ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದರು. ಸಂಜೆ 4 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಿದರು.

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು
ಧೃತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 30, 2021 | 6:17 PM

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದರು. ಸಂಜೆ 4 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಿದರು. ಏರ್‌ಪೋರ್ಟ್‌ನಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಅವರು ಆಗಮಿಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಅವರು ಅಮೆರಿಕಕ್ಕೆ ತೆರಳಿದ್ದರು.

ಅಂತ್ಯಕ್ರಿಯೆ ಯಾವಾಗ?

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 6:14 pm, Sat, 30 October 21

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ