Appu Samadhi: ರಾತ್ರಿ ಇಡೀ ಪುನೀತ್​ ಸಮಾಧಿ ದರ್ಶನಕ್ಕೆ ಅವಕಾಶ; ಸಾಧು ಕೋಕಿಲ ತಂಡದಿಂದ ಅಪ್ಪುಗೆ ಸಂಗೀತ ನಮನ

Puneeth Rajkumar Death Anniversary: ಶುಕ್ರವಾರ (ಅ.28) ರಾತ್ರಿಯಿಂದ ಆರಂಭವಾಗಿ ಶನಿವಾರ ರಾತ್ರಿವರೆಗೂ ಸಾಧು ಕೋಕಿಲ ಮ್ಯೂಸಿಕಲ್ ನೈಟ್ಸ್ ನಡೆಯುತ್ತದೆ. ಬರೋಬ್ಬರಿ 24 ಗಂಟೆಗಳ ಕಾಲ ಸಂಗೀತ ಕಾರ್ಯಕ್ರಮ‌ ಜರುಗಲಿದೆ.

Appu Samadhi: ರಾತ್ರಿ ಇಡೀ ಪುನೀತ್​ ಸಮಾಧಿ ದರ್ಶನಕ್ಕೆ ಅವಕಾಶ; ಸಾಧು ಕೋಕಿಲ ತಂಡದಿಂದ ಅಪ್ಪುಗೆ ಸಂಗೀತ ನಮನ
ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on:Oct 27, 2022 | 3:40 PM

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್ ನಿಧನರಾಗಿ ಒಂದು ವರ್ಷ ಕಳೆಯುತ್ತಿದೆ. ಅವರ ಮೊದಲ ವರ್ಷದ ಪುಣ್ಯ ಸ್ಮರಣೆ (Puneeth Rajkumar Death Anniversary) ಅಂಗವಾಗಿ ರಾಜ್ಯಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಪ್ಪು ಸಮಾಧಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬರುತ್ತಿದ್ದಾರೆ. ಹಾಗಾಗಿ ಅಕ್ಟೋಬರ್​ 28ರ ರಾತ್ರಿ ಪೂರ್ತಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ. ದೂರದ ಊರುಗಳಿಂದ ಬಂದ ಅನೇಕ ಅಭಿಮಾನಿಗಳಿಗೆ ಇದರಿಂದ ಅನುಕೂಲ ಆಗಲಿದೆ. ಎಲ್ಲರಿಗೂ ಅಪ್ಪು ಸಮಾಧಿಯ ದರ್ಶನ ಸಿಗಲಿದೆ. ಇದರ ಜೊತೆಗೆ ಸಾಧು ಕೋಕಿಲ (Sadhu Kokila) ಅವರು ಪುನೀತ್​ಗೆ ಸಂಗೀತ ನಮನ ಸಲ್ಲಿಸಲು ನಿರ್ಧರಿಸಿದ್ದಾರೆ. ಅವರ ತಂಡದವರು ಅಪ್ಪು ಸಮಾಧಿ ಬಳಿ ಸಂಗೀತ ಕಾರ್ಯಕ್ರಮ ನಡೆಸಲಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರನ್ನು ಕಂಡರೆ ಜನಸಾಮಾನ್ಯರ ರೀತಿ ಚಿತ್ರರಂಗದವರಿಗೂ ಅಚ್ಚುಮೆಚ್ಚು. ಇಂದು ಅವರು ಇಲ್ಲ ಎಂಬುದನ್ನು ಯಾರಿಂದಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ಬಗೆಯಲ್ಲಿ ಅವರಿಗೆ ನಮನ ಸಲ್ಲಿಸಲಾಗುತ್ತಿದೆ. ಸಾಧು ಕೋಕಿಲ ಅವರು ನಟನೆ ಜೊತೆಗೆ ಸಂಗೀತ ಕ್ಷೇತ್ರದಲ್ಲೂ ಹೆಸರು ಮಾಡಿದ್ದಾರೆ. ತಮ್ಮ ತಂಡದ ಜೊತೆ ಸೇರಿ ಅವರು ಅಪ್ಪುಗಾಗಿ ಸಂಗೀತ ನಮನ ಸಲ್ಲಿಸಲು ಸಜ್ಜಾಗಿದ್ದಾರೆ.

ಶುಕ್ರವಾರ (ಅ.28) ರಾತ್ರಿಯಿಂದ ಆರಂಭವಾಗಿ ಶನಿವಾರ ರಾತ್ರಿವರೆಗೂ ಸಾಧು ಮ್ಯೂಸಿಕಲ್ ನೈಟ್ಸ್ ನಡೆಯುತ್ತದೆ. ಬರೋಬ್ಬರಿ 24 ಗಂಟೆಗಳ ಕಾಲ ಸಂಗೀತ ಕಾರ್ಯಕ್ರಮ‌ ಜರುಗಲಿದೆ. ಎಲ್ಲ ಅಭಿಮಾನಿಗಳೂ ಈ ಕಾರ್ಯಕ್ರಮವನ್ನು ವೀಕ್ಷಿಸಬಹುದು. ಎಲ್ಲರಿಗೂ ಅವಕಾಶ ಇರುತ್ತದೆ. ಪುನೀತ್ ರಾಜ್​ಕುಮಾರ್​ ನಟನೆಯ ಸಿನಿಮಾದ ಹಾಡುಗಳ ಜೊತೆಯಲ್ಲಿ ಪುನೀತ್ ಅವರಿಗೆ ಇಷ್ಟವಾಗಿದ್ದ ಗೀತೆಗಳನ್ನು ಈ ಕಾರ್ಯಕ್ರಮದಲ್ಲಿ ಹಾಡಲಾಗುತ್ತದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಪುನೀತ್​ ರಾಜ್​ಕುಮಾರ್​ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿಯೇ ‘ಗಂಧದ ಗುಡಿ’ ಕೂಡ ರಿಲೀಸ್​ ಆಗುತ್ತಿರುವುದು ವಿಶೇಷ. ಇದು ಪುನೀತ್ ಅವರ ಕನಸಿನ ಪ್ರಾಜೆಕ್ಟ್​. ಅದಕ್ಕೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡುತ್ತಿದ್ದಾರೆ. ಅಪ್ಪು ಸಮಾಧಿ ಸುತ್ತಮುತ್ತ ಹಾಗೂ ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಪುನೀತ್​ ರಾಜ್​ಕುಮಾರ್​ ಕಟೌಟ್​ಗಳು ರಾರಾಜಿಸುತ್ತಿವೆ. ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಶೋಗಳು ಪ್ರದರ್ಶನ ಕಾಣಲು ಸಜ್ಜಾಗಿದೆ.

ಕರ್ನಾಟಕದ 225ಕ್ಕೂ ಅಧಿಕ ಚಿತ್ರಮಂದಿರದಲ್ಲಿ ‘ಗಂಧದ ಗುಡಿ’ ಬಿಡುಗಡೆ ಆಗುತ್ತಿದೆ. ಇದರ ಜೊತೆಗೆ ವಿದೇಶದಲ್ಲೂ ರಿಲೀಸ್​ ಆಗುತ್ತಿರುವುದು ವಿಶೇಷ. ವಿಶ್ವಾದ್ಯಂತ ಇರುವ ಅಪ್ಪು ಅಭಿಮಾನಿಗಳು ಈ ಸಾಕ್ಷ್ಯಚಿತ್ರವನ್ನು ದೊಡ್ಡ ಪರದೆಯಲ್ಲಿ ಕಣ್ತುಂಬಿಕೊಳ್ಳಲಿದ್ದಾರೆ. ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿ ಜಗತ್ತಿನ ಬಗ್ಗೆ ಈ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:40 pm, Thu, 27 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ