Hostel Hudugaru Bekagiddare: ಹಾಸ್ಟೆಲ್ ಹುಡುಗರ ಪ್ರೊಟೆಸ್ಟ್ ಸಾಂಗ್ ಬಿಡುಗಡೆ; ಇನ್ನಷ್ಟು ಹೆಚ್ಚಾಯ್ತು ನಿರೀಕ್ಷೆ
Protest Song: ಹಲವು ಕಾರಣಗಳಿಂದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈಗ ಈ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ.
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾ ಸೆಟ್ಟೇರಿದ ದಿನದಿಂದಲೂ ಗಮನ ಸೆಳೆಯುತ್ತಿದೆ. ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ಮೂಲಕ ನಿರ್ಮಾಣ ಆಗಿರುವ ಈ ಚಿತ್ರದ ಮೊದಲ ಹಾಡು ಈ ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ (Sandalwood) ಸ್ಟಾರ್ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಡಾಲಿ ಧನಂಜಯ್, ಧ್ರುವ ಸರ್ಜಾ ಅವರು ಈ ಹಾಡನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹಾಸ್ಟೆಲ್ನಲ್ಲಿರುವ ಹುಡುಗರ ಕಥೆ-ವ್ಯಥೆ ಇರುವ ‘ಪ್ರೊಟೆಸ್ಟ್ ಸಾಂಗ್’ಗೆ (Protest Song) ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಯುವ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ.
ಹಲವು ಕಾರಣಗಳಿಂದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಬಿಡುಗಡೆಗೆ ಸಿದ್ಧವಾಗಿರುವ ಈ ಸಿನಿಮಾದ ಪ್ರೋಮೋಗಳು ಈಗಾಗಲೇ ಧೂಳೆಬ್ಬಿಸಿವೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಪಾತ್ರವರ್ಗದಲ್ಲಿ ಇದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅತಿಥಿ ಪಾತ್ರ ಮಾಡಿದ್ದಾರೆ.
‘Hostel ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ Protest ವೀಡಿಯೋ ಸಾಂಗ್ ಇದೀಗ ಬಿಡುಗಡೆಯಾಗಿದೆ✨
This is an absolute madcap. Hostel Hudugaru have turned their life into a song full of vim and vigour. #ProtestSong is now on YouTube, do watch it without a miss ☺️https://t.co/BRlYq6GTsh
— Rakshit Shetty (@rakshitshetty) January 5, 2023
ಪ್ರೊಟೆಸ್ಟ್ ಸಾಂಗ್ನಲ್ಲಿ ಪವನ್ ಕುಮಾರ್ ಮತ್ತು ರಿಷಬ್ ಶೆಟ್ಟಿ ಅವರ ಗೆಸ್ಟ್ ಅಪಿಯರೆನ್ಸ್ ಇದೆ. ಈ ಹಿಂದೆ ಪುನೀತ್ ರಾಜ್ಕುಮಾರ್ ಕೂಡ ಈ ಚಿತ್ರತಂಡಕ್ಕೆ ಸಾಥ್ ನೀಡಿದ್ದರು. ಬಳಿಕ ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಮುಂತಾದವರು ಪ್ರಚಾರದಲ್ಲಿ ಕೈ ಜೋಡಿಸಿದರು.
ಇದನ್ನೂ ಓದಿ: Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ಫೆಬ್ರವರಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಈ ಚಿತ್ರಕ್ಕಿದೆ. ರಕ್ಷಿತ್ ಶೆಟ್ಟಿ ಅವರು ‘ಪರಂವಃ’ ಸ್ಟುಡಿಯೋಸ್ ಮೂಲಕ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ರಿಲೀಸ್ ಮಾಡಲು ಮುಂದಾಗಿದ್ದಾರೆ.
ಇದನ್ನೂ ಓದಿ: Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್ ಹುಡುಗರು’ ಮಾಡಿದ್ದು ಒಂದೆರಡಲ್ಲ
ಪರಂವಃ ಸ್ಟುಡಿಯೋಸ್ ಮೂಲಕ ರಿಲೀಸ್ ಆದ ಬಹುತೇಕ ಎಲ್ಲ ಚಿತ್ರಗಳು ಹೊಸತನವನ್ನು ಹೊಂದಿವೆ. ರಕ್ಷಿತ್ ಶೆಟ್ಟಿ ಅವರು ಈ ಚಿತ್ರವನ್ನು ಇಷ್ಟಪಟ್ಟು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ ಎಂದರೆ ಸಿನಿಮಾದಲ್ಲಿ ಏನೋ ವಿಶೇಷತೆ ಇದೆ ಎಂದು ಸಿನಿಪ್ರಿಯರು ಊಹಿಸುತ್ತಿದ್ದಾರೆ. ‘ನಮ್ಮ ತುಂಟಾಟವನ್ನು ಪ್ರಸ್ತುತಪಡಿಸುತ್ತಿರುವ ಪರಂವಃ ಸ್ಟುಡಿಯೋಸ್ಗೆ ಧನ್ಯವಾದ’ ಎಂದು ‘ಹಾಸ್ಟೆಲ್ ಹುಡುಗರು’ ತಂಡದವರು ಪೋಸ್ಟ್ ಮಾಡಿದ್ದಾರೆ. ಚಿತ್ರದ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:09 pm, Thu, 5 January 23