ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​
ಪುನೀತ್​ ರಾಜ್​ಕುಮಾರ್
Follow us
|

Updated on:Jun 05, 2021 | 8:18 PM

ನಟ ಪುನೀತ್​ ರಾಜ್​ಕುಮಾರ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅವರು ಹೇಳಿದ್ದನ್ನು ಶಿರಸ ಪಾಲಿಸುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಈ ಕಾರಣಕ್ಕೆ ಸರ್ಕಾರದ ಜತೆ ಕೈ ಜೋಡಿಸಿರುವ ಪುನೀತ್​, ಕೊವಿಡ್​ ವ್ಯಾಕ್ಸಿನ್​ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಜತೆಗೆ, ಕೊವಿಡ್​ ಬಗ್ಗೆ ಭಯಬೇಡ ಎಂದು ಕೂಡ ಹೇಳಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಪುನೀತ್​, ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಪುನೀತ್​ ಈ ಮೊದಲು ಕೂಡ ಸರ್ಕಾರದ ಸಾಕಷ್ಟು ಆಂದೋಲನದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಈಗ ಕೊವಿಡ್​ ಬಗ್ಗೆ ಅವರು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಆರಂಭಕ್ಕೂ ಕೆಲವೇ ದಿನ ಮೊದಲು ಪುನೀತ್ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ತೆರೆಗೆ ಬಂದಿತ್ತು. ಅದಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿತ್ತು. ಹೀಗಾಗಿ, ಸಿನಿಮಾ ಒಂದೇ ವಾರಕ್ಕೆ ಒಟಿಟಿಯಲ್ಲಿ ರಿಲೀಸ್​ ಆಯಿತು. ಸದ್ಯ, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್​ ಲಾಕ್​ಡೌನ್​ ಇರುವ ಕಾರಣಕ್ಕೆ ಚಿತ್ರದ ಕೆಲಸಗಳು ನಿಂತಿವೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

Published On - 6:54 pm, Sat, 5 June 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ