ಜಯಂತಿ ನಿಧನಕ್ಕೆ ಕಂಬನಿ ಮಿಡಿದ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್

ರಾಜ್​ಕುಮಾರ್​ ಹಾಗೂ ಜಯಂತಿ ಒಟ್ಟಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ರಾಜ್​ಕುಮಾರ್​ ಅವರು ಕಣ್ಣುಗಳನ್ನು ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಈಗ ಜಯಂತಿ ಕೂಡ ಈ ಸಾಲಿಗೆ ಸೇರಿದ್ದಾರೆ.

ಜಯಂತಿ ನಿಧನಕ್ಕೆ ಕಂಬನಿ ಮಿಡಿದ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್
ಜಯಂತಿ ನಿಧನಕ್ಕೆ ಕಂಬನಿಮಿಡಿದ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 26, 2021 | 6:11 PM

ವರನಟ ರಾಜ್​​ಕುಮಾರ್​ ಜತೆಗೆ ಹಿರಿಯ ನಟಿ ಜಯಂತಿ ಅತಿ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ರಾಜ್​ ಫ್ಯಾಮಿಲಿಗೆ ಜಯಂತಿ ತುಂಬಾನೇ ಹತ್ತಿರದವರಾಗಿದ್ದರು. ಈಗ ಅವರ ಸಾವಿಗೆ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್ ಕಂಬನಿ ಮಿಡಿದಿದ್ದಾರೆ.

‘ಜಯಂತಿ ಅಮ್ಮಾವ್ರು ಭಾರತೀಯ ಚಿತ್ರರಂಗದಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಮ್ಮ ತಂದೆಯವರ ಜೊತೆ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾದಂಥವರು. ನಮ್ಮ ಮನೆಯ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಅಪ್ಪಾಜಿ ಕಾಡಿಗೆ ಹೋಗಿದ್ದಂತಹ ಸಂದರ್ಭದಲ್ಲಿ ನಿತ್ಯ ಕರೆ ಮಾಡಿ ನಮ್ಮ ಕುಟುಂಬದ ಯೋಗಕ್ಷೇಮ ವಿಚಾರಿಸುತ್ತಿದ್ದರು. ನಮಗೆ ಒಳ್ಳೆಯದಾಗಲಿ ಅಂತ ಪೂಜೆಗಳನ್ನ ಮಾಡಿಸುತ್ತಿದ್ದರು’ ಎಂದು ಪತ್ರ ಆರಂಭಿಸಿದ್ದಾರೆ ಪುನೀತ್​.

‘ಅವರ ಜೊತೆ ನಾನು ‘ರಾಜ್’ ಸಿನಿಮಾದಲ್ಲಿ ಅಭಿನಯಿಸಿದ್ದು ನನ್ನ ಭಾಗ್ಯ. ಇವತ್ತು ಅವರನ್ನು ಕಳೆದುಕೊಂಡಿರುವುದು ನನಗೆ ಮತ್ತು ನಮ್ಮ ಕುಟುಂಬಕ್ಕೆ ತುಂಬಾ ನೋವುಂಟು ಮಾಡಿದೆ. ಅವರ ನೆನಪುಗಳು ನಮ್ಮೊಳಗೆ ಸದಾ ಜೀವಂತ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ. ಓಂ ಶಾಂತಿ ಎಂದು ಪುನೀತ್​ ರಾಜ್​ಕುಮಾರ್ ಬರೆದುಕೊಂಡಿದ್ದಾರೆ.

‘ಅಭಿನಯ ಶಾರದೆ ಜಯಂತಿ ಅಮ್ಮ ಅವರು ವಿಧಿವಶರಾಗಿದ್ದಾರೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾದದ್ದು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಇಂದು (ಜು.26) ಮುಂಜಾನೆ ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು. ಸಾಯುವುದಕ್ಕೂ ಮೊದಲು ಅವರು ಕಣ್ಣುಗಳನ್ನು ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದರು. ಅಂತೆಯೇ ಈಗ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ.

ರಾಜ್​ಕುಮಾರ್​ ಹಾಗೂ ಜಯಂತಿ ಒಟ್ಟಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ರಾಜ್​ಕುಮಾರ್​ ಅವರು ಕಣ್ಣುಗಳನ್ನು ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಈಗ ಜಯಂತಿ ಕೂಡ ಈ ಸಾಲಿಗೆ ಸೇರಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ.

ಇದನ್ನೂ ಓದಿ:ಸಾವಿನಲ್ಲೂ ಸಾರ್ಥಕತೆ ಕಂಡ ಜಯಂತಿ; ಕಣ್ಣುಗಳನ್ನು ದಾನ ಮಾಡಿದ ಹಿರಿಯ ನಟಿ

Actress Jayanthi Funeral: ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟಿ ಜಯಂತಿ

Published On - 6:11 pm, Mon, 26 July 21

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್