AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಕ್ಕೆ ಏಕಾಏಕಿ ಪ್ರವೇಶ ನಿರ್ಬಂಧಿಸಿದರೆ ನಾವೇನು ಮಾಡಬೇಕು?; ಸರ್ಕಾರದ ಕ್ರಮಕ್ಕೆ ಪುನೀತ್​ ಬೇಸರ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದಕ್ಕೆ ನಟ ಪುನೀತ್​ ರಾಜ್​ಕುಮಾರ್ ಬೇಸರ ಹೊರ ಹಾಕಿದ್ದಾರೆ. 

ಚಿತ್ರಮಂದಿರಕ್ಕೆ ಏಕಾಏಕಿ ಪ್ರವೇಶ ನಿರ್ಬಂಧಿಸಿದರೆ ನಾವೇನು ಮಾಡಬೇಕು?; ಸರ್ಕಾರದ ಕ್ರಮಕ್ಕೆ ಪುನೀತ್​ ಬೇಸರ
ರಾಜೇಶ್ ದುಗ್ಗುಮನೆ
|

Updated on:Apr 02, 2021 | 7:23 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಗುರುವಾರಷ್ಟೇ ತೆರೆಗೆ ಬಂದಿತ್ತು. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಹೀಗಿರುವಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತಂದಿದೆ. ಚಿತ್ರಮಂದಿರದಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶ ಹೊರಡಿಸಿದೆ. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಸಮಾಧಾನ ಹೊರ ಹಾಕಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ಫೇಸ್​ಬುಕ್​ ಲೈವ್​ನಲ್ಲಿ ಬಂದು ಪುನೀತ್​ ರಾಜ್​ಕುಮಾರ್​ ಬೇಸರ ಹೊರ ಹಾಕಿದ್ದರು. ನಂತರ ಟಿವಿ9 ಕನ್ನಡದ ಜತೆಗೂ ಅವರು ಮಾತನಾಡಿದ್ದಾರೆ.

ದಯವಿಟ್ಟು ಥಿಯೇಟರ್​​ಗಳಿಗೆ ಶೇ.100ರಷ್ಟು ಅವಕಾಶ ನೀಡಿ. ಜನರು ಕೂಡ ಮುನ್ನೆಚ್ಚರಿಕೆ ಕ್ರಮದಿಂದಲೇ ಚಿತ್ರಮಂದಿರಕ್ಕೆ ಬಂದಿರುತ್ತಾರೆ. ಶೇ.50ರಷ್ಟು ಅವಕಾಶ ನೀಡಿದರೆ ನಿರ್ಮಾಪಕರ ಗತಿ ಏನು? ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮೊದಲೇ ನಮಗೆ ಹೇಳಿದ್ರೆ ಸಿನಿಮಾ ರಿಲೀಸ್​ ಮಾಡುತ್ತಿರಲಿಲ್ಲ ಎಂದು ಪುನೀತ್​ ಟಿವಿ9 ಕನ್ನಡದ ಜತೆ ಬೇಸರ ಹಂಚಿಕೊಂಡಿದ್ದಾರೆ.

ಎಲ್ಲರೂ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಚುನಾವಣೆ ರ್ಯಾಲಿಗಳಲ್ಲಿ ಸಾವಿರಾರು ಜನರು ಸೇರುತ್ತಿದ್ದಾರೆ. ಹೀಗಿರುವಾಗ ಸಿನಿಮಾ ರಂಗವನ್ನು ಟಾರ್ಗೆಟ್​ ಮಾಡುವುದು ಸರಿಯಲ್ಲ ಎಂದು ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್​ ಆನಂದ್​ ರಾಮ್ ಫೇಸ್​ಬುಕ್​ ಲೈವ್​ನಲ್ಲಿ​ ಹೇಳಿದ್ದಾರೆ.

​ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಇತ್ತೀಚೆಗೆ ಸಲಹೆ ನೀಡಿದ್ದರು.  ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಹೀಗಾಗಿ, ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ಬ್ಯಾಡ್​ ನ್ಯೂಸ್​: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಥಿಯೇಟರ್​ ಪ್ರವೇಶಕ್ಕೆ ಕಡಿವಾಣ

 Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?

Published On - 7:15 pm, Fri, 2 April 21

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ