‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ಗಳಿಸಿದ್ದು ನಿಜವೇ? ನಿರ್ದೇಶಕ ಹೇಳಿದ್ದೇನು?

‘ಪ್ರೇಮದ ಊರಲಿ’ ಸಿನಿಮಾ ಅನ್ನು ಕೆಲವೆಡೆಯಂತೂ ಜನ ಚಿತ್ರಮಂದಿರಗಳಲ್ಲಿ ನೆಲದ ಮೇಲೆ ಕೂತು ಸಿನಿಮಾ ನೋಡುತ್ತಿದ್ದಾರೆ. ಬಾಕ್ಸ್ ಆಫೀಸ್​​ನಲ್ಲೂ ಸಹ ಈ ಸಿನಿಮಾ ದಾಖಲೆಗಳನ್ನು ಬರೆಯುತ್ತಿದೆ. ಕೆಲ ವರದಿಗಳ ಪ್ರಕಾರ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 120 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಬಗ್ಗೆ ಸಿನಿಮಾದ ನಿರ್ದೇಶಕ ಮನೋಜ್ ಕುಮಾರ್ ಟಿವಿ9 ಜೊತೆಗೆ ಮಾತನಾಡಿದ್ದು, ಸ್ಪಷ್ಟನೆ ನೀಡಿದ್ದಾರೆ.

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ಗಳಿಸಿದ್ದು ನಿಜವೇ? ನಿರ್ದೇಶಕ ಹೇಳಿದ್ದೇನು?
Premada Oorali

Updated on: Oct 30, 2026 | 8:00 PM

ಮುಖ್ಯಾಂಶಗಳು

  • ‘ಪ್ರೇಮದ ಊರಲಿ’ ಸಿನಿಮಾ ಗಳಿಕೆ ಬಗ್ಗೆ ಮಾತು
  • 100 ಕೋಟಿ ಗಳಿಸಿದೆ ಎನ್ನಲಾಗುತ್ತಿದೆ
  • ಆದರೆ ನಿರ್ದೇಶಕ ಹೇಳುತ್ತಿರುವುದೇ ಬೇರೆ

‘ಪ್ರೇಮದ ಊರಲಿ’ ಸಿನಿಮಾ ರಾಜ್ಯದಾದ್ಯಂತ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆಗಿ ತಿಂಗಳಿಗೂ ಹೆಚ್ಚು ಸಮಯ ಆಗಿದ್ದರೂ ಸಹ ಈಗಲೂ ಸಹ ಹಲವಾರು ಕಡೆ ತುಂಬಿದ ಗೃಹಗಳ ಪ್ರದರ್ಶನವನ್ನು ಸಿನಿಮಾ ಕಾಣುತ್ತಿದೆ. ಕೆಲವೆಡೆಯಂತೂ ಜನ ಚಿತ್ರಮಂದಿರಗಳಲ್ಲಿ ನೆಲದ ಮೇಲೆ ಕೂತು ಸಿನಿಮಾ ನೋಡುತ್ತಿದ್ದಾರೆ. ಬಾಕ್ಸ್ ಆಫೀಸ್​​ನಲ್ಲೂ ಸಹ ಈ ಸಿನಿಮಾ ದಾಖಲೆಗಳನ್ನು ಬರೆಯುತ್ತಿದೆ. ಕೆಲ ವರದಿಗಳ ಪ್ರಕಾರ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 120 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಬಗ್ಗೆ ಸಿನಿಮಾದ ನಿರ್ದೇಶಕ ಮನೋಜ್ ಕುಮಾರ್ ಟಿವಿ9 ಜೊತೆಗೆ ಮಾತನಾಡಿದ್ದು, ಸ್ಪಷ್ಟನೆ ನೀಡಿದ್ದಾರೆ.

‘ಪ್ರೇಮದ ಊರಲಿ’ ಸಿನಿಮಾ ತಂಡ ಟಿವಿ9 ಆಯೋಜಿಸಿದ್ದ ಎಕ್ಸ್ಪೋನಲ್ಲಿ ವಿಶೇಷ ಅತಿಥಿಗಳಾಗಿ ಭಾಗಿ ಆಗಿದ್ದರು. ಈ ವೇಳೆ ತಮ್ಮ ಸಿನಿಮಾದ ಅದ್ಧೂರಿ ಪ್ರದರ್ಶನದ ಬಗ್ಗೆಯೂ ಮಾತನಾಡಿದ ತಂಡ ಸಂತಸ ವ್ಯಕ್ತಪಡಿಸಿತು. ಇದೇ ಸಂದರ್ಭದಲ್ಲಿ ಸಿನಿಮಾ 100 ಕೋಟಿ ಗಳಿಸಿರುವ ಬಗ್ಗೆ ಮಾತನಾಡಿದ ನಿರ್ದೇಶಕ ಮನೋಜ್ ಕುಮಾರ್, ‘ಮಾಧ್ಯಮಗಳಲ್ಲಿ 100 ಕೋಟಿ ಕಲೆಕ್ಷನ್ ಎಂದು ಹೇಳುತ್ತಿದ್ದಾರೆ. ಆದರೆ ನಮಗೆ ನಿಜವಾಗಿಯೂ ಅದರ ಬಗ್ಗೆ ಗೊತ್ತಿಲ್ಲ. ನಮಗೆ ಸಂಪೂರ್ಣ ಹಣಕಾಸಿನ ಮಾಹಿತಿ ಬಂದಿಲ್ಲ’ ಎಂದರು.

ಮುಂದುವರೆದು ಮಾತನಾಡಿದ ನಿರ್ದೇಶಕ ಮನೋಜ್, ‘ಸಿನಿಮಾ ಚಿತ್ರಮಂದಿರಗಳಲ್ಲಿ ತಮ್ಮ ಓಟ ಮುಗಿಸಿದ ಮೇಲೆ ಬಹುಷಃ ನಮಗೆ ಪೂರ್ಣ ಅಂಕಿ-ಅಂಶ ಸಿಗಬಹುದು, ಆದರೆ ಎಷ್ಟು ಹಣ ಮಾಡಿದೆ. ನೂರು ಕೋಟಿ ಮಾಡಿದೆಯಾ? ಇಲ್ಲವಾ? ಇದೆಲ್ಲ ನಮಗೆ ಖಂಡಿತವಾಗಿಯೂ ಮಾಹಿತಿ ಇಲ್ಲ’ ಎಂದಿದ್ದಾರೆ. ಆ ಮೂಲಕ ಸಿನಿಮಾದ ಗಳಿಕೆಯ ಬಗ್ಗೆ ಪೂರ್ಣ ಸ್ಪಷ್ಟತೆ ನಿರ್ದೇಶಕರು, ನಿರ್ಮಾಪಕರಿಗೂ ಇಲ್ಲ ಎಂದು ಮನೋಜ್ ಹೇಳಿದ್ದಾರೆ.

ಇದನ್ನೂ ಓದಿ:ಟಿವಿ9 ಎಕ್ಸ್​​ಪೋದಲ್ಲಿ ತಪಸ್ವಿನಿ-ಶ್ರೀರಾಮ್; ಪ್ರೇಮದ ಊರಲಿ ಸಕಸ್ಸ್ ಸೆಲೆಬ್ರೇಷನ್

ಈಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ‘ಪ್ರೇಮದ ಊರಲಿ’ ಸಿನಿಮಾ ಪ್ರಸ್ತುತ 128 ಕೋಟಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಸೆಪ್ಟೆಂಬರ್ 25ಕ್ಕೆ ಬಿಡುಗಡೆ ಆದ ಸಣ್ಣ ಬಜೆಟ್​​ನ ಈ ಸಿನಿಮಾ, ಆರಂಭದಲ್ಲಿ ಚಿತ್ರಮಂದಿರಗಳಲ್ಲಿ ನಿಲ್ಲಲು ಬಲು ಕಷ್ಟಪಟ್ಟಿತ್ತು. ಜನರೇ ಮಾಡಿದ ಪ್ರಚಾರದಿಂದಾಗಿ ಸಿನಿಮಾ ದಿನದಿಂದ ದಿನಕ್ಕೆ ಶೋಗಳನ್ನು ಹೆಚ್ಚಿಸಿಕೊಳ್ಳುತ್ತಲೇ ಹೋಯ್ತು. ಈಗ ಇಡೀ ರಾಜ್ಯದಾದ್ಯಂತ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಹಲವು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಮತ್ತೆ ಜೀವ ತುಂಬಿದೆ ಈ ಸಿನಿಮಾ.

‘ಪ್ರೇಮದ ಊರಲಿ’ ಸಿನಿಮಾ ಅನ್ನು ಮನೋಜ್ ಕುಮಾರ್ ನಿರ್ದೇಶಿಸಿದ್ದು, ಸಿನಿಮಾನಲ್ಲಿ ರಂಗಾಯಣ ರಘು, ಶ್ರೀರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು ಅವರುಗಳು ಮುಖ್ಯ ಪಾತ್ರಗಳಲ್ಲಿ ನಟನೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us