AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಂ ನನ್ನ ಆಲ್​ ಟೈಮ್​ ಫೇವರಿಟ್’; ಹಾಡಿ ಹೊಗಳಿದ ಪ್ರಥ್ವಿರಾಜ್ ಸುಕುಮಾರನ್

ಮಾಲಿವುಡ್ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರು ‘ಓಂ’ ಚಿತ್ರ ಹೊಗಳಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಈ ಚಿತ್ರ ಅವರ ಆಲ್ ಟೈಮ್ ಫೇವರಿಟ್. ಭಾರತದ 5 ಪ್ರಮುಖ ಚಿತ್ರರಂಗದ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಕನ್ನಡದಿಂದ 'ಓಂ' ಚಿತ್ರವನ್ನು ಶ್ಲಾಘಿಸಿರುವ ಅವರ ವಿಡಿಯೋ ಈಗ ವೈರಲ್ ಆಗಿದೆ.

‘ಓಂ ನನ್ನ ಆಲ್​ ಟೈಮ್​ ಫೇವರಿಟ್’; ಹಾಡಿ ಹೊಗಳಿದ ಪ್ರಥ್ವಿರಾಜ್ ಸುಕುಮಾರನ್
ಶಿವಣ್ಣ-ರಣಬೀರ್
ರಾಜೇಶ್ ದುಗ್ಗುಮನೆ
|

Updated on: Jul 20, 2026 | 7:31 AM

Share

ಮುಖ್ಯಾಂಶಗಳು

  • ಭಾರತದ ಟಾಪ್ 5 ಸಿನಿಮಾಗಳ ಪಟ್ಟಿಯಲ್ಲಿ 'ಓಂ'
  • ಕನ್ನಡ ಚಿತ್ರವನ್ನು ಹೆಮ್ಮೆಯಿಂದ ಹೆಸರಿಸಿದ ಪೃಥ್ವಿರಾಜ್
  • ಸ್ಯಾಂಡಲ್‌ವುಡ್ ಇತಿಹಾಸದ ಮೈಲಿಗಲ್ಲು

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಹಲವು ದಾಖಲೆ ಬರೆದಿದ್ದ ಖ್ಯಾತಿ ‘ಓಂ’ ಚಿತ್ರಕ್ಕೆ ಇದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಈ ಸಿನಿಮಾ ಬಗ್ಗೆ ಮಾಲಿವುಡ್‌ನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಓಂ’ ಚಿತ್ರ ತಮ್ಮ ಆಲ್ ಟೈಮ್ ಫೇವರಿಟ್ ಸಿನಿಮಾಗಳಲ್ಲಿ ಒಂದು ಎಂದು ಹೇಳಿಕೊಂಡಿದ್ದಾರೆ.

ಭಾರತೀಯ ಚಿತ್ರರಂಗದ 5 ಪ್ರಮುಖ ಭಾಷೆಗಳ ತಲಾ ಒಂದು ಸಿನಿಮಾವನ್ನು ಆಯ್ಕೆ ಮಾಡುವಾಗ, ಕನ್ನಡದಿಂದ ಅವರು ‘ಓಂ’ ಚಿತ್ರವನ್ನು ಹೆಮ್ಮೆಯಿಂದ ಹೆಸರಿಸಿದ್ದಾರೆ. ಉಪೇಂದ್ರ ಅವರು ಈ ಚಿತ್ರವನ್ನು ಅದ್ಭುತವಾಗಿ ಬರೆದು ನಿರ್ದೇಶಿಸಿದ್ದಾರೆ ಹಾಗೂ ಶಿವರಾಜ್‌ಕುಮಾರ್ ಅವರ ನಟನೆ ಅಪ್ರತಿಮವಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಓಂ’ ಸಿನಿಮಾದ ಲೆಗಸಿ ಮತ್ತು ಇತಿಹಾಸ

1995ರಲ್ಲಿ ಬಿಡುಗಡೆಯಾದ ‘ಓಂ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು. ಅಂಡರ್ ವರ್ಲ್ಡ್ ಮತ್ತು ಪ್ರೇಮಕಥೆಯನ್ನು ಬೆರೆಸಿ ಉಪೇಂದ್ರ ಅವರು ಮಾಡಿದ ಈ ಪ್ರಯೋಗ ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್‌ವುಡ್ ಕಡೆ ತಿರುಗಿ ನೋಡುವಂತೆ ಮಾಡಿತ್ತು. ಸಿನಿಮಾದಲ್ಲಿ ಅಂದಿನ ಕಾಲದ ರಿಯಲ್ ರೌಡಿಗಳನ್ನೇ ಬಳಸಿಕೊಂಡಿದ್ದು ಈ ಚಿತ್ರದ ದೊಡ್ಡ ಹೈಲೈಟ್ ಆಗಿತ್ತು. ಇದು ಪ್ರೇಕ್ಷಕರಿಗೆ ಹೊಸ ರೀತಿಯ ಥ್ರಿಲ್ ನೀಡಿತು.

ಇದನ್ನೂ ಓದಿ: ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ

ಶಿವರಾಜ್‌ಕುಮಾರ್ ಅವರ ಕೆರಿಯರ್‌ನಲ್ಲಿ ಸತ್ಯ ಪಾತ್ರ ಅತಿ ದೊಡ್ಡ ಬ್ರೇಕ್ ನೀಡಿತು. ಅವರ ಆವೇಶ, ಆ್ಯಕ್ಷನ್ ಮತ್ತು ಭಾವನಾತ್ಮಕ ನಟನೆಗೆ ಇಂದಿಗೂ ಕೋಟ್ಯಂತರ ಅಭಿಮಾನಿಗಳಿದ್ದಾರೆ. ನಾದಬ್ರಹ್ಮ ಹಂಸಲೇಖ ಅವರ ಸಂಗೀತ ನಿರ್ದೇಶನದ ಹೇ ದಿನಕರ, ‘ಓ ಗುಲಾಬಿಯೇ’ ಹಾಡುಗಳು ಎವರ್‌ಗ್ರೀನ್ ಆಗಿ ಉಳಿದಿವೆ.

ಮರುಬಿಡುಗಡೆಯ ದಾಖಲೆ

‘ಓಂ’ ಸಿನಿಮಾ ಬರೋಬ್ಬರಿ 500ಕ್ಕೂ ಹೆಚ್ಚು ಬಾರಿ ಮರುಬಿಡುಗಡೆಗೊಂಡು ದಾಖಲೆ ಬರೆದಿದೆ. ಚಿತ್ರಮಂದಿರಗಳಲ್ಲಿ ಪ್ರತಿ ಬಾರಿ ಬಿಡುಗಡೆಯಾದಾಗಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವುದು ಈ ಚಿತ್ರದ ಲೆಗಸಿಗೆ ಸಾಕ್ಷಿಯಾಗಿದೆ. ಪೃಥ್ವಿರಾಜ್ ಸುಕುಮಾರನ್ ಅವರಂತಹ ಪ್ಯಾನ್ ಇಂಡಿಯಾ ಮಟ್ಟದ ಸ್ಟಾರ್ ನಟ ‘ಓಂ’ ಚಿತ್ರವನ್ನು ಭಾರತದ ಅತ್ಯುತ್ತಮ ಸಿನಿಮಾಗಳ ಪಟ್ಟಿಯಲ್ಲಿ ಗುರುತಿಸಿರುವುದು ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ರಶ್ನೆ: ಓಂ ರಿಲೀಸ್ ಆಗಿದ್ದು ಯಾವಾಗ? ಉತ್ತರ: 1995

ಪ್ರಶ್ನೆ: ಸಿನಿಮಾ ಎಷ್ಟು ಬಾರಿ ರೀ ರಿಲೀಸ್ ಆಗಿದೆ? ಉತ್ತರ: 500ಕ್ಕೂ ಹೆಚ್ಚು ಬಾರಿ

ಪ್ರಶ್ನೆ: ಓಂ ಸಿನಿಮಾ ನಿರ್ದೇಶನ ಯಾರದ್ದು? ಉತ್ತರ: ಉಪೇಂದ್ರ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ