ಸಬ್ಸಿಡಿ ಹಣ, ಪ್ರಶಸ್ತಿ, ಚಿತ್ರಮಂದಿರಗಳ ಪರಿಸ್ಥಿತಿ ಇತರ ಸಮಸ್ಯೆಗಳ ಬಗ್ಗೆ ಸಿಎಂಗೆ ಮನವಿ

Siddaramaiah: ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಾರಾ ಗೋವಿಂದು ನೇತೃತ್ವದಲ್ಲಿ ಕೆಲ ಚಿತ್ರರಂಗದ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಬ್ಸಿಡಿ ಹಣ, ಪ್ರಶಸ್ತಿ, ಚಿತ್ರಮಂದಿರಗಳ ಪರಿಸ್ಥಿತಿ ಇತರ ಸಮಸ್ಯೆಗಳ ಬಗ್ಗೆ ಸಿಎಂಗೆ ಮನವಿ
ಸಿದ್ದರಾಮಯ್ಯ ಭೇಟಿ
Follow us
ಮಂಜುನಾಥ ಸಿ.
|

Updated on: Jun 27, 2023 | 10:05 PM

ಚಿತ್ರರಂಗದ (Sandalwood) ಹಲವು ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಗಮನ ಸೆಳೆಯುವ ಕಾರ್ಯವನ್ನು ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಇಂದು (ಜೂನ್ 27) ಮಾಡಿದ್ದಾರೆ. ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದಂತಹ ಸಾ ರಾ ಗೋವಿಂದು (Sa Ra Goindu) ಅವರ ನೇತೃತ್ವದಲ್ಲಿ ಚಿತ್ರರಂಗದ ಹಲವು ಮುಖಂಡರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚಿತ್ರರಂಗದ ಸಮಸ್ಯೆಗಳನ್ನು ಚರ್ಚಿಸಿ ಮನವಿ ಪತ್ರ ನೀಡಿದ್ದಾರೆ.

ಬಾಕಿ ಉಳಿದುಕೊಂಡಿರುವ ಸಬ್ಸಿಡಿಹಣ, ರಾಜ್ಯ ಪ್ರಶಸ್ತಿಗಳ ವಿತರಣೆ, ಮುಚ್ಚುತ್ತಿರುವ ಚಿತ್ರಮಂದಿರಗಳ ಪರಿಸ್ಥಿತಿ, ಚಿತ್ರಮಂದಿರಗಳ ಉಳಿವಿಗೆ ಆಗಬೇಕಾದ ಕಾರ್ಯಗಳು, ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ, ಪೈರಸಿ ಇಂದ ಉದ್ಯಮಕ್ಕೆ ಆಗುತ್ತಿರುವ ನಷ್ಟ. ಪೈರಸಿ ತಡೆಯಲು ಕ್ರಮಗಳು, ಮನೊರಂಜನಾ ತೆರಿಗೆ ಇಂದ ಆಗುತ್ತಿರುವ ಸಮಸ್ಯೆ ಹಾಗೂ ಚಿತ್ರರಂಗವನ್ನು ಕಾಡುತ್ತಿರುವ ಇನ್ನಿತರ ಸಮಸ್ಯೆಗಳ ಬಗ್ಗೆ ಸುದೀರ್ಘವಾದಂತಹ ಚರ್ಚೆಯನ್ನು ನಿರ್ಮಾಪಕರ ಸಂಘದ ಪದಾಧಿಕಾರಿಗಳು ಹಾಗೂ ಇತರೆ ಮುಖಂಡರುಗಳು ಸಿಎಂ ಸಿದ್ದರಾಮಯ್ಯ ಬಳಿ ಮಾಡಿದ್ದಾರೆ.

ಸಮಸ್ಯೆಗಳನ್ನು ಆಲಿಸಿದ ಸಿಎಂ ಸಿದ್ದರಾಮಯ್ಯ, ಸಮಗ್ರ ಸಮಸ್ಯೆಗಳ ಚರ್ಚೆಗೆ ಸಮಯವನ್ನು ನಿಗದಿಪಡಿಸಿ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಅತಿ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸುತ್ತೇನೆಂದು ತುಂಬು ಹೃದಯದಿಂದ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ನಿರ್ಮಾಪಕರು ಹಾಗೂ ಚಿತ್ರಮಂದಿರಗಳ ಬಗ್ಗೆ ಅವರಿಗೆ ತಿಳಿದಿದ್ದ ಕೆಲವು ವಿಷಯಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ ಎಂದು ಸಾರಾ ಗೋವಿಂದು ಹೇಳಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ -ಉಮೇಶ್ ಬಣಕಾರ್ ಕಾರ್ಯದರ್ಶಿಗಳಾದಂತಪ್ರವೀಣ್ ಕುಮಾರ್( ಡಿ. ಕೆ. ರಾಮಕೃಷ್ಣ) ಹಾಗೂ ಉಪಾಧ್ಯಕ್ಷರಾದಂತಹ ಎಂ. ಜಿ.ರಾಮಮೂರ್ತಿ ನಿರ್ಮಾಪಕ ಎನ್.ಎಂ ಸುರೇಶ್ ಅವರು ನಿಯೋಗದಲ್ಲಿ ಇದ್ದರು.

ಇದನ್ನೂ ಓದಿ:Film Chamber: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ವಿಳಂಬ ಆಗಿದ್ದಕ್ಕೆ ಪ್ರತಿಭಟನೆ; ಭಾ.ಮ. ಹರೀಶ್​ ಹೇಳೋದೇನು?

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕವೂ ಕೆಲವು ಚಿತ್ರರಂಗದ ಮುಖಂಡರು, ಚಿತ್ರರಂಗದ ಕೆಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಸಿಎಂ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ಚಿತ್ರರಂಗಕ್ಕೆ ಆಗಬೇಕಾದ ಕಾರ್ಯಗಳ ಬಗ್ಗೆ ಮನವಿ ಪತ್ರಗಳನ್ನು ನೀಡಿದ್ದರು. ಆಗಲೂ ಸಹ ಸಿಎಂ ಅವರು ಮನವಿ ಸ್ವೀಕರಿಸಿ ಗಮನ ಹರಿಸುವುದಾಗಿ ತಿಳಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ