AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಸಂಭ್ರಮಕ್ಕೆ ಪುನೀತ್​​ ರಾಜ್​ಕುಮಾರ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಪೋಸ್ಟರ್​ ರಿಲೀಸ್​

Puneeth Rajkumar: ‘ಲಕ್ಕಿ ಮ್ಯಾನ್​’ ಸಿನಿಮಾದ ಕಲಾವಿದರು ಈ ಪೋಸ್ಟರ್​ ಅನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಎಲ್ಲರೂ ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ನ್ಯೂ ಇಯರ್​ ಸಂಭ್ರಮಕ್ಕೆ ಪುನೀತ್​​ ರಾಜ್​ಕುಮಾರ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಪೋಸ್ಟರ್​ ರಿಲೀಸ್​
‘ಲಕ್ಕಿ ಮ್ಯಾನ್​’ ಚಿತ್ರದ ಪೋಸ್ಟರ್​
TV9 Web
| Updated By: ಮದನ್​ ಕುಮಾರ್​|

Updated on: Dec 31, 2021 | 12:56 PM

Share

ಹೊಸ ವರ್ಷದ ಸ್ವಾಗತಕ್ಕೆ ಇಡೀ ಪ್ರಪಂಚ ಸಜ್ಜಾಗಿದೆ. ಅನೇಕ ಸಿನಿಮಾಗಳು ಈ ಸಂದರ್ಭದಲ್ಲಿ ಪೋಸ್ಟರ್​ ರಿಲೀಸ್​ ಮೂಲಕ ಸಿನಿಪ್ರಿಯರಿಗೆ ವಿಶ್​ ಮಾಡಲಿವೆ. ಅದೇ ರೀತಿ ಪುನೀತ್​ ರಾಜ್​ಕುಮಾರ್​ ನಟನೆಯ ‘ಲಕ್ಕಿ ಮ್ಯಾನ್​’ (Lucky Man Movie) ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿದೆ. ಇದರಲ್ಲಿ ಪುನೀತ್​ ಅವರನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಸಿನಿಮಾದಲ್ಲಿ ‘ಲವ್​ ಮಾಕ್ಟೇಲ್​’ ಖ್ಯಾತಿಯ ಡಾರ್ಲಿಂಗ್​ ಕೃಷ್ಣ (Darling Krishna), ಸಂಗೀತಾ ಶೃಂಗೇರಿ, ರೋಷಿನಿ ಪ್ರಕಾಶ್​, ನಾಗಭೂಷಣ ಮುಂತಾದವರು ಅಭಿನಯಿಸಿದ್ದಾರೆ. ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ನಿಧನರಾಗುವುದಕ್ಕೂ ಮುನ್ನ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆದರೆ ಆ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ನಟಿಸುತ್ತಿದ್ದ ಸಿನಿಮಾಗಳ ಪೈಕಿ ‘ಲಕ್ಕಿ ಮ್ಯಾನ್​’ ಚಿತ್ರ ಕೂಡ ಪ್ರಮುಖವಾದದ್ದು.

ಕೆಲವೇ ದಿನಗಳ ಹಿಂದೆ ಈ ಚಿತ್ರದ ಕೆಲವು ಫೋಟೋಗಳು ಲಭ್ಯವಾಗಿದ್ದವು. ಪುನೀತ್​ ರಾಜ್​ಕುಮಾರ್​ ಅವರು ಪ್ರಭುದೇವ ಜತೆ ಡ್ಯಾನ್ಸ್​ ಮಾಡುತ್ತಿದ್ದ ಫೋಟೋಗಳನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದರು. ಈಗ ಈ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆಯಾಗಿ ನಿರೀಕ್ಷೆ ಮೂಡಿಸಿದೆ.

‘ಲಕ್ಕಿ ಮ್ಯಾನ್​’ ಸಿನಿಮಾದ ಕಲಾವಿದರು ಈ ಪೋಸ್ಟರ್​ ಅನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಪ್ಪು ಅಭಿಮಾನಿಗಳು ಕಮೆಂಟ್​ಗಳ ಮೂಲಕ ಕಾತರ ವ್ಯಕ್ತಪಡಿಸುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಎಲ್ಲರೂ ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್​ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ತಮಿಳಿನ ‘ಓಹ್ ಮೈ ಕಡವುಳೆ’ ಸಿನಿಮಾದ ರಿಮೇಕ್​ ಇದು. ಈ ಚಿತ್ರದಲ್ಲಿ ಪುನೀತ್​​ ರಾಜ್​ಕುಮಾರ್​ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾರ್​ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್​ಕುಮಾರ್​ ಅವರ ಕುರಿತು ಈ ಸಾಂಗ್​ ರಚಿತವಾಗಿದೆ ಎಂಬುದು ವಿಶೇಷ.

‘ಲಕ್ಕಿ ಮ್ಯಾನ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​​ ಕೆಲಸಗಳು ನಡೆಯುತ್ತಿವೆ. ಡಬ್ಬಿಂಗ್ ಮಾಡುವ ವೇಳೆ ಪುನೀತ್​ ಅವರನ್ನು ಡಾರ್ಲಿಂಗ್​ ಕೃಷ್ಣ ತುಂಬ ಮಿಸ್​ ಮಾಡಿಕೊಂಡರು. ಡಬ್ಬಿಂಗ್​ ಸಮಯದ ಒಂದು ವಿಡಿಯೋ ತುಣುಕನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಅದನ್ನು ಕಂಡು ಅಭಿಮಾನಿಗಳು ಎಮೋಷನಲ್​ ಆಗಿದ್ದರು. ಪರ್ಸಾ ಪಿಕ್ಚರ್ಸ್ ಬ್ಯಾನರ್​ ಮೂಲಕ ಈ ಸಿನಿಮಾ ಮೂಡಿಬರುತ್ತಿದೆ. ಆದಷ್ಟು ಬೇಗ ಪುನೀತ್​ ರಾಜ್​ಕುಮಾರ್​​ ಅವರನ್ನು ಬೆಳ್ಳಿಪರದೆ ಮೇಲೆ ನೋಡಬೇಕು ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ; ಅಪ್ಪು ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ

ಅಪ್ಪು ಇಲ್ಲದೇ 2 ತಿಂಗಳು: ಪುನೀತ್​​ ನಿಧನದ ಬಳಿಕ ನಡೆದ 10 ಪ್ರಮುಖ ಘಟನೆಗಳೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ