Puneeth Rajkumar Death: ಭಾನುವಾರ ಬೆಳಗ್ಗೆ 6 ಗಂಟೆಯಿಂದ ಪುನೀತ್ ಅಂತಿಮಯಾತ್ರೆ

Puneeth Raj last Rites: ಸ್ಯಾಂಡಲ್​ವುಡ್ ನಟ ಪುನೀತ್ ರಾಜಕುಮಾರ್ ನಿನ್ನೆ (ಅಕ್ಟೋಬರ್ 29) ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಪ್ರಸ್ತುತ ಅಭಿಮಾನಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Puneeth Rajkumar Death: ಭಾನುವಾರ ಬೆಳಗ್ಗೆ 6 ಗಂಟೆಯಿಂದ ಪುನೀತ್ ಅಂತಿಮಯಾತ್ರೆ
ಪುನೀತ್ ರಾಜ್​ಕುಮಾರ್
Follow us
TV9 Web
| Updated By: Digi Tech Desk

Updated on:Jan 26, 2023 | 10:26 AM

ಸ್ಯಾಂಡಲ್​ವುಡ್ ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜಕುಮಾರ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಪುನೀತ್ ರಾಜಕುಮಾರ್ ಅವರಿಗೆ ಸಕಲ ಸರ್ಕಾರಿ​ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಡಾ.ರಾಜ್​​ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ನಾಳೆ ನಟ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ. ಈ ಬಗ್ಗೆ ರಾಜ್‌ಕುಮಾರ್ ಕುಟುಂಬಸ್ಥರ ಜತೆ ಚರ್ಚಿಸಿದ್ದೇವೆ. ಇಂದು ಇಡೀ ದಿನ ದರ್ಶನ ಪಡೆಯುವುದಕ್ಕೆ ಅವಕಾಶವಿದೆ. ಅಭಿಮಾನಿಗಳು ಶಾಂತಿಯುತವಾಗಿ ಬಂದು ದರ್ಶನ ಪಡೆಯಿರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

Published On - 7:45 am, Sat, 30 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ