AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹಾಗೂ ನಟ ದರ್ಶನ್ ಸುದ್ದಿಗೋಷ್ಠಿ ನಡೆಸಲ್ಲ: ಸ್ಯಾಂಡಲ್​ವುಡ್ ನಿರ್ಮಾಪಕ ಉಮಾಪತಿ ಗೌಡ ಸ್ಪಷ್ಟನೆ

ಇದಕ್ಕೂ ಮೊದಲು, ಕೆಲವೇ ಹೊತ್ತಿನಲ್ಲಿ ದರ್ಶನ್ ಮತ್ತು ಉಮಾಪತಿ ಗೌಡ ಜಂಟಿ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ಹೇಳಲಾಗಿತ್ತು. ಉಮಾಪತಿ ಹಾಗೂ ದರ್ಶನ್ ಅಜ್ಞಾತ ಸ್ಥಳದಲ್ಲಿ ಕೂತು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಯಲಾಗಿತ್ತು.

ನಾನು ಹಾಗೂ ನಟ ದರ್ಶನ್ ಸುದ್ದಿಗೋಷ್ಠಿ ನಡೆಸಲ್ಲ: ಸ್ಯಾಂಡಲ್​ವುಡ್ ನಿರ್ಮಾಪಕ ಉಮಾಪತಿ ಗೌಡ ಸ್ಪಷ್ಟನೆ
ಅರುಣಾ ಕುಮಾರಿ (ಎಡ), ದರ್ಶನ್ ತೂಗುದೀಪ(ಮಧ್ಯ), ಉಮಾಪತಿ ಶ್ರೀನಿವಾಸ್ ಗೌಡ(ಬಲ)- ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 13, 2021 | 5:13 PM

Share

ಬೆಂಗಳೂರು: ನಾನು ಹಾಗೂ ದರ್ಶನ್​ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ನಡೆಸುತ್ತಿಲ್ಲ ಎಂದು ಸ್ಯಾಂಡಲ್​ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಟಿವಿ9 ವಾಹಿನಿಗೆ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವನ್ನು ಇಲ್ಲಿಗೆ ಎಂಡ್‌ ಮಾಡೋಣ ಎಂದು ದರ್ಶನ್​ ಹೇಳಿದ್ದಾರೆ. ಹೀಗಾಗಿ, ನಾವು ಇಬ್ಬರೂ ಸೇರಿ ಒಂದು ನಿರ್ಣಯಕ್ಕೆ ಬಂದಿದ್ದೇವೆ. ಇನ್ನು ಮುಂದೆ ಈ ವಿಚಾರವಾಗಿ ನಾವು ಮಾತನಾಡಲ್ಲ ಎಂದು ಉಮಾಪತಿ ಗೌಡ ತಿಳಿಸಿದ್ದಾರೆ.

ಅದರಂತೆ, ನಟ ದರ್ಶನ್ ಹಾಗೂ ಉಮಾಪತಿ ಗೌಡ ನಡುವಿನ ಸಂಧಾನ ಸಕ್ಸಸ್ ಆದಂತಾಗಿದೆ. ದರ್ಶನ್ ಮತ್ತು ಉಮಾಪತಿ ಮಾತುಕತೆ ವಿಚಾರ ಹೀಗೆ ಸುಖಾಂತ್ಯ ಕಂಡಿದೆ. ಇಬ್ಬರೂ ಸೇರಿ ಒಂದು ನಿರ್ಣಯಕ್ಕೆ ಬಂದಿದ್ದೇವೆ. ಇನ್ನು ಮುಂದೆ ಈ ವಿಚಾರದಲ್ಲಿ ನಾವು ಭಾಗಿಯಾಗಲ್ಲ. 5 ಗಂಟೆಗೆ ಯಾವುದೇ ಪ್ರೆಸ್‌ ಮೀಟ್ ಮಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಕೆಲವೇ ಹೊತ್ತಿನಲ್ಲಿ ದರ್ಶನ್ ಮತ್ತು ಉಮಾಪತಿ ಗೌಡ ಜಂಟಿ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ಹೇಳಲಾಗಿತ್ತು. ಉಮಾಪತಿ ಹಾಗೂ ದರ್ಶನ್ ಅಜ್ಞಾತ ಸ್ಥಳದಲ್ಲಿ ಕೂತು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಯಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಸಮಸ್ಯೆ ಇತ್ಯರ್ಥ ಆಗಿರುವ ಬಗ್ಗೆ ಸ್ಪಷ್ಟನೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇದಕ್ಕೆ ಸುದ್ದಿಗೋಷ್ಠಿಗೂ ಮುನ್ನವೇ ಪರಿಹಾರ ಸಿಕ್ಕಿದಂತಾಗಿದೆ. ಸದ್ಯಕ್ಕೆ ಈ ಬಗ್ಗೆ ಮಾತನಾಡುವುದಿಲ್ಲ, ಸುದ್ದಿಗೋಷ್ಠಿ ಇಲ್ಲ ಎಂದು ತಿಳಿದುಬಂದಿದೆ.

ಅರುಣಾ ಕುಮಾರಿ ಬಗ್ಗೆ ನಾಗೇಂದ್ರ ಪ್ರಸಾದ್ ಮಾಹಿತಿ ಇದೇ ವೇಳೆ, ನನ್ನ ಸ್ನೇಹಿತರಿಗೆ ಕೂಡ ಅರುಣಾ ಕುಮಾರಿಯಿಂದ ವಂಚನೆ ಆಗಿದೆ. ನನ್ನ ಆತ್ಮೀಯರೊಬ್ಬರು ಈ ವಿಚಾರ ಹೇಳಿಕೊಂಡಿದ್ದಾರೆ ಎಂದು ಟಿವಿ9ಗೆ ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಹೇಳಿಕೆ ನೀಡಿದ್ದಾರೆ. ಅವರು ಆಕೆಯ ಬಗ್ಗೆ ಇರುವಂಥಾ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ದರ್ಶನ್​, ಉಮಾಪತಿ ಮನೆಗೆ ಭೇಟಿ ನೀಡಿ ಹೇಳಿದ್ದೇನೆ ಎಂದು ನಾಗೇಂದ್ರ ಪ್ರಸಾದ್ ಟಿವಿ9 ವಾಹಿನಿಗೆ ತಿಳಿಸಿದ್ದಾರೆ.

ಅರುಣಾ ಕುಮಾರಿ ಜೊತೆ ನಾನೂ ಒಮ್ಮೆ ಮಾತನಾಡಿದ್ದೇನೆ. ನನ್ನ ಸ್ನೇಹಿತರಿಗೆ ಕೂಡ ಆಕೆಯಿಂದ ವಂಚನೆ ಆಗಿದೆ. ಆದರೆ, ಈ ಬಗ್ಗೆ ದೂರು ಕೊಟ್ಟಿರಲಿಲ್ಲ. ನನಗೆ ಗೊತ್ತಿರುವ ವಿಚಾರವನ್ನು ನಟ ದರ್ಶನ್​ಗೆ ಹೇಳಿದ್ದೇನೆ. ಹಣದ ವಿಚಾರದಲ್ಲಿ ಮೋಸವಾಗಿದೆ ಎಂದು ನಾಗೇಂದ್ರ ಪ್ರಸಾದ್ ಹೇಳಿದ್ದಾರೆ. ನನ್ನ ಸ್ನೇಹಿತ ಚಿತ್ರರಂಗಕ್ಕೆ ಸಂಬಂಧಿಸಿದವರಲ್ಲ, ಅವರು ಉದ್ಯಮಿ. ಆದರೆ, ಅವರಿಗೂ ಸಹ ಅರುಣಾ ಕುಮಾರಿ ವಂಚಿಸಿದ್ದಾರೆ. ಅರುಣಾ ಕುಮಾರಿ ಇನ್ನೂ ಹಲವರಿಗೆ ವಂಚಿಸಿರುವ ಸಾಧ್ಯತೆ ಇದೆ. ವಂಚನೆಗೊಳಗಾದವರು ಒಬ್ಬೊಬ್ಬರೇ ಹೊರಬರಬಹುದು ಟಿವಿ9ಗೆ ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಅರುಣಾ ಕುಮಾರಿ ಜೊತೆ ನಾನೂ ಒಮ್ಮೆ ಮಾತನಾಡಿದ್ದೇನೆ: ಸಿನಿಮಾ ಸಾಹಿತಿ ನಾಗೇಂದ್ರ ಪ್ರಸಾದ್ ಹೇಳಿದ್ದೇನು?

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಅರುಣಾ ಕುಮಾರಿ ಫೇಕ್ ಐಡಿ ಬಗ್ಗೆ ಕೆನರಾ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ

Published On - 5:03 pm, Tue, 13 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್