AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಅಗಲಿಕೆಗೆ ಒಂದು ವರ್ಷ; ಕಣ್ಣೀರಲ್ಲೇ ಕಳೆದು ಹೋಯ್ತು 365 ದಿನ

ಪುನೀತ್ ಫಿಟ್ ಆಗಿ ಇದ್ದವರು. ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದರು. ಅವರಿಗೆ ಹೃದಯಘಾತವಾಗಿದೆ ಎಂದಾಗ ಯಾರೂ ನಂಬಲಿಲ್ಲ. ಕೆಲವೇ ಗಂಟೆಗಳಲ್ಲಿ ಪುನೀತ್ ನಿಧನವಾರ್ತೆ ಹೊರಬಿತ್ತು.

ಪುನೀತ್ ರಾಜ್​ಕುಮಾರ್ ಅಗಲಿಕೆಗೆ ಒಂದು ವರ್ಷ; ಕಣ್ಣೀರಲ್ಲೇ ಕಳೆದು ಹೋಯ್ತು 365 ದಿನ
ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 29, 2022 | 6:00 AM

Share

ಅದು ಅಕ್ಟೋಬರ್ 29, 2021. ಶಿವರಾಜ್​ಕುಮಾರ್ (Shivarajkumar) ನಟನೆಯ ‘ಭಜರಂಗಿ 2’ ರಿಲೀಸ್ ಆಗಿತ್ತು. ರಾಜ್​ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇತ್ತು. ಪುನೀತ್ ರಾಜ್​ಕುಮಾರ್ ಅವರು ‘ಭಜರಂಗಿ 2’ ತಂಡಕ್ಕೆ ವಿಶ್ ಮಾಡಿ ಟ್ವೀಟ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಶಾಕಿಂಗ್ ಸುದ್ದಿ ಕೇಳಿ ಬಂತು. ‘ಪುನೀತ್​ಗೆ ಹೃದಯಾಘಾತ ಆಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂಬ ಸುದ್ದಿ ಹೊರಬಿತ್ತು. ಪುನೀತ್ (Puneeth Rajkumar) ಫಿಟ್ ಆಗಿ ಇದ್ದವರು. ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದರು. ಅವರಿಗೆ ಹೃದಯಘಾತವಾಗಿದೆ ಎಂದಾಗ ಯಾರೂ ನಂಬಲಿಲ್ಲ. ಕೆಲವೇ ಗಂಟೆಗಳಲ್ಲಿ ಪುನೀತ್ ನಿಧನವಾರ್ತೆ ಹೊರಬಿತ್ತು. ಈ ಘಟನೆ ನಡೆದು ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ.

ಸಮಾಧಿಗೆ ಪೂಜೆ

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್​ಕುಮಾರ್ ಅವರ ಸಮಾಧಿ ಇದೆ. ಬೆಳಿಗ್ಗೆ 9 ಗಂಟೆಗೆ ಕುಟುಂಬದವರು ಸಮಾಧಿಗೆ ಬರಲಿದ್ದಾರೆ. ಸಮಾಧಿ ಬಳಿ ಪುನೀತ್​​ಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ಮಾಡಲಿದ್ದಾರೆ. ಇಡೀ ದೊಡ್ಮನೆ ಕುಟುಂಬ ಈ ಪೂಜೆಗೆ ಬರಲಿದೆ. ಜೊತೆಗೆ ಕನ್ನಡ ಚಿತ್ರರಂಗದವರು, ಅಪ್ಪು ಆಪ್ತರು, ಸ್ನೇಹಿತರು ಪೂಜೆಯಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಕಂಠೀರವ ಸ್ಟುಡಿಯೋದಲ್ಲಿ ಅನ್ನದಾನ

ಅಪ್ಪು ಸಮಾಧಿಗೆ ಪೂಜೆ ಮಾಡಿದ ನಂತರದಲ್ಲಿ ಕುಟುಂಬ ಮನೆಗೆ ಮರಳಲಿದೆ. ಅಲ್ಲಿಯೂ ಪೂಜೆ ಇರಲಿದೆ. ವರ್ಷದ ಕಳಸ ಪೂಜೆಯನ್ನು ಕುಟುಂಬ ಮಾಡಲಿದೆ. ಬಳಿಕ ಬಂಧು ಬಳಗಕ್ಕೆ ಭೋಜನ ವ್ಯವಸ್ಥೆ ಇರಲಿದೆ. ಪುನೀತ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳಿಗೆ ಅನ್ನದಾನವಿರಲಿದೆ. ಎಷ್ಟೇ ಸಂಖ್ಯೆಯಲ್ಲಿ ಫ್ಯಾನ್ಸ್ ಬಂದರೂ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲು ಸಿದ್ಧತೆ ನಡೆದಿದೆ.

ಸಾಮಾಜಿಕ ಕೆಲಸ

ಪುನೀತ್ ಸಾಕಷ್ಟು ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದರು. ಈಗ ಪುನೀತ್ ಅವರನ್ನು ಇದೇ ರೀತಿಯ ಕೆಲಸಗಳ ಮೂಲಕ ಫ್ಯಾನ್ಸ್ ನೆನಪಿಸಿಕೊಳ್ಳಲಿದ್ದಾರೆ. ಇಂದು ರಾಜ್ಯದ ವಿವಿಧ ಕಡೆಗಳಲ್ಲಿ ರಕ್ತದಾನ, ಅನ್ನದಾನ ಶಿಬಿರ ಇರಲಿದೆ.

ಕಣ್ಣೀರಲ್ಲಿ ಕೈ ತೊಳೆದ ಕುಟುಂಬ

ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಅಭಿಮಾನಿಗಳು ಕೂಡ ದುಃಖದಲ್ಲಿದ್ದಾರೆ. ಅವರು ಅಗಲಿ ಒಂದು ವರ್ಷ ಕಳೆದರೂ ನೋವು ಪೂರ್ತಿಯಾಗಿ ಕಡಿಮೆ ಆಗಿಲ್ಲ.

ಗಂಧದ ಗುಡಿ ರಿಲೀಸ್

ಅಕ್ಟೋಬರ್ 28ರಂದು ‘ಗಂಧದ ಗುಡಿ’ ಬಿಡುಗಡೆ ಆಗಿದೆ. ಪುಣ್ಯತಿಥಿ ಸಂದರ್ಭದಲ್ಲೇ ಪುನೀತ್ ಅವರನ್ನು ಕಣ್ತುಂಬಿಕೊಳ್ಳಲು ಒಳ್ಳೆಯ ಅವಕಾಶ ಸಿಕ್ಕಿದೆ. ‘ಗಂಧದ ಗುಡಿ’ ನೋಡಿದವರು ಕಣ್ಣೀರು ಹಾಕುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಶೋ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.