ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್
ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

2014ರಲ್ಲಿ ತೆರೆಗೆ ಬಂದ ಪುನೀತ್​ ನಟನೆಯ ‘ಪವರ್***​’ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ಈ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇದಾದ ನಂತರದಲ್ಲಿ ಅವರು ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸಿಲ್ಲ. ‘

TV9kannada Web Team

| Edited By: Rajesh Duggumane

Aug 02, 2021 | 8:12 PM

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಪವನ್​ ಕುಮಾರ್​ ಜೊತೆಯಾಗಿ ಮಾಡಲಿರುವ ಹೊಸ ಚಿತ್ರಕ್ಕೆ ‘ದ್ವಿತ್ವ’ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಪುನೀತ್​ ಹೀರೋ ಅನ್ನೋ ಮಾಹಿತಿ ಬಿಟ್ಟರೆ ಇತರೆ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ.  ಹೀಗಾಗಿ, ಸಿನಿಮಾ ನಾಯಕಿ​ ಯಾರು ಅನ್ನೋದು ಅನೇಕರ ಪ್ರಶ್ನೆಯಾಗಿತ್ತು. ಇದಕ್ಕೆ ಈಗ ಚಿತ್ರತಂಡದಿಂದ ಉತ್ತರ ಸಿಕ್ಕಿದೆ. 

ಸೈಕಲಾಜಿಕಲ್​ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್​ ಕುಮಾರ್​ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್​ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಶೀರ್ಷಿಕೆ ಜೊತೆಗೆ ಡಿಫರೆಂಟ್​ ಆದಂತಹ ಪೋಸ್ಟರ್​ ಕೂಡ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಈಗ ಈ ಚಿತ್ರಕ್ಕೆ ತ್ರಿಷಾ ಕೃಷ್ಣನ್​ ನಾಯಕಿಯಾಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

2014ರಲ್ಲಿ ತೆರೆಗೆ ಬಂದ ಪುನೀತ್​ ನಟನೆಯ ‘ಪವರ್***​’ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ಈ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇದಾದ ನಂತರದಲ್ಲಿ ಅವರು ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸಿಲ್ಲ. ‘ಪವರ್​’ ತೆರೆಕಂಡ ನಂತರದಲ್ಲಿ ತ್ರಿಷಾಗೆ ಬೇರೆ ಭಾಷೆಗಳಲ್ಲಿ ಒಳ್ಳೆಯ ಆಫರ್ ಬರೋಕೆ ಶುರುವಾದವು. ಹೀಗಾಗಿ, ಅವರು ಪರ ಭಾಷೆಯಲ್ಲಿ ಬ್ಯುಸಿಯಾದರು. ಈಗ ಅವರು  ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ.

2018ರಲ್ಲಿ ಬಂದ ‘ಯೂ ಟರ್ನ್​’ ಚಿತ್ರದ ಬಳಿಕ ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾವನ್ನು ಪವನ್​ ಕುಮಾರ್​ ನಿರ್ದೇಶನ ಮಾಡಿಲ್ಲ. ದೊಡ್ಡ ಗ್ಯಾಪ್​ ಬಳಿಕ ಅವರು ಕನ್ನಡ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಲೂಸಿಯಾ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯರಾಗಿದ್ದ ಪೂರ್ಣಚಂದ್ರ ತೇಜಸ್ವಿ ಅವರೇ ‘ದ್ವಿತ್ವ’ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಇದನ್ನೂ ಓದಿ: ಪೋಸ್ಟರ್​ ಕಾಪಿ ಎಂಬ ಆರೋಪಕ್ಕೆ ಪುನೀತ್​ ನಟನೆಯ ‘ದ್ವಿತ್ವ’ ಚಿತ್ರ ತಂಡದಿಂದ ಸ್ಪಷ್ಟನೆ

‘ದ್ವಿತ್ವ’ ಪೋಸ್ಟರ್​ ಹಿಂದಿನ ಸತ್ಯ ತೆರೆದಿಟ್ಟು, ಫ್ಯಾನ್ಸ್​ ಬಳಿ ಕ್ಷಮೆ ಕೇಳಿದ ಪವನ್​ ಕುಮಾರ್​

Follow us on

Related Stories

Most Read Stories

Click on your DTH Provider to Add TV9 Kannada