AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ

Happy Birthday Puneeth: ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾದ ಪುನೀತ್​ ರಾಜ್​ಕುಮಾರ್​ ಅವರಿಗೆ ಇಂದು (ಮಾ.17) ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಸ್ನೇಹಿತರು ‘ಪವರ್​ ಸ್ಟಾರ್​’ಗೆ ಶುಭಕೋರುತ್ತಿದ್ದಾರೆ.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ
ದರ್ಶನ್​ - ಪುನೀತ್​ ರಾಜ್​ಕುಮಾರ್​- ಸುದೀಪ್​
ಮದನ್​ ಕುಮಾರ್​
|

Updated on: Mar 17, 2021 | 10:36 AM

Share

ಸ್ಯಾಂಡಲ್​ವುಡ್​ನಲ್ಲಿ ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿರುವ ನಟ ಪುನೀತ್​ ರಾಜ್​ಕುಮಾರ್​ ಬುಧವಾರ (ಮಾ.17) 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲರಿಂದ ಶುಭ ಹಾರೈಕೆಗಳು ಹರಿದುಬರುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ಪವರ್​ ಸ್ಟಾರ್​’ಗೆ ವಿಶ್​ ಮಾಡುತ್ತಿದ್ದಾರೆ.

ಡಾ. ರಾಜ್​ ಕುಟುಂಬದವರನ್ನು ಕಂಡರೆ ಇಡೀ ಚಿತ್ರರಂಗಕ್ಕೆ ಎಲ್ಲಿಲ್ಲದ ಅಭಿಮಾನ. ಬಾಲನಟ ಆಗಿದ್ದಾಗಿನಿಂದಲೂ ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯವಾಗಿರುವ ಪುನೀತ್​ ರಾಜ್​ಕುಮಾರ್​ ಹಲವಾರು ಸ್ನೇಹಿತರನ್ನು ಸಂಪಾದಿಸಿದ್ದಾರೆ. ಇಂದು ಅವರ ಜನ್ಮದಿನಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಟ್ವೀಟ್​ ಮಾಡುವ ಮೂಲಕ ಪುನೀತ್​ಗೆ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಪುನೀತ್​ ರಾಜ್​ಕುಮಾರ್​’ ಎಂದು ಅಭಿಮಾನಿಗಳ ಪ್ರೀತಿಯ ‘ದಾಸ’ ಟ್ವೀಟ್​ ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಚ್ಚುಮೆಚ್ಚು. ಇಬ್ಬರ ನಡುವೆ ಒಳ್ಳೆಯ ಒಡನಾಟ ಇದೆ. ಅವರು ಕೂಡ ಸೋಶಿಯಲ್​ ಮೀಡಿಯಾ ಮೂಲಕ ಅಪ್ಪುಗೆ ಶುಭ ಕೋರಿದ್ದಾರೆ. ಸುದೀಪ್​ ಮತ್ತು ದರ್ಶನ್​ ಮಾತ್ರವಲ್ಲದೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ಗೆ ವಿಶ್​ ಮಾಡಿದ್ದಾರೆ.

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಪುನೀತ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಜಾತ್ರೆಯ ರೀತಿ ಆಚರಿಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಆ ಸಂಭ್ರಮಕ್ಕೆ ಬ್ರೇಕ್​ ಹಾಕಲಾಗಿದೆ. ಕಳೆದ ವರ್ಷ ಕೂಡ ಕೋವಿಡ್​-19 ಭೀತಿಯಿಂದ ಪುನೀತ್​ ಬರ್ತ್​ಡೇ ಕ್ಯಾನ್ಸಲ್​ ಮಾಡಲಾಗಿತ್ತು. ‘ಈ ಬಾರಿಯೂ ನಾನು ಮನೆಯಲ್ಲಿ ಇರುವುದಿಲ್ಲ. ಹಾಗಾಗಿ ಯಾರೂ ಕೂಡ ಮನೆ ಬಳಿ ಬರುವುದು ಬೇಡ’ ಎಂದು ಪುನೀತ್​ ಎರಡು ದಿನ ಮುನ್ನವೇ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದರು.

ಕುಟುಂಬದವರ ಜೊತೆ ಸೇರಿ ಪುನೀತ್​ ಇಂದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೇ ತಿಂಗಳ 23ರಿಂದ ಪ್ರತಿ ಜಿಲ್ಲೆಗಳಿಗೂ ತೆರಳಿ ಅಭಿಮಾನಿಗಳ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಪುನೀತ್ ತಿಳಿಸಿದ್ದಾರೆ. ಏ.1ರಂದು ಅವರ ಯುವರತ್ನ ಸಿನಿಮಾ ಬಿಡುಗಡೆ ಆಗಲಿದ್ದು, ಈಗಾಗಲೇ ದೊಡ್ಡಮಟ್ಟದ ಹೈಪ್​ ಸೃಷ್ಟಿ ಮಾಡಿದೆ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು