ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ

ಧೃತಿ ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಲಿದ್ದಾರೆ.

ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ
ಧೃತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 30, 2021 | 2:27 PM

ನ್ಯೂಯಾರ್ಕ್​ನಲ್ಲಿ ಅಧ್ಯಯನ ಮಾಡುತ್ತಿರುವ ಪುನೀತ್​ ರಾಜ್​ಕುಮಾರ್​ ಮಗಳು ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಲಿದ್ದಾರೆ. ಏರ್‌ಪೋರ್ಟ್‌ನಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಅವರು ಬರಲಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಅವರು ಅಮೆರಿಕಕ್ಕೆ ತೆರಳಿದ್ದರು.

ದೆಹಲಿಯಲ್ಲಿ ಧೃತಿ ವಿಮಾನ ಬದಲಾವಣೆಗೆ ಕರ್ನಾಟಕ ಭವನದ ಅಧಿಕಾರಿಗಳ ಸಹಾಯ ಮಾಡಿದ ಬಗ್ಗೆ ವರದಿ ಆಗಿದೆ. ಬೆಂಗಳೂರಿಗೆ ತೆರಳಲು ಅಧಿಕಾರಿಗಳು ಧೃತಿಗೆ ಬೋರ್ಡಿಂಗ್ ಪಾಸ್ ರೆಡಿ ಮಾಡಿದ್ದರು. ಒಡೋಡಿ ಬಂದು ಧೃತಿ ಬೆಂಗಳೂರು ವಿಮಾನ ಹತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಂತ್ಯಕ್ರಿಯೆ ಯಾವಾಗ?

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್