Gandhada Gudi Title Teaser: ‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್​

Puneeth Rajkumar | Gandhada Gudi: ಪಿಆರ್​ಕೆ ಆಡಿಯೋ​ ಮೂಲಕ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್​ ಅನಾವರಣ ಆಗಿದೆ. ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರನ್ನು ಎಲ್ಲರೂ ತುಂಬಾ​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

Gandhada Gudi Title Teaser: ‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್​
ಪುನೀತ್​ ರಾಜ್​ಕುಮಾರ್​, ಗಂಧದ ಗುಡಿ
Follow us
TV9 Web
| Updated By: Digi Tech Desk

Updated on:Dec 06, 2021 | 12:55 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕರುನಾಡಿನ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿಸಿದ್ದರು. ಆದರೆ ಅದನ್ನು ಅಭಿಮಾನಿಗಳ ಮುಂದಿಡುವ ಮುನ್ನವೇ ಅವರು ಅಸುನೀಗಿದ್ದು ನೋವಿನ ಸಂಗತಿ. ಭೌತಿಕವಾಗಿ ಅವರ ಅನುಪಸ್ಥಿತಿಯಲ್ಲೇ ಇಂದು (ಡಿ.6) ‘ಗಂಧದ ಗುಡಿ’ ಡಾಕ್ಯುಮೆಂಟರಿಯ ಶೀರ್ಷಿಕೆ ಟೀಸರ್​ ಅನಾವರಣ ಆಗಿದೆ. ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಟೈಟಲ್​ ಟೀಸರ್​ ರಿಲೀಸ್​ ಮಾಡಲಾಗಿದೆ. ಈ ದಿನಕ್ಕಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾದಿದ್ದರು. ಟೈಟಲ್​ ಟೀಸರ್​ ನೋಡಿ ಎಲ್ಲರೂ ಖುಷಿಪಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗುತ್ತಿದೆ. ಈ ವೇಳೆ ಅಪ್ಪು ನಮ್ಮೊಂದಿಗೆ ಇರಬೇಕಿತ್ತು ಎಂದು ಎಲ್ಲರೂ ತೀವ್ರವಾಗಿ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಕರ್ನಾಟಕದ ದಟ್ಟ ಕಾನನದ ಒಳಗೆ ಇದನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನವನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕೇವಲ ಟೀಸರ್​ ನೋಡಿಯೇ ಜನರು ರೋಮಾಂಚನಗೊಳ್ಳುತ್ತಿದ್ದಾರೆ. ಕಣ್ಮನ ತಣಿಸುವಂತಹ ಛಾಯಾಗ್ರಹಣ ಎಲ್ಲರಲ್ಲೂ ಬೆರಗು ಮೂಡಿಸುತ್ತಿದೆ. ಇದು ಕೇವಲ ಆನ್​ಲೈನ್​ಗೆ ಸೀಮಿತವಲ್ಲ. ‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. 2022ರಲ್ಲಿ ಚಿತ್ರಮಂದಿರಗಳಲ್ಲಿ ಇದನ್ನು ತೆರೆಕಾಣಿಸಲು ಪ್ಲ್ಯಾನ್​ ಮಾಡಲಾಗಿದೆ.

ಟೈಟಲ್​ ಟೀಸರ್​ ನೋಡಿದ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಇದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಇಂಥ ಅದ್ಭುತವನ್ನು ನಿರ್ಮಿಸಿದ ಪುನೀತ್​ ರಾಜ್​ಕುಮಾರ್​ ಅವರನ್ನು ನೆನಪು ಮಾಡಿಕೊಂಡು ಜನರು ಕಂಬಿನಿ ಮಿಡಿಯುತ್ತಿದ್ದಾರೆ. ಈ ಟೀಸರ್​ನ ಕೊನೆಯಲ್ಲಿ ರಾಜ್​ಕುಮಾರ್​​ ನಟನೆಯ ‘ಗಂಧದ ಗುಡಿ’ ಸಿನಿಮಾದ ಡೈಲಾಗ್​ ಕೇಳಿಬಂದಿದೆ. ಅದನ್ನು ಕೇಳಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ವಿಶೇಷ ಏನೆಂದರೆ ಇಂದು ಪಾರ್ವತಮ್ಮ ರಾಜ್​ಕುಮಾರ್​ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಟೈಟಲ್​ ಟೀಸರ್​ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ವೇಳೆ ಪುನೀತ್​ ರಾಜ್​ಕುಮಾರ್ ನಮ್ಮೊಂದಿಗೆ ಇಲ್ಲ ಎಂಬ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ.

ಇದನ್ನೂ ಓದಿ:

ಇನ್ನೂ ನಿಂತಿಲ್ಲ ಶಿವಣ್ಣನ ಕಣ್ಣೀರು; ಅಪ್ಪು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿರುವ ಮುತ್ತಣ್ಣ

ಮೈಸೂರು ಅರಮನೆಯಿಂದ ಅಪ್ಪು ಸಮಾಧಿವರೆಗೆ ಸೈಕ್ಲಿಂಗ್​; ಪುನೀತ್​ ಅಭಿಮಾನಿಗಳಿಂದ ಹೀಗೊಂದು ಶ್ರದ್ಧಾಂಜಲಿ

Published On - 10:08 am, Mon, 6 December 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ