ಸ್ಕೂಲ್​ ಟೀಚರ್​ ಆದ್ರು ಪ್ರಿಯಾಂಕಾ ಉಪೇಂದ್ರ; ‘ಮಿಸ್​ ನಂದಿನಿ’ ಚಿತ್ರದಲ್ಲಿ ಹಿರಿಯ ನಟಿ ಭವ್ಯಾ ಪಾತ್ರ ಏನು?

ಇದೇ ಮೊದಲ ಬಾರಿಗೆ ಶಾಲೆಯ ಶಿಕ್ಷಕಿಯ ಪಾತ್ರದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ..

ಸ್ಕೂಲ್​ ಟೀಚರ್​ ಆದ್ರು ಪ್ರಿಯಾಂಕಾ ಉಪೇಂದ್ರ; ‘ಮಿಸ್​ ನಂದಿನಿ’ ಚಿತ್ರದಲ್ಲಿ ಹಿರಿಯ ನಟಿ ಭವ್ಯಾ ಪಾತ್ರ ಏನು?
ಪ್ರಿಯಾಂಕಾ ಉಪೇಂದ್ರ, ಭವ್ಯಾ
Follow us
TV9 Web
| Updated By: ಮದನ್​ ಕುಮಾರ್​

Updated on: Jun 05, 2022 | 7:30 AM

ನಟಿ ಪ್ರಿಯಾಂಕಾ ಉಪೇಂದ್ರ ಅವರು ಒಂದಕ್ಕಿಂತ ಒಂದು ಭಿನ್ನ ಕಥಾಹಂದರದ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಟಿಸುತ್ತಿರುವ ‘ಮಿಸ್​ ನಂದಿನಿ’ ಸಿನಿಮಾ (Miss Nandini Movie) ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಭರದಿಂದ ಶೂಟಿಂಗ್​ ಮಾಡಲಾಗುತ್ತಿದೆ. ಜೊತೆಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಕೂಡ ಚುರುಕಿನಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಸ್ಕೂಲ್​ ಟೀಚರ್​ ಪಾತ್ರ ಮಾಡುತ್ತಿದ್ದಾರೆ. ಸದ್ಯ ಇದರ ಶೂಟಿಂಗ್​ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ತಲುಪಿದೆ. ಗುರುದತ್ತ ಎಸ್.ಆರ್. ಅವರು ‘ಮಿಸ್​ ನಂದಿನಿ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಕಡೂರು, ಚಿಕ್ಕಮಗಳೂರು, ಬಾಗಲಕೋಟೆ, ಬೆಂಗಳೂರು ಮುಂತಾದ ಕಡೆಗಳಲ್ಲಿ 35 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಸರ್ಕಾರಿ ಕನ್ನಡ ಶಾಲೆ (Government School) ಉಳಿಸಬೇಕು ಎನ್ನುವ ಪರಿಕಲ್ಪನೆಯೊಂದಿಗೆ ಚಿತ್ರದ ಕಥೆ ಸಾಗುತ್ತದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮಿಸ್​ ನಂದಿನಿ’ ಸಿನಿಮಾದಲ್ಲಿ ಹಿರಿಯ ನಟಿ ಭವ್ಯಾ ಕೂಡ ಅಭಿನಯಿಸುತ್ತಿದ್ದಾರೆ. ವಿದ್ಯಾರ್ಥಿಯ ತಾಯಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅವರ ಜೊತೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಪ್ರಿಯಾಂಕಾ ಉಪೇಂದ್ರ ಖುಷಿ ಆಗಿದ್ದಾರೆ. ಡ್ಯಾನಿ ಕುಟ್ಟಪ್ಪ, ರತನ್, ಅನ್‌ಮೋಲ್, ಸೃಷ್ಟಿ, ಶ್ರುತಿ, ಅಪ್ಪಣ್ಣ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸಾಯಿ ಸರ್ವೇಶ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಾಡುಗಳಿಗೆ ವಿಜಯ್​ ಪ್ರಕಾಶ್, ವಾಸುಕಿ ವೈಭವ್, ಅನುರಾಧಾ ಭಟ್ ಅವರು ಧ್ವನಿಯಾಗಿದ್ದಾರೆ.

ಇದನ್ನೂ ಓದಿ: ‘ನಮ್ಮ ಬಾಡಿ ಬಗ್ಗೆಯೂ ಕಮೆಂಟ್​ ಮಾಡ್ತಾರೆ, ಅದಕ್ಕೆ ತಲೆ ಕೆಡಿಸಿಕೊಳ್ಳಬಾರದು’: ಪ್ರಿಯಾಂಕಾ ಉಪೇಂದ್ರ

ಇದನ್ನೂ ಓದಿ
Image
ಮೇ 23ರಿಂದ ‘ಅರ್ಧಾಂಗಿ’ ಸೀರಿಯಲ್​ ಶುರು; ಹೊಸ ಧಾರಾವಾಹಿಗೆ ‘ಸ್ಟಾರ್​’ ಕಳೆ ತಂದ ಪ್ರಿಯಾಂಕಾ ಉಪೇಂದ್ರ
Image
‘ನಮ್ಮ ಬಾಡಿ ಬಗ್ಗೆಯೂ ಕಮೆಂಟ್​ ಮಾಡ್ತಾರೆ, ಅದಕ್ಕೆ ತಲೆ ಕೆಡಿಸಿಕೊಳ್ಳಬಾರದು’: ಪ್ರಿಯಾಂಕಾ ಉಪೇಂದ್ರ
Image
ಮನೆಯಲ್ಲಿ ಎನರ್ಜಿ ಚೇಂಜ್​ ಆಗ್ಬೇಕು ಅಂದ್ರೆ ಏನು ಮಾಡ್ಬೇಕು?; ಪ್ರಿಯಾಂಕಾ ಉಪೇಂದ್ರ ಕೊಟ್ರು ಟಿಪ್ಸ್​
Image
‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

‘ಶ್ರೀ ವಿಜಯ್ ಫಿಲ್ಮ್ಸ್​’ ಬ್ಯಾನರ್​ ಮೂಲಕ ನೀಲಕಂಠ ಸ್ವಾಮಿ ಅವರು ‘ಮಿಸ್​ ನಂದಿನಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆಶಾ ಸಹ ನಿರ್ಮಾಪಕರು. ಈ ಸಿನಿಮಾದ ಕಥೆ ಎಲ್ಲ ರಾಜ್ಯಗಳಿಗೂ ಅನ್ವಯ ಆಗುವ ರೀತಿ ಇರುವುದರಿಂದ ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಭಾಷೆಯಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಒಟಿಟಿದಿಂದ ಬೇಡಿಕೆ ಬಂದಿದ್ದು, ಆ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ಉಪ್ಪಿ ಡೈರೆಕ್ಷನ್​ ಸಿನಿಮಾ ಟೈಟಲ್​ ಅರ್ಥವೇನು?; ಎಲ್ಲವನ್ನೂ ವಿವರಿಸಿದ ಪ್ರಿಯಾಂಕಾ ಉಪೇಂದ್ರ

‘ಬೆಂಗಳೂರಿನಿಂದ ಆಧುನಿಕ ಶಿಕ್ಷಕಿಯಾಗಿ ಸರ್ಕಾರಿ ಶಾಲೆಗೆ ಬಂದು ಪರಿವರ್ತನೆ ಮಾಡುವ ಪಾತ್ರದಲ್ಲಿ ನಟಿಸುತ್ತಿದ್ದೇನೆ. ನಾನು ಅಮೆರಿಕದ ಸರ್ಕಾರಿ ಶಾಲೆಯಲ್ಲಿ ಓದಿದವಳು. ಅಲ್ಲಿನ ಗುಣಮಟ್ಟ ಚೆನ್ನಾಗಿದೆ. ನಮ್ಮ ದೇಶದ ಸರ್ಕಾರಿ ಶಾಲೆಯಲ್ಲೂ ಅದು ಸಾಧ್ಯವಾಗಬೇಕು. ಈ ಸಿನಿಮಾದಲ್ಲಿ ಅರ್ಥಪೂರ್ಣ ಸಂದೇಶವನ್ನು ಹಾಸ್ಯದ ಅಂಶಗಳೊಂದಿಗೆ ಹೇಳಲಾಗುತ್ತಿದೆ’ ಎಂದಿದ್ದಾರೆ ಪ್ರಿಯಾಂಕಾ ಉಪೇಂದ್ರ. ನಾಗರಾಜ ವೀನಸ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ