AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್​ಗೆ ಹೃದಯಾಘಾತ

Ba Ma Harish: ಸಿನಿಮಾ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ.

ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್​ಗೆ ಹೃದಯಾಘಾತ
ಮಂಜುನಾಥ ಸಿ.
|

Updated on: Mar 28, 2024 | 12:13 PM

Share

ಸಿನಿಮಾ ನಿರ್ಮಾಪಕ (Producer), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ಭಾಮಾ ಹರೀಶ್​ಗೆ ಹೃದಯಾಘಾತವಾಗಿದೆ ಎನ್ನಲಾಗುತ್ತಿದೆ. ಭಾಮಾ ಹರೀಶ್ ಅವರನ್ನು ತೀವ್ರ ನಿಗಾ ಘಟನದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ದರ್ಶನ್ ಮೊದಲ ಸಿನಿಮಾ ‘ಮೆಜೆಸ್ಟಿಕ್’ ಸಿನಿಮಾದ ಸಹ ನಿರ್ಮಾಣ ಸೇರಿದಂತೆ ಹಲವು ಕನ್ನಡ ಸಿನಿಮಾಗಳನ್ನು ಭಾಮಾ ಹರೀಶ್ ನಿರ್ಮಾಣ ಮಾಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಪ್ಪು ನಿಧನವಾದ ಬಳಿಕ ವಾಣಿಜ್ಯ ಮಂಡಳಿಯಿಂದ ಕಾರ್ಯಕ್ರಮವನ್ನು ಮಾಡಿಸಿದ್ದರು. ಮಾತ್ರವಲ್ಲದೆ ಇನ್ನೂ ಕೆಲವು ಕಾರ್ಯಕ್ರಮಗಳನ್ನು ಭಾಮಾ ಹರೀಶ್ ಮಾಡಿಸಿದ್ದರು.

ಇದನ್ನೂ ಓದಿ:ಫಿಲ್ಮ್​ ಚೇಂಬರ್​ ನೂತನ ಅಧ್ಯಕ್ಷ ಭಾಮಾ ಹರೀಶ್​ಗೆ ಪೊರಕೆ, ಫಿನಾಯಿಲ್​ ಗಿಫ್ಟ್​​! ಕಾರಣವೇನು?

ಭಾಮಾ ಹರೀಶ್​ ಅವರಿಗೆ ಹೈಬಿಪಿ ಹಾಗೂ ಉಸಿರಾಟದ ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರ ಕುಟುಂಬ ವರ್ಗದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ವರದಿಗಾಗಿ ಕುಟುಂಬ ವರ್ಗದವರು ಕಾಯುತ್ತಿದ್ದು, ಕೆಲವೇ ನಿಮಿಷಗಳಲ್ಲಿ ಭಾಮಾ ಹರೀಶ್​ರ ಆರೋಗ್ಯ ಸ್ಥಿತಿಯ ಮಾಹಿತಿ ಹೊರಬೀಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ