AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?

Pushpa 2 | KGF Chapter 2: ‘ಕೆಜಿಎಫ್​: ಚಾಪ್ಟರ್​ 2’ ಮಾಡಿದ ದಾಖಲೆಗಳನ್ನು ಮುರಿಯಲು ‘ಪುಷ್ಪ 2’ ಚಿತ್ರಕ್ಕೆ ಸಾಧ್ಯವೇ? ಈ ಕುರಿತು ಫ್ಯಾನ್ಸ್​ ಚರ್ಚೆ ಮಾಡುತ್ತಿದ್ದಾರೆ.

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?
ಅಲ್ಲು ಅರ್ಜುನ್, ಯಶ್
TV9 Web
| Edited By: |

Updated on: Apr 16, 2022 | 9:24 AM

Share

ಈಗ ದೇಶಾದ್ಯಂತ ದಕ್ಷಿಣ ಭಾರತದ ಸಿನಿಮಾಗಳು ಸೌಂಡು ಮಾಡುತ್ತಿವೆ. ‘ಕೆಜಿಎಫ್​ 2’, ‘ಆರ್​ಆರ್​ಆರ್​’, ‘ಪುಷ್ಪ’ ಮುಂತಾದ ಸಿನಿಮಾಗಳ ಅಬ್ಬರದಿಂದಾಗಿ ಸೌತ್​ ಸಿನಿಮಾ ಇಂಡಸ್ಟ್ರಿಗೆ ದೊಡ್ಡ ಬಲ ಬಂದಿದೆ. ಈ ಚಿತ್ರಗಳ ಎದುರು ಬಾಲಿವುಡ್​ ಮಂದಿ ಮಂಕಾಗಿದ್ದಾರೆ. ದಕ್ಷಿಣದ ನಿರ್ದೇಶಕರು ಮಾಡುವ ಸಿನಿಮಾಗಳನ್ನು ಕಂಡು ಹಿಂದಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಏ.14ರಂದು ತೆರೆಕಂಡ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಸೂಪರ್​ ಹಿಟ್​ ಆಗಿದೆ ಮೊದಲ ದಿನವೇ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಬರೋಬ್ಬರಿ 134.5 ಕೋಟಿ ರೂಪಾಯಿ ಕಮಾಯಿ ಮಾಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಈ ಗೆಲುವಿನಿಂದಾಗಿ ‘ಪುಷ್ಪ 2’ (Pushpa 2) ತಂಡಕ್ಕೆ ಹೊಸದೊಂದು ಚಿಂತೆ ಶುರುವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಸಿನಿಪ್ರಿಯರು ಈ ರೀತಿ ಚರ್ಚೆ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ 2’ ಚಿತ್ರತಂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಎಲ್ಲರಿಗೂ ನೆನಪಿರಬಹುದು.. ‘ಪುಷ್ಪ’ ಸಿನಿಮಾ ತೆರೆಕಾಣುವಾಗ ‘ಒಂದು ಪುಷ್ಪ ಚಿತ್ರ 10 ಕೆಜಿಎಫ್​ ಸಿನಿಮಾಗೆ ಸಮ’ ಎಂಬ ಮಾತು ವೈರಲ್​ ಆಗಿತ್ತು. ಆ ಕಾರಣಕ್ಕಾಗಿ ‘ಪುಷ್ಪ’ ವರ್ಸಸ್ ‘ಕೆಜಿಎಫ್​’ ಎನ್ನುವ ಚರ್ಚೆ ಸೋಶಿಯಲ್​ ಮೀಡಿಯಾದಲ್ಲಿ ನಡೆದಿತ್ತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಬಿಡುಗಡೆ ಆಗಿರುವ ಸಂದರ್ಭದಲ್ಲಿ ಮತ್ತೆ ಅದೇ ವಿಷಯ ಮುನ್ನೆಲೆಗೆ ಬಂದಿದೆ.

‘ಕೆಜಿಎಫ್​: ಚಾಪ್ಟರ್​ 1’ ಮಾಡಿದ್ದ ದಾಖಲೆಯನ್ನು ‘ಪುಷ್ಪ’ ಸಿನಿಮಾ ಅಳಿಸಿ ಹಾಕಿತು ಎಂಬುದು ನಿಜ. ಆದರೆ ‘ಪುಷ್ಪ’ ಚಿತ್ರದ ಎಲ್ಲ ದಾಖಲೆಗಳನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನೆಲಸಮ ಮಾಡಿ ಹಾಕಿದೆ. ಮೊದಲ ದಿನವೇ ಹಿಂದಿ ಮಾರುಕಟ್ಟೆಯಲ್ಲಿ 53.95 ಕೋಟಿ ಹಾಗೂ ಒಟ್ಟಾರೆ ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ 134.5 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಸುನಾಮಿಯನ್ನೇ ಸೃಷ್ಟಿಸಿದೆ. ಇದರಿಂದ ‘ಪುಷ್ಪ 2’ ತಂಡಕ್ಕೆ ಹೊಸ ಟಾರ್ಗೆಟ್​ ಹಾಕಿಕೊಟ್ಟಂತೆ ಆಗಿದೆ. ಇದನ್ನು ಬೀಟ್​ ಮಾಡಲು ‘ಪುಷ್ಪ 2’ ತಂಡಕ್ಕೆ ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ.

ಅಲ್ಲು ಅರ್ಜುನ್​ ಅವರಿಗೂ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಹಾಗಿದ್ದರೂ ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಿರುವ ಸಾಧನೆಯನ್ನು ‘ಪುಷ್ಪ 2’ ತಂಡ ಬೀಟ್​ ಮಾಡಬೇಕು ಎಂದರೆ ಸುಲಭದ ಮಾತಲ್ಲ. ಹಾಗಾಗಿ ನಿರ್ದೇಶಕ ಸುಕುಮಾರ್​ ಸೇರಿದಂತೆ ಇಡೀ ತಂಡಕ್ಕೆ ಟೆನ್ಷನ್​ ಶುರುವಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಅಬ್ಬರ ಸದ್ಯಕ್ಕಂತೂ ನಿಲ್ಲುವುದಿಲ್ಲ. ಎರಡನೇ ದಿನವೂ ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್​ ಆದ್ದರಿಂದ ದುಪ್ಪಟ್ಟು ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಆ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅದ್ಭುತವನ್ನೇ ಸೃಷ್ಟಿ ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿನಿಂದಾಗಿ ಯಶ್​ ಹವಾ ಹೆಚ್ಚಿದೆ. ದೇಶಾದ್ಯಂತ ಅವರ ಮಾರುಕಟ್ಟೆ ವಿಸ್ತಾರ ಆಗಿದೆ. ಅಷ್ಟೇ ಅಲ್ಲ, ವಿದೇಶದಲ್ಲೂ ಈ ಚಿತ್ರ ಭರ್ಜರಿ ಕಮಾಯಿ ಮಾಡುತ್ತಿದೆ. ಅಮೆರಿಕಾ, ಕೆನಡಾ ಮುಂತಾದ ಕಡೆ ಇರುವ ಕನ್ನಡಿಗರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

KGF Chapter 2 Collection: ಫಸ್ಟ್​ ಡೇ 134.5 ಕೋಟಿ ರೂ. ಕಲೆಕ್ಷನ್​ ಮಾಡಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಗಳಿಸಿದ್ದು ಇನ್ನೂ ಹೆಚ್ಚು

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ