ಫಿಟ್ನೆಸ್ ಬಗ್ಗೆ ಪುನೀತ್ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್ನಲ್ಲಿ ವರ್ಕೌಟ್ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್ ಬುಲೆಟಿನ್ಗಾಗಿ ನಿರೀಕ್ಷಿಸಲಾಗುತ್ತಿದೆ.
ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಪುನೀತ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಮೇಲೆ ಒಂದು ಕ್ಷಣ ಆತಂಕ ಮೂಡಿರುವುದು ನಿಜ. ಆದರೆ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ.
ಸದ್ಯ ಪುನೀತ್ ರಾಜ್ಕುಮಾರ್ ಅವರು ‘ಜೇಮ್ಸ್’ ಸಿನಿಮಾದ ಕೆಲಸಗಳತ್ತ ಗಮನ ಹರಿಸುತ್ತಿದ್ದಾರೆ. ಆ ಚಿತ್ರಕ್ಕೆ ಚೇತನ್ಕುಮಾರ್ ನಿರ್ದೇಶಕ. ಅಲ್ಲದೇ, ಪವನ್ಕುಮಾರ್ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ಈಗ ಅನಾರೋಗ್ಯ ಉಂಟಾಗಿರುವುದರಿಂದ ಈ ಸಿನಿಮಾಗಳ ಕೆಲಸಗಳಿಗೆ ಬ್ರೇಕ್ ಬೀಳುವುದು ಅನಿವಾರ್ಯ. ಪೂರ್ತಿ ಚೇತರಿಸಿಕೊಂಡ ಬಳಿಕವಷ್ಟೇ ಅವರು ಚಿತ್ರೀಕರಣಕ್ಕೆ ಮರಳಬೇಕಿದೆ.
ಇದನ್ನೂ ಓದಿ:
ವರ್ಷದ ಹಿಂದೆ ವ್ಹೀಲ್ಚೇರ್ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್ ರಾಜ್ಕುಮಾರ್
ಜಯಂತಿ ನಿಧನಕ್ಕೆ ಕಂಬನಿ ಮಿಡಿದ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್
ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ಗಾಗಿ ಪುಟ ರೀಫ್ರೆಶ್ ಮಾಡಿ…