AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ನಿರ್ಮಾಪಕ ಎಂಎನ್ ಕುಮಾರ್ ಪೊಲೀಸರ ವಶಕ್ಕೆ

Producer MN Suresh: ಸುದೀಪ್ ನಟನೆಯ ‘ಮಾಣಿಕ್ಯ’, ಅಪ್ಪು ನಟಿಸಿದ್ದ ‘ಅಂಜನಿಪುತ್ರ’ ಸೇರಿದಂತೆ ಹಲವು ಬಿಗ್ ಬಜೆಟ್ ಕನ್ನಡ ನಿರ್ಮಾಪಕ ಎಂಎನ್ ಸುರೇಶ್ ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟ ಜಗ್ಗೇಶ್ ದಾಖಲಿಸಿದ್ದ ದೂರಿಗೆ ಸಂಬಂದಿಸಿದಂತೆ ಎಂಎನ್ ಸುರೇಶ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

ವಂಚನೆ ಪ್ರಕರಣ: ನಿರ್ಮಾಪಕ ಎಂಎನ್ ಕುಮಾರ್ ಪೊಲೀಸರ ವಶಕ್ಕೆ
Mn Kumar
ಮಂಜುನಾಥ ಸಿ.
|

Updated on: Apr 03, 2025 | 12:22 PM

Share

ಸುದೀಪ್ ನಟನೆಯ ‘ಮಾಣಿಕ್ಯ’ ಸೇರಿದಂತೆ ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಎಂ ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಪ್ಪಾರಪೇಟೆ ಪೊಲೀಸರು ಎಂಎನ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎನ್ ಕುಮಾರ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಜಗ್ಗೇಶ್ ಅವರು ಎಂಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸಾಲದ ಹಣವೋ ಅಥವಾ ಸಂಭಾವಣೆ ಬಾಕಿ ಮೊತ್ತವೇ ಎಂಬ ಬಗ್ಗೆ ಇನ್ನಷ್ಟು ವಿವರಗಳು ತಿಳಿಯಬೇಕಿದೆ.

ಇದನ್ನೂ ಓದಿ:ಶಿವರಾಜ್ ಕುಮಾರ್, ರವಿಚಂದ್ರನ್ ಭೇಟಿಗೆ ತಯಾರಾದ ಎಂಎನ್ ಕುಮಾರ್: ಮುಂದೇನು?

ಎಂಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಆರೋಪ ಮಾಡಿದ್ದರು. ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು ಎಂಎನ್ ಸುರೇಶ್. ಆ ಬಳಿಕ ನಟ ಸುದೀಪ್ ಅವರು ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್