಸಂಖ್ಯೆ

ಶ್ರೀರಾಮ್, ರಮಿಕಾ ಶಿವು, ತಪಸ್ವಿನಿ ಪೂಣಚ್ಚ, ರಂಗಾಯಣ ರಘು ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಆದ್ದರಿಂದ ಈ ಚಿತ್ರಕ್ಕೆ ಶೋಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಫ್ಯಾಮಿಲಿ ಪ್ರೇಕ್ಷಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್ ಆಗುತ್ತಿದೆ.

‘ಪ್ರೇಮದ ಊರಲಿ’ ಸಿನಿಮಾಗೆ ಸಿಕ್ತು ಉತ್ತಮ ಪ್ರತಿಕ್ರಿಯೆ; ಏರಿಕೆ ಕಂಡ ಶೋಗಳ ಸಂಖ್ಯೆ
Premada Oorali Poster

Updated on: Sep 29, 2026 | 4:51 PM

ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ. ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುತ್ತಿಲ್ಲ ಎಂಬ ಮಾತುಗಳ ನಡುವೆಯೇ, ಕೌಟುಂಬಿಕ ಕಥಾಹಂದರ ಹೊಂದಿರುವ ‘ಪ್ರೇಮದ ಊರಲಿ’ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಿಲೀಸ್ ಆದ ಬಳಿಕ ಈ ಸಿನಿಮಾಗೆ ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ‘ಪ್ರೇಮದ ಊರಲಿ’ ಸಿನಿಮಾಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಯಿಂದಾಗಿ ಚಿತ್ರಮಂದಿರಗಳಲ್ಲಿ ಶೋಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

ಹಲವೆಡೆ ಹೌಸ್‌ಫುಲ್ ಪ್ರದರ್ಶನ ಕಾಣುವ ಮೂಲಕ ‘ಪ್ರೇಮದ ಊರಲಿ’ ಚಿತ್ರ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಭರವಸೆ ಮೂಡಿಸಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಒಂದು ಸುಂದರವಾದ ಪ್ರೇಮಕಥೆ ಇದೆ. ಭಾವನಾತ್ಮಕವಾದ ಹಳ್ಳಿಯ ಕಹಾನಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಹಚ್ಚಹಸಿರಿನ ಗ್ರಾಮೀಣ ಪರಿಸರದಲ್ಲಿ ಸಾಗುವ ‘ಪ್ರೇಮದ ಊರಲಿ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಕೌಟುಂಬಿಕ ಸಂಬಂಧಗಳು, ಮನುಷ್ಯತ್ವ ಹಾಗೂ ಮುಗ್ಧ ಪ್ರೀತಿಯ ಸೂಕ್ಷ್ಮ ಎಳೆಗಳನ್ನು ಸುಂದರವಾಗಿ ಈ ಸಿನಿಮಾ ತೆರೆದಿಟ್ಟಿದೆ. ಫ್ಯಾನ್ ಇಂಡಿಯಾ ಚಿತ್ರಗಳ ಅಬ್ಬರ ಹಾಗೂ ಆ್ಯಕ್ಷನ್ ಸಿನಿಮಾಗಳ ಆರ್ಭಟದ ನಡುವೆಯೂ ಈ ಸರಳವಾದ ಸಿನಿಮಾಗೆ ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ.

‘ಪ್ರೇಮದ ಊರಲಿ’ ಸಿನಿಮಾದಲ್ಲಿ ನಾಯಕನಾಗಿ ಶ್ರೀರಾಮ್, ನಾಯಕಿಯರಾಗಿ ರಮಿಕಾ ಶಿವು ಮತ್ತು ತಪಸ್ವಿನಿ ಪೂಣಚ್ಚ ಅಭಿನಯಿಸಿದ್ದಾರೆ. ತಮ್ಮ ಸಹಜಾಭಿನಯದ ಮೂಲಕ ಪಾತ್ರಗಳಿಗೆ ಅವರು ಜೀವ ತುಂಬಿದ್ದಾರೆ. ಹಿರಿಯ ನಟ ರಂಗಾಯಣ ರಘು ಅವರು ಭಾವನಾತ್ಮಕ ಸನ್ನಿವೇಶಗಳಲ್ಲಿ ಗಮನ ಸೆಳೆಯುವಂತೆ ನಟಿಸಿದ್ದಾರೆ. ತಾಂತ್ರಿಕವಾಗಿಯೂ ಸಿನಿಮಾ ಉತ್ತಮವಾಗಿದೆ.

ಇದನ್ನೂ ಓದಿ: ಚಿತ್ರ ವಿಮರ್ಶೆ: ಹಳ್ಳಿಯ ಪ್ರೇಮಕಥೆ ಇರುವ ಭಾವುಕ ಸಿನಿಮಾ ‘ಪ್ರೇಮದ ಊರಲಿ’

ಸುನಾದ್ ಗೌತಮ್ ಅವರ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕುಟುಂಬ ಸಮೇತರಾಗಿ ನೋಡಬಹುದಾದ ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಆಗುತ್ತಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದರಿಂದ ಚಿತ್ರಮಂದಿರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us