AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ನಾನೂ ಅವರ ಕುಟುಂಬದವಳಾಗಿದ್ದೆ’: ಅಪ್ಪು ಅಂತಿಮ ನಮನದ ಬಳಿಕ ರಾಧಿಕಾ ಕುಮಾರಸ್ವಾಮಿ ಮಾತು

Puneeth Rajkumar Heart Attack: ಪುನೀತ್​ ರಾಜ್​ಕುಮಾರ್​ ಜೊತೆ ಒಂದಾದರೂ ಸಿನಿಮಾ ಮಾಡಬೇಕು ಎಂಬುದು ರಾಧಿಕಾ ಕುಮಾರಸ್ವಾಮಿ ಅವರ ಕನಸಾಗಿತ್ತು. ಆದರೆ ಅದು ನನಸಾಗುವುದಕ್ಕೂ ಮುನ್ನವೇ ವಿಧಿ ತನ್ನ ಅಟ್ಟಹಾಸ ಮೆರೆದಿದೆ.

Puneeth Rajkumar: ‘ನಾನೂ ಅವರ ಕುಟುಂಬದವಳಾಗಿದ್ದೆ’: ಅಪ್ಪು ಅಂತಿಮ ನಮನದ ಬಳಿಕ ರಾಧಿಕಾ ಕುಮಾರಸ್ವಾಮಿ ಮಾತು
ಪುನೀತ್​ ರಾಜ್​ಕುಮಾರ್​, ರಾಧಿಕಾ ಕುಮಾರಸ್ವಾಮಿ
TV9 Web
| Updated By: ಮದನ್​ ಕುಮಾರ್​|

Updated on:Oct 30, 2021 | 3:29 PM

Share

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದುಬರುತ್ತಿದೆ. ಸಾವಿರಾರು ಮಂದಿ ಸೆಲೆಬ್ರಿಟಿಗಳು ಬಂದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ನಟಿ ರಾಧಿಕಾ ಕುಮಾರಸ್ವಾಮಿ ಕೂಡ ಆಗಮಿಸಿದ್ದಾರೆ. ಬಳಿಕ ಟಿವಿ9 ಜೊತೆ ಮಾತನಾಡಿದ ಅವರು ಅಪ್ಪು ಜೊತೆಗಿನ ನೆನಪುಗಳನ್ನು ಹಂಚಿಕೊಂಡರು. ಪುನೀತ್​ ರಾಜ್​ಕುಮಾರ್​ ಅವರ ಒಳ್ಳೆಯ ಗುಣಗಳನ್ನು ಅವರು ಕೊಂಡಾಡಿದರು. ‘ಪವರ್​ ಸ್ಟಾರ್​’ ಜೊತೆ ಸಿನಿಮಾ ಮಾಡಬೇಕು ಎಂದುಕೊಂಡಿದ್ದ ರಾಧಿಕಾ ಅವರ ಕನಸು ಕನಸಾಗಿಯೇ ಉಳಿದುಕೊಂಡಿದೆ.

‘ನಾನು ಮತ್ತು ಅಪ್ಪು ಒಂದೇ ಸಮಯದಲ್ಲಿ ಚಿತ್ರರಂಗಕ್ಕೆ ಬಂದವರು. ಅವರ ಜೊತೆ ನಟಿಸದೇ ಇರಬಹುದು. ಆದರೆ ಅನೇಕ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಭಾಗವಹಿಸಿದ್ದೆವು. ನಾಲ್ಕು ದಿನಗಳ ಹಿಂದೆ ನಾನು ಅವರ ಜೊತೆ ಮಾತನಾಡಿದ್ದೆ. ನಮ್ಮ ಹೋಮ್ ಬ್ಯಾನರ್​ನಲ್ಲಿ ಅವರಿಗಾಗಿ ಒಂದು ಸಿನಿಮಾ ಮಾಡಬೇಕು ಅಂದುಕೊಂಡಿದ್ದೆ. ಈ ಬಗ್ಗೆ ಚರ್ಚೆ ಮಾಡಲು ಅವರನ್ನು ಭೇಟಿ ಆಗುವುದಾಗಿ ತಿಳಿಸಿದ್ದೆ. ನಮಗಾಗಿ ಒಂದು ಸಿನಿಮಾ ಮಾಡಿ ಎಂದು ಕೇಳಿಕೊಂಡಿದ್ದೆ. ಖಂಡಿತವಾಗಿ ಮಾಡುತ್ತೇನೆ ಅಂತ ಒಪ್ಪಿಕೊಂಡಿದ್ದರು’ ಎಂದು ರಾಧಿಕಾ ಹೇಳಿದ್ದಾರೆ.

‘ಆರು ವರ್ಷಗಳ ಹಿಂದೆ ನಾನು ಅವರ ಜೊತೆ ಕೆಲಸ ಮಾಡಬೇಕಿತ್ತು. ಆದರೆ ಸಾಧ್ಯವಾಗಿರಲಿಲ್ಲ. ನಾನು ಶಿವಣ್ಣನ ಜೊತೆ ಅಣ್ಣ-ತಂಗಿ ಕಥೆಯ ಸಿನಿಮಾ ಮಾಡಿದ ಬಳಿಕ ಅಪ್ಪಾಜಿಯವರ ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೆ. ಅಪ್ಪು ಅವರನ್ನು ಈ ರೀತಿ ನೋಡುತ್ತೇನೆ ಅಂತ ಯಾವತ್ತೂ ಅಂದುಕೊಂಡಿರಲಿಲ್ಲ’ ಎಂದು ರಾಧಿಕಾ ಕಂಬನಿ ಸುರಿಸಿದ್ದಾರೆ.

‘ಸದ್ಯದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ಸರ್ಕಾರಕ್ಕೆ, ಪೊಲೀಸ್​ ಅಧಿಕಾರಿಗಳಿಗೆ ಹಾಗೂ ತಾಳ್ಮೆಯಿಂದ ನಡೆದುಕೊಳ್ಳುತ್ತಿರುವ ಅಭಿಮಾನಿಗಳಿಗೆ ಧನ್ಯವಾದಗಳು. ಪುನೀತ್​ ಪತ್ನಿ ಅಶ್ವಿನಿ ಅವರಿಗೆ ಈ ನೋವು ಮರೆಯಲು ಸಾಧ್ಯವಿಲ್ಲ. ಆದರೆ ನೋವು ಸಹಿಸುವ ಶಕ್ತಿಯನ್ನು ಆ ದೇವರು ನೀಡಲಿ. ಅಪ್ಪು ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಧಿಕಾ ಕುಮಾರಸ್ವಾಮಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

‘ನನ್ನ ಬೈರಾದೇವಿ ಸಿನಿಮಾದ ಶೂಟಿಂಗ್​ ವೇಳೆ ಕುಟುಂಬ ಸಮೇತರಾಗಿ ಪುನೀತ್​ ಅವರು ಚಿತ್ರೀಕರಣದ ಸೆಟ್​ಗೆ ಬಂದಿದ್ದರು. ಅವರ ಜೊತೆ ಒಂದಾದರೂ ಸಿನಿಮಾ ಮಾಡಬೇಕು ಎಂಬ ದೊಡ್ಡ ಕನಸನ್ನು ನಾನು ಇಟ್ಟುಕೊಂಡಿದ್ದೆ. ಅಪ್ಪು ಬೇರೆಲ್ಲಿಯೂ ಹೋಗಿಲ್ಲ. ನಮ್ಮ ಹೃದಯದಲ್ಲಿ ಸದಾ ಇರುತ್ತಾರೆ’ ಎಂದು ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Published On - 3:28 pm, Sat, 30 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ