Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಪುನೀತ್​ ರಾಜ್​ಕುಮಾರ್​ ಜೀವನದ ವಿವರ: ಫ್ಯಾನ್ಸ್​ಗೆ ಹೆಮ್ಮೆ

Puneeth Rajkumar Biography | Bangalore University Syllabus: ‘ವಾಣಿಜ್ಯ ಕನ್ನಡ 3’ರಲ್ಲಿ ಪುನೀತ್ ರಾಜ್​ಕುಮಾರ್​ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಳ್ಳಲಾಗಿದೆ. ಶರಣು ಹುಲ್ಲೂರು ಬರೆದ ‘ನೀನೇ ರಾಜಕುಮಾರ’ ಕೃತಿಯ ಒಂದು ಅಧ್ಯಾಯವನ್ನು ಇದಕ್ಕಾಗಿ ಆಯ್ದುಕೊಳ್ಳಲಾಗಿದೆ.

Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಪುನೀತ್​ ರಾಜ್​ಕುಮಾರ್​ ಜೀವನದ ವಿವರ: ಫ್ಯಾನ್ಸ್​ಗೆ ಹೆಮ್ಮೆ
ಬಿ. ಕಾಂ ಪಠ್ಯದಲ್ಲಿ ಪುನೀತ್​ ರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on:Dec 22, 2022 | 2:25 PM

ಜನಪ್ರಿಯ ನಟ ‘ಪವರ್ ಸ್ಟಾರ್’ ಪುನೀತ್ ರಾಜ್​ಕುಮಾರ್ (Puneeth Rajkumar) ಜೀವನದ ವಿವರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರ್ಕಾರಕ್ಕೆ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ. ಪತ್ರಕರ್ತ ಡಾ. ಶರಣು ಹುಲ್ಲೂರು (Sharanu Hulluru) ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ’ ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದು’ ಭಾಗವನ್ನು ಪಠ್ಯದಲ್ಲಿ (Bangalore University Syllabus) ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ.

ಡಾ. ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ. ಅಮರೇಂದ್ರ ಶೆಟ್ಟಿ ಆರ್, ಡಾ. ಕ.ನಿಂ. ಹೊಯ್ಸಳಾದಿತ್ಯ, ಡಾ. ಶಿವರಾಜ ಬಿ.ಇ ಹಾಗೂ ಡಾ. ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: Puneeth Rajkumar: ನಟಿ ಆಶಾರಾಣಿ ಸೀರೆ ಮೇಲೆ ಪುನೀತ್​ ಭಾವಚಿತ್ರ; ಇದು ಅಭಿಮಾನದ ಡಿಸೈನ್​

ಇದನ್ನೂ ಓದಿ
Image
Ayyappa Devotee: ಮಂಡ್ಯದಲ್ಲಿ ಅಯ್ಯಪ್ಪನ ವಿಶೇಷ ಭಕ್ತ ಪ್ರತ್ಯಕ್ಷ, ಪುನೀತ್ ಬಾವುಟ ಹಿಡಿದು ಶಬರಿಮಲೆಗೆ ಪಾದಯಾತ್ರೆ
Image
Shivarajkumar: ಪುನೀತ್ ಅಪ್ಪಟ ಅಭಿಮಾನಿ ಮಗುವಿಗೆ ‘ಅಪ್ಪು’ ಎಂದು ನಾಮಕರಣ ಮಾಡಿದ ಶಿವಣ್ಣ  
Image
ಜಪಾನ್​​ನಿಂದ ಬಂದು ರಾಘಣ್ಣನನ್ನು ಭೇಟಿ ಮಾಡಿದ ಪುನೀತ್ ರಾಜ್​ಕುಮಾರ್​ ಫ್ಯಾನ್ಸ್
Image
Puneeth Rajkumar: ಪುನೀತ್​ ಮೇಲೆ RSS ಕಾರ್ಯಕರ್ತೆ ಗಂಭೀರ ಆರೋಪ; ಮೌನ ಮುರಿಯಬೇಕಿದೆ ರಿಷಬ್​ ಶೆಟ್ಟಿ

ಇತ್ತೀಚೆಗಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್​ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:25 pm, Thu, 22 December 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ