ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಪ್ಪು ಮೇಲಿನ ಅಭಿಮಾನ

| Updated By: ರಾಜೇಶ್ ದುಗ್ಗುಮನೆ

Updated on: Mar 17, 2025 | 6:42 AM

ರಾಜ್ಯಾದ್ಯಂತ ಅಭಿಮಾನಿಗಳು ನಟ ಪುನೀತ್ ರಾಜ್​ಕುಮಾರ್​ ಜನ್ಮದಿನವನ್ನು ಆಚರಿಸುತ್ತಿದ್ದಾರೆ. 50ನೇ ವರ್ಷದ ಬರ್ತ್​ಡೇ ಆದ್ದರಿಂದ ಈ ಬಾರಿ ಸ್ಪೆಷಲ್ ಆಗಿದೆ. ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬದವರು ಹಾಗೂ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ‘ಅಪ್ಪು’ ಸಿನಿಮಾ ಕೂಡ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ.

ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಪ್ಪು ಮೇಲಿನ ಅಭಿಮಾನ
Puneeth Rajkumar
Follow us on

‘ಪವರ್ ಸ್ಟಾರ್’ ಪುನೀತ್ ರಾಜ್​ಕುಮಾರ್​ (Puneeth Rajkumar) ಅವರು ನಮ್ಮೊಂದಿಗೆ ಇದ್ದಿದ್ದರೆ ಇಂದು (ಮಾರ್ಚ್​ 17) ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿತ್ತು. ಈಗ ಅವರಿಲ್ಲದೇ ಜನ್ಮದಿನ ಆಚರಿಸುವಂತಾಗಿದೆ. ಪ್ರತಿ ವರ್ಷ ಮಾರ್ಚ್​ 17 ಬಂತೆಂದರೆ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇ (Puneeth Rajkumar  Birthday) ಪ್ರಯುಕ್ತ ಹಲವಾರು ಬಗೆಯ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಅಪ್ಪು ಅಭಿಮಾನಿಗಳು ಅನ್ನದಾನ, ರಕ್ತದಾನ, ನೇತ್ರದಾನ ನೋಂದಣಿ ಸೇರಿದಂತೆ ಅನೇಕ ಬಗೆಯ ಕಾರ್ಯಗಳನ್ನು ಕೈಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಪುನೀತ್ ಅವರಿಗೆ ಜನ್ಮದಿನದ ಶುಭಾಶಯ ಕೋರುವ ಮೂಲಕ ಸ್ಮರಿಸಲಾಗುತ್ತಿದೆ.

ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್​ಕುಮಾರ್ ಅವರು ನೀಡಿದ ಕೊಡುಗೆಯನ್ನು ಮರೆಯುವಂತಿಲ್ಲ. ಬಾಲನಟನಾಗಿಯೇ ಅಭಿಮಾನಿಗಳ ಮನಗೆದ್ದ ಅವರು ಹೀರೋ ಆಗಿ ಕೂಡ ಗಟ್ಟಿಯಾಗಿ ನೆಲೆನಿಂತರು. ಅಭಿನಯ, ಡ್ಯಾನ್ಸ್, ಫೈಟಿಂಗ್​ನಲ್ಲಿ ಅಪ್ಪು ಅವರಿಗೆ ಸರಿಸಾಟಿ ಯಾರಿಲ್ಲ. ಅದೇ ರೀತಿ ಜನಪರ ಕಾರ್ಯಗಳ ಮೂಲಕ ಕೂಡ ಅವರು ರಿಯಲ್ ಹೀರೋ ಎನಿಸಿಕೊಂಡರು. ಆ ಗುಣಗಳು ಅಭಿಮಾನಿಗಳಿಗೆ ಮಾದರಿ ಆಗಿವೆ.

ಇದು 50ನೇ ವರ್ಷದ ಹುಟ್ಟುಹಬ್ಬ ಆದ್ದರಿಂದ ಪುನೀತ್ ರಾಜ್​​ಕುಮಾರ್​ ಅವರು ಮೊದಲ ಸಿನಿಮಾ ‘ಅಪ್ಪು’ ಮರು ಬಿಡುಗಡೆ ಆಗಿದೆ. ಕಳೆದ ಶುಕ್ರವಾರ (ಮಾರ್ಚ್​ 14) ರೀ-ರಿಲೀಸ್ ಆದ ‘ಅಪ್ಪು’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಆ ಮೂಲಕ ಅಪ್ಪು ಮೇಲಿನ ಅಭಿಮಾನ ಎಂದಿಗೂ ಕಡಿಮೆ ಆಗಲ್ಲ ಎಂಬುದನ್ನು ಫ್ಯಾನ್ಸ್ ಸಾಬೀತು ಮಾಡಿದ್ದಾರೆ. ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ರಮ್ಯಾ, ಶರ್ಮಿಳಾ ಮಾಂಡ್ರೆ, ಸಂತೋಷ್ ಆನಂದ್​ ರಾಮ್​, ರಕ್ಷಿತಾ ಪ್ರೇಮ್, ಯುವ ರಾಜ್​​ಕುಮಾರ್​ ಸೇರಿದಂತೆ ಹಲವರು ಸಿನಿಮಾ ನೋಡಿದ್ದಾರೆ.

ಇದನ್ನೂ ಓದಿ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್

ಇದನ್ನೂ ಓದಿ: ‘ಧ್ರುವ 369’ ಸಿನಿಮಾದ ಟೀಸರ್​ನಲ್ಲಿ ಪುನೀತ್, ಡಾ. ರಾಜ್​ಕುಮಾರ್​ ಪಾತ್ರಗಳ ಮರುಸೃಷ್ಟಿ

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿ ಕೂಡ ಪುನೀತ್ ರಾಜ್​ಕುಮಾರ್​ ಅವರು ಸಕ್ರಿಯರಾಗಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮೂಲಕ ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುವ ಗುರಿ ಹೊಂದಿದ್ದರು. ಆ ಕಾಯಕವನ್ನು ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮುಂದುವರಿಸುತ್ತಿದ್ದಾರೆ. ಇಂದು ಜನ್ಮದಿನದ ಪ್ರಯುಕ್ತ ಅನೇಕರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಡಾ. ರಾಜ್​​ಕುಮಾರ್​ ಕುಟುಂಬದವರು ಕೂಡ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:42 am, Mon, 17 March 25