AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್​ಗೆ ಜೋಡಿಯಾದ ಪ್ರಿಯಾ ಆನಂದ್

ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗ ನಾಯಕಿ ಆಯ್ಕೆ ಆಗಿದೆ. ಬಹುಭಾಷಾ ನಟಿ ಪ್ರಿಯಾ ಆನಂದ್​ ಅವರು ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ಪ್ರಿಯಾ ಆನಂದ್​ ಅವರ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಈ ಸಿನಿಮಾಗೆ ಮೂರನೇ ಹಂತದ ಚಿತ್ರೀಕರಣ ಪ್ರಾರಂಭ ಆಗಲಿದೆ.

‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್​ಗೆ ಜೋಡಿಯಾದ ಪ್ರಿಯಾ ಆನಂದ್
Priya Anand
ಮದನ್​ ಕುಮಾರ್​
|

Updated on: Jan 01, 2025 | 7:59 PM

Share

ನಟ ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ ಚೈತನ್ಯ ಅವರ ಕಾಂಬಿನೇಷನ್​ನಲ್ಲಿ ‘ಬಲರಾಮನ ದಿನಗಳು’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ‘ಪದ್ಮಾವತಿ ಫಿಲ್ಮ್ಸ್​’ ಮೂಲಕ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್ ಅವರು ಬಂಡವಾಳ ಹೂಡುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ‘ಆ ದಿನಗಳು’ ಖ್ಯಾತಿಯ ನಿರ್ದೇಶಕ ಕೆ‌.ಎಂ. ಚೈತನ್ಯ ಅವರು ಆ್ಯಕ್ಷನ್​-ಕಟ್ ಹೇಳುತ್ತಿರುವ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆ ಹೆಚ್ಚಿದೆ. ಇದು ವಿನೋದ್ ಪ್ರಭಾಕರ್ ಹೀರೋ ಆಗಿ ಅಭಿನಯಿಸುತ್ತಿರುವ 25ನೇ ಸಿನಿಮಾ ಎಂಬುದು ವಿಶೇಷ. ಈ ಚಿತ್ರದ ಪಾತ್ರವರ್ಗಕ್ಕೆ ನಟಿ ಪ್ರಿಯಾ ಆನಂದ್ ಅವರು ಸೇರ್ಪಡೆ ಆಗಿದ್ದಾರೆ.

ವಿನೋದ್ ಪ್ರಭಾಕರ್ ಅಭಿಮಾನಿಗಳು ‘ಬಲರಾಮನ ದಿನಗಳು’ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಪ್ರಿಯಾ ಆನಂದ್ ಅವರು ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈಗಾಗಲೇ ಕನ್ನಡದಲ್ಲಿ ‘ರಾಜಕುಮಾರ’, ‘ಜೇಮ್ಸ್’, ‘ಆರೆಂಜ್’, ‘ಕರಟಕ ದಮನಕ’ ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ಈಗ ‘ಬಲರಾಮನ ದಿನಗಳು’ ಸಿನಿಮಾಗೂ ನಾಯಕಿ ಆಗಿದ್ದಾರೆ.

ಹೊಸ ವರ್ಷದ ಪ್ರಯುಕ್ತ ಇಂದು (ಜನವರಿ 1) ಪೋಸ್ಟರ್ ರಿಲೀಸ್​ ಮಾಡುವ ಮೂಲಕ ಪ್ರಿಯಾ ಆನಂದ್ ಅವರನ್ನು ಚಿತ್ರತಂಡಕ್ಕೆ ಸ್ವಾಗತಿಸಲಾಗಿದೆ. 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ತೋರಿಸಲಾಗುವುದು. ಕೆಲವು ದಿನಗಳ ಹಿಂದೆ ವಿನೋದ್ ಪ್ರಭಾಕರ್ ಅವರ ಜನ್ಮದಿನದ ಪ್ರಯುಕ್ತ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿತ್ತು. ಅಭಿಮಾನಿಗಳಿಗೆ ಆ ಲುಕ್ ಇಷ್ಟ ಆಗಿತ್ತು.

ಇದನ್ನೂ ಓದಿ: ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ಗೆ ಗೃಹ ಸಚಿವರ ಶುಭಾಶಯ

‘ಬಲರಾಮನ ದಿನಗಳು’ ಸಿನಿಮಾದಲ್ಲಿ ಒಂದಷ್ಟು ವಿಶೇಷತೆಗಳಿವೆ. ‘ಅಟ್ಟಕತ್ತಿ’, ‘ಕಬಾಲಿ’, ‘ಕಾಲ’, ‘ಭೈರವ’, ‘ಕಲ್ಕಿ’, ‘ದಸರಾ’ ಮುಂತಾದ ಯಶಸ್ವಿ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಸಂತೋಷ್ ನಾರಾಯಣನ್ ಅವರು ‘ಬಲರಾಮನ ದಿನಗಳು’ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರ 51ನೇ ಚಿತ್ರ ಸಿನಿಮಾ. ಈ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ 2 ಹಂತದ ಶೂಟಿಂಗ್​ ಮುಗಿದಿದೆ. ಜನವರಿ 15ರಂದು 3ನೇ ಹಂತದ ಚಿತ್ರೀಕರಣ ಶುರು ಆಗಲಿದೆ.‌

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ