AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಕನಸಿನ ‘ಗಂಧದ ಗುಡಿ’ ಟೀಸರ್​ ರಿಲೀಸ್​ ಮಾಡುವ ವಿಶೇಷ ವ್ಯಕ್ತಿ ಯಾರು? ಆಹ್ವಾನ ನೀಡಿದ ಶಿವಣ್ಣ

Puneeth Rajkumar: ಇದು ಪುನೀತ್ ರಾಜ್‌ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಆಗಿರುವುದರಿಂದ ಎಲ್ಲರಿಗೂ ಹೆಚ್ಚಿನ ನಿರೀಕ್ಷೆ ಇದೆ. ಡಿ.6ರಂದು ಟೀಸರ್ ರಿಲೀಸ್​ ಆಗಲಿದೆ. ಅದಕ್ಕೆ ಸಕಲ ಸಿದ್ಧತೆ ನಡೆದಿದೆ.

ಪುನೀತ್​ ಕನಸಿನ ‘ಗಂಧದ ಗುಡಿ’ ಟೀಸರ್​ ರಿಲೀಸ್​ ಮಾಡುವ ವಿಶೇಷ ವ್ಯಕ್ತಿ ಯಾರು? ಆಹ್ವಾನ ನೀಡಿದ ಶಿವಣ್ಣ
ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್​
TV9 Web
| Edited By: |

Updated on: Dec 04, 2021 | 1:44 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಅಭಿಮಾನಿ ಬಳಗ ಒಂದು ವಿಶೇಷ ದಿನಕ್ಕಾಗಿ ಕಾಯುತ್ತಿದೆ. ಡಿ.6 ಆ ವಿಶೇಷ ದಿನ. ಅಂದು ಅಪ್ಪು ಕನಸಿನ ಪ್ರಾಜೆಕ್ಟ್​ ಆದಂತಹ ‘ಗಂಧದ ಗುಡಿ’ (Gandhada Gudi) ಟೈಟಲ್​ ಟೀಸರ್​ ಬಿಡುಗಡೆ ಆಗಲಿದೆ. ಪುನೀತ್​ ರಾಜ್​ಕುಮಾರ್​ ಅವರಿಗೆ ನಟನೆ ಮಾತ್ರವಲ್ಲದೇ ಬೇರೆ ಬೇರೆ ಕ್ಷೇತ್ರಗಳ ಬಗ್ಗೆ ಆಸಕ್ತಿ ಇತ್ತು. ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಅವರೊಂದು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದಾರೆ. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಡಲಾಗಿದೆ. ಅದರ ಟೈಟಲ್​ ಟೀಸರ್​ ಬಿಡುಗಡೆಗೆ ಡಾ. ರಾಜ್​ಕುಮಾರ್​ ಕುಟುಂಬದವರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪಿಆರ್​ಕೆ ಆಡಿಯೋ ಮೂಲಕ ಅದು ರಿಲೀಸ್​ ಆಗಲಿದೆ. ಟೀಸರ್​ ಬಿಡುಗಡೆ ಮಾಡಲು ಶಿವರಾಜ್​ಕುಮಾರ್ (Shivarajkumar) ​ ಅವರು ವಿಶೇಷ ವ್ಯಕ್ತಿಯನ್ನು ಆಹ್ವಾನಿಸಿದ್ದಾರೆ. ಯಾರದು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ! ಹೌದು, ಈ ಕುರಿತು ಈಗಾಗಲೇ ಸಿಎಂ (CM Basavaraj Bommai) ಅವರನ್ನು ಶಿವಣ್ಣ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸದಲ್ಲಿ ಶಿವರಾಜ್​ಕುಮಾರ್​ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ‘ಗಂಧದ ಗುಡಿ’ ಟೈಟಲ್​ ಟೀಸರ್ ಬಿಡುಗಡೆಗೆ ಆಹ್ವಾನ ನೀಡಿದ್ದಾರೆ. ಇದು ಪುನೀತ್ ರಾಜ್‌ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಆಗಿರುವುದರಿಂದ ಎಲ್ಲರಿಗೂ ಹೆಚ್ಚಿನ ನಿರೀಕ್ಷೆ ಇದೆ. ಡಿ.6ರಂದು ಟೀಸರ್ ಆಗಲಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾ ಕಡೆಗಳಿಗೆ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ನವೆಂಬರ್ 1ರಂದು ರಿಲೀಸ್​ ಆಗಬೇಕಿತ್ತು. ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿಲ್ಲ. ಈಗ ಅದನ್ನು ಡಿಸೆಂಬರ್​ 6ಕ್ಕೆ ರಿಲೀಸ್​ ಮಾಡಲಾಗುತ್ತಿದೆ. ‘ಅಪ್ಪು ಅವರ ಅಮೋಘವಾದ ಕನಸಿನ ಪಯಣ. ಹಿಂದೆಂದೂ ಕಾಣದ ರೋಮಾಂಚಕ ಅನುಭವ’ ಎಂದು ಅಶ್ವಿನಿ ಬರೆದುಕೊಂಡಿದ್ದಾರೆ.

ಟೀಸರ್​ ರಿಲೀಸ್​ ಕುರಿತು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಇತ್ತೀಚೆಗೆ ಟ್ವೀಟ್​ ಮಾಡಿದ್ದರು.​ ‘ಅಪ್ಪು ಅವರ ಕನಸೊಂದು 01.11.2021 ರಂದು ಬೆಳಕು ಕಾಣಬೇಕಿತ್ತು. ಆದರೆ ಅ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ’ ಎಂದು ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:

ಮೈಸೂರು ಅರಮನೆಯಿಂದ ಅಪ್ಪು ಸಮಾಧಿವರೆಗೆ ಸೈಕ್ಲಿಂಗ್​; ಪುನೀತ್​ ಅಭಿಮಾನಿಗಳಿಂದ ಹೀಗೊಂದು ಶ್ರದ್ಧಾಂಜಲಿ

ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ