AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೂನಿ’ ಟ್ರೈಲರ್ ಬಿಡುಗಡೆ: ಒಬ್ಬರಲ್ಲಿ ಇಬ್ಬರು, ನಿಜ ಯಾರು?

Juni Trailer: ಮಾನಸಿಕ ಸಮಸ್ಯೆಯ ಸುತ್ತ ಸುತ್ತುವ ಪ್ರೇಮಕತೆಯನ್ನು ಒಳಗೊಂಡಿರುವ ‘ಜೂನಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

‘ಜೂನಿ’ ಟ್ರೈಲರ್ ಬಿಡುಗಡೆ: ಒಬ್ಬರಲ್ಲಿ ಇಬ್ಬರು, ನಿಜ ಯಾರು?
ಮಂಜುನಾಥ ಸಿ.
|

Updated on: Feb 01, 2024 | 9:02 PM

Share

ಮಾನಸಿಕ ಸಮಸ್ಯೆಗಳನ್ನು ಆಧಾರವಾಗಿಟ್ಟುಕೊಂಡು ಹಲವು ಥ್ರಿಲ್ಲರ್ (Thriller) ಸಿನಿಮಾಗಳು ಬಂದಿವೆ. ಆದರೆ ಪ್ರೇಮಕತೆಗಳು ಬಂದಿರುವುದು ಬಹಳ ಕಡಿಮೆ. ಅಂಥಹದ್ದೊಂದು ಪ್ರಯತ್ನ ಕನ್ನಡದಲ್ಲಿ ನಡೆದಿದೆ. ಪೃಥ್ವಿ ಅಂಬರ್ ನಟನೆಯ ‘ಜೂನಿ’ ಸಿನಿಮಾ ಇಂಥಹದ್ದೊಂದು ಕತೆಯನ್ನು ಒಳಗೊಂಡಿದ್ದು, ಸಿನಿಮಾದ ಟ್ರೈಲರ್ (Trailer) ಇದೀಗ ಬಿಡುಗಡೆ ಆಗಿದೆ. ಸಿನಿಮಾ ಬಗ್ಗೆ ಕುತೂಹಲ ಕೆರಳಿಸುವಲ್ಲಿ ಯಶಸ್ವಿಯಾಗುವಂತಿದೆ ಟ್ರೈಲರ್.

ಪೃಥ್ವಿ ಅಂಬಾರ್ ಭಿನ್ನ ಕಥಾವಸ್ತುಗಳನ್ನು ಒಳಗೊಂಡ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಮಾನಸಿಕ ಸಮಸ್ಯೆಯ ಬಗ್ಗೆ ಚರ್ಚಿಸುವ ‘ಜೂನಿ’ ಸಿನಿಮಾದಲ್ಲಿ ಪೃಥ್ವಿ ನಟಿಸಿದ್ದಾರೆ. ಟೈಟಲ್​ನಿಂದಲೇ ಗಮನ ಸೆಳೆಯುತ್ತಿದೆ ಈ ಸಿನಿಮಾದ ಟ್ರೈಲರ್, ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಇತ್ತೀಚೆಗಷ್ಟೆ ಟ್ರೈಲರ್ ಬಿಡುಗಡೆ ಮಾಡಲಾಗಿದೆ.

ನಾಯಕ ಪೃಥ್ವಿ ಅಂಬರ್ ಮಾತನಾಡಿ, ‘ವೈಭವ್ ಬಹಳ ಸ್ಪಷ್ಟತೆಯಿಂದ ಸಿನಿಮಾ ಮಾಡಿದ್ದಾರೆ. ವಯಸ್ಸಿನಲ್ಲಿ ನನಗಿಂತ ಚಿಕ್ಕವರು. ಬುದ್ಧಿವಂತಿಕೆ, ಅನುಭದಲ್ಲಿ ಬಹಳ ದೊಡ್ಡವರು. ಈ ಸಿನಿಮಾ ತಂಡವನ್ನು ಕ್ರಿಕೆಟ್ ತಂಡ ಎಂದುಕೊಂಡರೆ ಅತಿ ಹೆಚ್ಚು ಸ್ಕ್ರೋರ್ ಮಾಡುವವರು ವೈಭವ್. ಅವರಷ್ಟೇ ಸ್ಕ್ರೋರ್ ಮಾಡುವವರು ರಿಷಿಕಾ. ಎರಡೂವರೆ ತಿಂಗಳ ಕಾಲ ತರಬೇತಿ ಮಾಡಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಬೇಕು ಎಂದು ತುಂಬಾ ಡೆಡಿಕೇಟೆಡ್ ಆಗಿ ಚಿತ್ರ ಮಾಡಿದ್ದಾರೆ. ನನ್ನದು 50% ಪರಿಶ್ರಮ ಅಷ್ಟೇ ಇರುವುದು. ಎಲ್ಲರದ್ದೂ 100ರಷ್ಟು ಇದೆ ಎಂದು ತಂಡವನ್ನು ಕೊಂಡಾಡಿದರು.

ಇದನ್ನೂ ಓದಿ:‘ಉಪಾಧ್ಯಕ್ಷ’ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣನಿಗೆ ಸುಂದರ ಉಡುಗೊರೆ, ಇಲ್ಲಿವೆ ಕಾರ್ಯಕ್ರಮದ ಚಿತ್ರಗಳು

ನಾಯಕಿ ರಿಷಿಕಾ ಮಾತನಾಡಿ, ‘ನಾವು 2022ರಲ್ಲಿ ಈ ಚಿತ್ರದ ಚಿತ್ರೀಕರಣ ಪ್ರಾರಂಭ ಮಾಡಿದೆವು. ಆ ಟೈಮ್​ನಲ್ಲಿ ನನ್ನದು ಎರಡನೇ ಪ್ರಾಜೆಕ್ಟ್. ನನಗೆ ಈ ರೀತಿ ಪಾತ್ರ ಸಿಕ್ಕಿರುವುದು ಬಹಳ ಸಂತೋಷ. ತುಂಬಾ ರಿಹರ್ಸಲ್ ಮಾಡಿದ್ದೇವೆ. ಇದು ನನ್ನ ಒಬ್ಬಳ ಪ್ರಯತ್ನವಲ್ಲ. ಇಡೀ ತಂಡದ ಪ್ರಯತ್ನ. ಈ ಚಿತ್ರದಲ್ಲಿ ಒಂದೊಳ್ಳೆ ಸಂದೇಶ ಇದೆ. ಸ್ಪ್ಲಿಟ್ ಪರ್ಸನಾಲಿಟಿ ಸುತ್ತಾ ಸಾಗುವ ಚಿತ್ರ ಇದಾಗಿದೆ ಎಂದರು.

ನಿರ್ದೇಶಕ ವೈಭವ್ ಮಹಾದೇವ್ ಮಾತನಾಡಿ, ‘‘ಜೂನಿ’ ಕಥೆ ಮೇಲೆ ತುಂಬಾ ನಂಬಿಕೆ ಇದೆ. ಆ ಕಥೆ ಮೇಲೆ ಇರುವ ನಂಬಿಕೆಯಿಂದ ನಾವಿಲ್ಲಿ ಕುಳಿತುಕೊಂಡಿದ್ದೇವೆ. ನಾನೊಂದು ಕಥೆಯನ್ನು ಜನರಿಗೆ ಹೇಳುತ್ತಿದ್ದೇನೆ, ಅದು ಒಬ್ಬನಿಗೆ ಆಗಲಿ, ಅದು ಸಿನಿಮಾವಾಗಲಿ. ಅದನ್ನು ಕೋಟ್ಯಂತರ ಜನ ಕನ್ನಡಿಗರ ಮುಂದೆ ಇಡಬೇಕು ಎಂದರೆ ಅದು ಲಕ್, ಹಾರ್ಡ್ ವರ್ಕ್ ಎಲ್ಲವೂ ಬೇಕು. ಈ ಚಿತ್ರ ಮಾಡಿರುವುದಕ್ಕೆ ನನಗೂ ತೃಪ್ತಿ ಇದೆ. ಸ್ಪ್ಲಿಟ್ ಪರ್ಸನಾಲಿಟಿ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಜನಕ್ಕೆ ಈ ಕಂಡಿಷನ್ ಬಗ್ಗೆ ಅರ್ಥ ಮಾಡಿಸಬೇಕು ಎನ್ನೋದು ನನ್ನ ಪ್ರಯತ್ನ ಎಂದರು.

ಪೃಥ್ವಿ ಅಂಬಾರ್ ನಟಿಸುತ್ತಿರುವ ‘ಜೂನಿ’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿರೋದು ವೈಭವ್ ಮಹಾದೇವ್. ಇವರು ಈಗಾಗಲೇ ‘ಜನ್ನಿ’ ಅನ್ನೋ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದರು. ಈಗ ‘ಜೂನಿ’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆಯನ್ನು ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ನಲ್ಲಿ ನಿರ್ದೇಶನ ಬಗ್ಗೆ ತರಬೇತಿಯನ್ನು ಪಡೆದಿದ್ದಾರೆ. ಈಗ ‘ಜೂನಿ’ ಸಿನಿಮಾಗೆ ಕಥೆ- ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇಂತಹ ವಿಭಿನ್ನ ಟೈಟಲ್ ಇಟ್ಟು ಮಾಡುತ್ತಿರುವ ಸಿನಿಮಾಗೆ ರಿಷಿಕಾ ನಾಯಕ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಜೂನಿ’ ಸಿನಿಮಾವನ್ನು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾವನ್ನು ಚಿತ್ರತಂಡ ಫೆಬ್ರವರಿ 9ಕ್ಕೆ ಬಿಡುಗಡೆ ಮಾಡುವುಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ‘ಲವ್ ಮಾಕ್ಟೇಲ್ 2’ಗೆ ಆಕ್ಷನ್ ಕಟ್ ಹೇಳುತ್ತಿರುವ ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಎಡಿಟಿಂಗ್ ಮಾಡಿದ್ರೆ, ಅಜಿನ್ ಬಿ, ಜಿತಿನ್ ದಾಸ್ ಕ್ಯಾಮರಾ ವರ್ಕ್ ಇದೆ. ಹಾಗೇ ನವೀನ್ ಈ ಸಿನಿಮಾಗೆ ಆರ್ಟ್ ಡೈರೆಕ್ಷನ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್