ಪುನೀತ್ ರಾಜ್ಕುಮಾರ್ ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಾಜ್ ಕುಟುಂಬದ ಕುಡಿ ಪುನೀತ್ ಅವರು ಇಷ್ಟು ಬೇಗೆ ಮೃತಪಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರು ಮೃತಪಟ್ಟಿರುವ ವಿಚಾರ ಫ್ಯಾನ್ಸ್ಗೆ ಶಾಕ್ ನೀಡಿದೆ. ಕೆಲವರು ಈ ಸುದ್ದಿ ಕೇಳಿ ಮೃತಪಟ್ಟಿದ್ದಾರೆ. ಈಗ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ‘ರಾಜಕುಮಾರ’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ (ನವೆಂಬರ್ 1) ಬೆಳಗ್ಗೆ ‘ರಾಜಕುಮಾರ’ ಚಿತ್ರದ ವಿಶೇಷ ಪ್ರದರ್ಶನ ಇರಲಿದೆ. ಬೆಂಗಳೂರು ನಗರದ ಶ್ರೀನಿವಾಸ ಥಿಯೇಟರ್ನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಇರಲಿದೆ. ‘ರಾಜಕುಮಾರ’ ಚಿತ್ರ ವೀಕ್ಷಣೆಗೆ ಜನರಿಗೆ ಉಚಿತ ಪ್ರವೇಶ ಇರಲಿದೆ. ಮೊದಲು ಬಂದವರಿಗೆ ಆದ್ಯತೆ ಇರಲಿದೆ ಎನ್ನಲಾಗಿದೆ. ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ.
ಪಿಆರ್ಕೆ ಪ್ರೊಡಕ್ಷನ್ ಏನಾಗಲಿದೆ?
2017ರ ಜುಲೈ 20ರಂದು ಪಿಆರ್ಕೆ ಪ್ರೊಡಕ್ಷನ್ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್ ಹೌಸ್ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್ 2016’, ಲಾ, ಫ್ರೆಂಚ್ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್ ಹೌಸ್ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್, ಮ್ಯಾನ್ ಆಫ್ ದಿ ಮ್ಯಾಚ್, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡುತ್ತಿದೆ.
ಪಿಆರ್ಕೆ ಪ್ರೊಡಕ್ಷನ್ ಆರಂಭಿಸಿದ್ದು ಪುನೀತ್ ರಾಜ್ಕುಮಾರ್ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್ಕೆ ಪ್ರೊಡಕ್ಷನ್ ಹೌಸ್ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್ಕೆ ಪ್ರೊಡಕ್ಷನ್ ಹೌಸ್ ಜತೆ ಪಿಆರ್ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.
ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್ ರಾಜ್ಕುಮಾರ್
‘ಪುನೀತ್ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ
Published On - 6:33 pm, Sun, 31 October 21