AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಹುಟ್ಟುಹಬ್ಬ, ಸ್ಮಾರಕದ ಬಳಿ ಅಭಿಮಾನಿ ಸಾಗರ

Puneeth Rajkumar: ದಿವಂಗತ ನಟ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಇಂದು. ಅಭಿಮಾನಿಗಳು ನಿನ್ನೆ ರಾತ್ರಿಯಿಂದಲೇ ಹುಟ್ಟುಹಬ್ಬದ ಅದ್ಧೂರಿ ಆಚರಣೆ ಶುರು ಮಾಡಿದ್ದಾರೆ.

ಪುನೀತ್ ಹುಟ್ಟುಹಬ್ಬ, ಸ್ಮಾರಕದ ಬಳಿ ಅಭಿಮಾನಿ ಸಾಗರ
ಮಂಜುನಾಥ ಸಿ.
|

Updated on: Mar 17, 2024 | 7:32 AM

Share

ಅಗಲಿದ ತಾರೆ ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ಹುಟ್ಟಿದ ದಿನವಾದ ಇಂದು (ಮಾರ್ಚ್ 17) ಮುಂಜಾನೆಯಿಂದಲೇ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಅಸಲಿಗೆ ಕಳೆದ ಎರಡು ದಿನಗಳಿಂದಲೂ ಸ್ಮಾರಕಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಹುಟ್ಟುಹಬ್ಬವಾದ್ದರಿಂದ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು ವಿಶೇಷ.

ಹುಟ್ಟುಹಬ್ಬದ ಅಂಗವಾಗಿ ಅಪ್ಪುವಿನ ಸಮಾಧಿಯನ್ನು ಕೆಂಪು ಗುಲಾಬಿ ಹೂವುಗಳಿಂದ ಸಿಂಗರಿಸಲಾಗಿದೆ. ಅಭಿಮಾನಿಗಳ ಸುಗಮ ದರ್ಶನಕ್ಕೆ ಸಕಲ ರೀತಿಯ ವ್ಯವಸ್ಥೆ ಮಾಡಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಇಂದು ಒಂದೇ ದಿನ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಅನ್ನದಾನ ವ್ಯವಸ್ಥೆಯನ್ನು ದೊಡ್ಮನೆ ಕುಟುಂಬ ಮಾಡಿದೆ. ಬಂದವರಿಗೆಲ್ಲ ಚಿಕನ್ ಬಿರಿಯಾನಿ ನೀಡುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದರ ಜವಾಬ್ದಾರಿಯನ್ನು ಯುವ ರಾಜ್​ಕುಮಾರ್ ಹೊತ್ತುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬಕ್ಕೆ ತಯಾರಿ ಹೀಗಿದೆ ನೋಡಿ

ಕೆಲವು ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಮಾಡಲಾಗಿವೆ. ಅಪ್ಪು ಸಿನಿಮಾದ ಹಾಡುಗಳು ಇಂದು ಸ್ಮಾರಕದ ಬಳಿ ಕೇಳಿ ಬರಲಿವೆ. ಇವುಗಳ ಜೊತೆಗೆ ಅಭಿಮಾನಿಗಳು ಸ್ಮಾರಕದ ಬಳಿಯೇ ರಕ್ತದಾನ, ನೇತ್ರದಾನ ಶಿಬಿರಗಳನ್ನು ಸಹ ಏರ್ಪಡಿಸಿದ್ದಾರೆ. ಪ್ರತಿ ಹುಟ್ಟುಹಬ್ಬದಂತೆ ಇಂದು ಸಹ ಲಕ್ಷಾಂತರ ಜನ ರಕ್ತದಾನ ಹಾಗೂ ನೇತ್ರದಾನಗಳನ್ನು ಮಾಡಲಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆ ದೊಡ್ಮನೆ ಕುಟುಂಬದ ಸದಸ್ಯರೆಲ್ಲ ಸ್ಮಾರಕಕ್ಕೆ ಆಗಮಿಸಿ ವಿಶೇಷ ಪೂಜೆ ಮಾಡಲಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ಅಪ್ಪು ಪುತ್ರಿ ಆಗಮಿಸಿ ಸ್ಮಾರಕಕ್ಕೆ ಪೂಜೆ ಮಾಡಲಿದ್ದಾರೆ. ಶಿವಣ್ಣ-ಗೀತಕ್ಕ, ರಾಘವೇಂದ್ರ ರಾಜ್​ಕುಮಾರ್ ಹಾಗೂ ಕುಟುಂಬದವರು ಆಗಮಿಸಿ ಸ್ಮಾರಕಕ್ಕೆ ಪೂಜೆ ಮಾಡಲಿದ್ದಾರೆ.

ಬೆಂಗಳೂರಿನಲ್ಲಿ ಮಾತ್ರವೇ ಅಲ್ಲದೆ ಇಡೀ ರಾಜ್ಯದೆಲ್ಲೆಡೆ ಇಂದು ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಹಲವು ನಗರಗಳಲ್ಲಿ ಅಭಿಮಾನಿಗಳು ಇಂದು ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಹಲವು ಕಡೆಗಳಲ್ಲಿ ರಕ್ತದಾನ ಶಿಬಿರಗಳು ಆಯೋಜನೆಗೊಂಡಿವೆ. ಅನ್ನದಾನಗಳು ಏರ್ಪಟ್ಟಿವೆ, ಅಪ್ಪು ಅಭಿಮಾನಿಗಳು ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ತೆರಳಿ ಸೇವೆಗಳನ್ನು ಸಹ ಮಾಡುತ್ತಿದ್ದಾರೆ. ಒಟ್ಟಾರೆ ಅಪ್ಪು ಬದುಕಿದ್ದಾಗ ಮಾಡಿದ್ದ ಕೆಲಸವನ್ನು ಅವರ ಅಭಿಮಾನಿಗಳು ಮುಂದುವರೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್