AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಇಲ್ಲದ ಮೊದಲ ಬರ್ತ್​ಡೇ; ನೋವನ್ನು ನುಂಗಿ ಸಂಭ್ರಮಿಸಿದ ಅಭಿಮಾನಿಗಳು; ಇಲ್ಲಿದೆ ಪೂರ್ತಿ ವಿವರ

Puneeth Rajkumar Birthday: ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷ ಪುನೀತ್ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಕೊವಿಡ್​ ಕಡಿಮೆ ಇದೆ. ಹೀಗಾಗಿ, ಅವರು ಬದುಕಿದ್ದರೆ ಈ ವಿಶೇಷ ದಿನವನ್ನು ಫ್ಯಾನ್ಸ್ ಜತೆ ಸೆಲೆಬ್ರೇಟ್​ ಮಾಡುತ್ತಿದ್ದರು.

ಅಪ್ಪು ಇಲ್ಲದ ಮೊದಲ ಬರ್ತ್​ಡೇ; ನೋವನ್ನು ನುಂಗಿ ಸಂಭ್ರಮಿಸಿದ ಅಭಿಮಾನಿಗಳು; ಇಲ್ಲಿದೆ ಪೂರ್ತಿ ವಿವರ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Mar 17, 2022 | 7:36 AM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರು ಇಂದು (ಮಾರ್ಚ್​ 17) ಬದುಕಿದ್ದರೆ 47ನೇ ವರ್ಷದ ಬರ್ತ್​ಡೇಯನ್ನು ಅಭಿಮಾನಿಗಳ ಜತೆಗೂಡಿ ಆಚರಿಸಿಕೊಳ್ಳುತ್ತಿದ್ದರು. ಆದರೆ, ಇಂದು ಅವರು ನಮ್ಮೊಂದಿಗೆ ಇಲ್ಲ. ಅವರಿಲ್ಲ ಎಂಬ ನೋವಿನಲ್ಲೇ ಅಭಿಮಾನಿಗಳು ಬರ್ತ್​ಡೇ ಆಚರಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ (Kanteerava Studio) ಅವರ ಸಮಾಧಿಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ. ಜನ್ಮದಿನದಂದು ಪುನೀತ್​ ಸಮಾಧಿಗೆ ವಿಶೇಷ ನಮನ ಸಲ್ಲಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಪ್ಪು (Appu) ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಅವರ ಫೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷ ಪುನೀತ್ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಕೊವಿಡ್​ ಕಡಿಮೆ ಇದೆ. ಹೀಗಾಗಿ, ಅವರು ಬದುಕಿದ್ದರೆ ಈ ವಿಶೇಷ ದಿನವನ್ನು ಫ್ಯಾನ್ಸ್ ಜತೆ ಸೆಲೆಬ್ರೇಟ್​ ಮಾಡುತ್ತಿದ್ದರು. ಆದರೆ, ಇನ್ನುಮುಂದೆ ಅದು ಸಾಧ್ಯವೇ ಇಲ್ಲ ಎನ್ನುವುದನ್ನು ನೆನೆದು ಅಭಿಮಾನಿಗಳು ದುಃಖಪಡುತ್ತಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಡಾ. ರಾಜ್​ ಕುಟುಂಬದವರು ರಾತ್ರಿಯೇ ಬಂದು ಕೇಕ್​ ಕತ್ತರಿಸಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಪುನೀತ್​, ಸಹೋದರರಾದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಕುಟುಂಬದ ಇತರ ಸದಸ್ಯರು ಅಪ್ಪು ಸಮಾಧಿಗೆ ಭೇಟಿ ನೀಡಿ ಇಂದು ಪೂಜೆ ಸಲ್ಲಿಸಲಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸೋಕೆ ಕಂಠೀರವದಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಅಪ್ಪು ಸಮಾಧಿಯನ್ನು ಹೂವಿನಿಂದ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ.

ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ಚೇತನ್​ ಕುಮಾರ್ ನಿರ್ದೇಶನದ ‘ಜೇಮ್ಸ್’ ಸಿನಿಮಾ ತೆರೆಕಂಡಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಕರ್ನಾಟಕದಾದ್ಯಂತ ಸಾವಿರಾರು ಶೋಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರು ಒಂದರಲ್ಲೇ 800ಕ್ಕೂ ಅಧಿಕ ಶೋ ಅರೇಂಜ್​ ಮಾಡಲಾಗಿದೆ. ಇದು ಅಪ್ಪು ಮೇಲಿನ ಅಭಿಮಾನಕ್ಕೆ ಸಾಕ್ಷಿ ಆಗಿದೆ. ಅನೇಕ ಸೆಲೆಬ್ರಿಟಿಗಳು ‘ಜೇಮ್ಸ್​’ ಸಿನಿಮಾ ವೀಕ್ಷಿಸುವಂತೆ ಕರೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಪುನೀತ್ ಜತೆ ಇರುವ ಫೋಟೋಗಳನ್ನು ಹಂಚಿಕೊಂಡು ಬರ್ತ್​​ಡೇ ವಿಶ್​ ಮಾಡುತ್ತಿದ್ದಾರೆ. ಅಭಿಮಾನಿಗಳು ‘ಅಪ್ಪು ಅಮರ’ ಎನ್ನುತ್ತಿದ್ದಾರೆ. ಹಲವು ಸಾಮಾಜಿಕ ಕೆಲಸಗಳು ಕೂಡ ಇಂದು ಆಗುತ್ತಿದೆ.

ಇದನ್ನೂ ಓದಿ:ಪುನೀತ್​ ರಾಜ್​ಕುಮಾರ್ ಬಯೋಗ್ರಫಿ ಬಿಡುಗಡೆ ಮಾಡಿ, ಭಾವುಕರಾದ ಕಿಚ್ಚ ಸುದೀಪ್​ 

ಹೆಲ್ಮೆಟ್​ ಜಾಗೃತಿ: ಪುನೀತ್​ ರಾಜ್​ಕುಮಾರ್​ ವಿಡಿಯೋ ನೋಡಿ ಪೊಲೀಸರ ಎದುರು ಅಶ್ವಿನಿ ಭಾವುಕ

Published On - 6:00 am, Thu, 17 March 22

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!