1980 Teaser | ಪ್ರಿಯಾಂಕ ಉಪೇಂದ್ರ ನಟನೆಯ ‘1980 ಟೀಸರ್’ ರಿಲೀಸ್

Priyanka Upendra | ನಟಿ ಪ್ರಿಯಾಂಕ ಉಪೇಂದ್ರ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾದ ಮೂಲಕ ಎಲ್ಲರನ್ನು ಕುತೂಹಲಕ್ಕೆ ದೂಡಲು ಬರುತ್ತಿದ್ದಾರೆ. ಪ್ರಿಯಾಂಕ ನಟನೆಯ1980 Teaser ರಿಲೀಸ್ ಆಗಿದೆ. ರಾಜ್ ಕಿರಣ್ ಜೆ. ನಿರ್ದೇಶನದ 1980 ಚಿತ್ರದಲ್ಲಿ ನಟಿ ಪ್ರಿಯಾಂಕ ರೆಟ್ರೋ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1980 Teaser | ಪ್ರಿಯಾಂಕ ಉಪೇಂದ್ರ ನಟನೆಯ ‘1980 ಟೀಸರ್’ ರಿಲೀಸ್
1980 ಟೀಸರ್ ರಿಲೀಸ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 23, 2021 | 4:52 PM

ಹೊಸ ಹೊಸ ಪ್ರಯೋಗದ ಚಿತ್ರಗಳಲ್ಲಿ ನಟಿಸಿ ಜನರನ್ನು ರಂಜಿಸುವ ನಟಿ ಪ್ರಿಯಾಂಕ ಉಪೇಂದ್ರ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾದ ಮೂಲಕ ಎಲ್ಲರನ್ನು ಕುತೂಹಲಕ್ಕೆ ದೂಡಲು ಬರುತ್ತಿದ್ದಾರೆ. ಪ್ರಿಯಾಂಕ ನಟನೆಯ1980 Teaser ರಿಲೀಸ್ ಆಗಿದೆ. ರಾಜ್ ಕಿರಣ್ ಜೆ. ನಿರ್ದೇಶನದ 1980 ಚಿತ್ರದಲ್ಲಿ ನಟಿ ಪ್ರಿಯಾಂಕ ರೆಟ್ರೋ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಹಾರರ್ ಸಿನಿಮಾವಾಗಿದ್ದು ಜನರನ್ನು ಆಸನದ ತುದಿಯಲ್ಲಿ ಕೂರುವಂತೆ ಮಾಡುತ್ತದೆ ಎಂದರೆ ತಪ್ಪಾಗಲಾರದು. ಕೊರೊನಾ ಲಾಕ್​ಡೌನ್ ನಂತರ ಪ್ರಿಯಾಂಕ ಉಪೇಂದ್ರ ಅವರಿಗೆ ದೊರೆತ ಮೊದಲ ಸಿನಿಮಾ ಇದಾಗಿದೆ.

ಪೂಜಶ್ರೀ ಪ್ರೊಡಕ್ಷನ್ ಮತ್ತು ನೇಸರ ಪ್ರೊಡಕ್ಷನ್ ಬ್ಯಾನರ್​ನಡಿ ನಿರ್ಮಾಣವಾಗಿರುವ 1980 ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಸಿನಿಮಾ ರಾಜ್ ಕಿರಣ್ ಜೆ. ನಿರ್ದೇಶನದ ಕನ್ನಡದ ಮೊದಲ ಚಿತ್ರವಾಗಿದೆ. ಹಾಗಾಗಿ ಸಹಜವಾಗಿಯೇ ಆತಂಕ, ನಿರೀಕ್ಷೆ ಹೆಚ್ಚಿದೆ. ಇನ್ನು ಈ ಸಿನಿಮಾ ಶೀರ್ಷಿಕೆ ಹೇಳುವಂತೆ 1980ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿರುವ ಸಿನಿಮಾ ಎನ್ನಬಹುದು.

ಚಿತ್ರದಲ್ಲಿ ಶರಣ್ಯ ಶೆಟ್ಟಿ, ಶ್ರೀಧರ್, ಅರವಿಂದ್ ರಾವ್, ರಮೇಶ್ ಪಂಡಿತ್, ಶಂಕರ್ ಅಶ್ವತ್ಥ್, ಕಿಶೋರ್ ಕುಮಾರ್, ವಿಶಾಲ್ ಧೀರಜ್, ಧನುಷ್ ಗೌಡ, ಮಾಸ್ಟರ್ ಕೃತಿಕಾ, ಭಾನು ಪ್ರಿಯಾ ಇದ್ದಾರೆ. ಚಿತ್ರಕ್ಕೆ ಜೀವ ಆಂಟೋನಿ ಛಾಯಾಗ್ರಹಣ, ಚಿಂತನ್ ವಿಕಾಸ್ ಅವರ ಸಂಗೀತವಿದೆ. ಹಾಗೂ ನರೇಂದ್ರ ಬಾಬು ಅವರು ಸಂಭಾಷಣೆ ಬರೆದಿದ್ದಾರೆ.

Priyanka Upendra 1980 Film Teaser

1980 ಟೀಸರ್ ರಿಲೀಸ್

ಇದನ್ನೂ ಓದಿ: ಬೆಂಗಾಳಿ ಬ್ಯೂಟಿ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರಕ್ಕಾಗಿ ಈ ಕಸರತ್ತು

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್