ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

Puneeth Rajkumar Eyes Transplant: ಈ ಹಿಂದೆ ಡಾ. ರಾಜ್​ಕುಮಾರ್ ಕೂಡ ಕಣ್ಣುಗಳನ್ನು ದಾನ ಮಾಡಿದ್ದರು. ಅವರ ಹಾದಿಯಲ್ಲಿಯೇ ಪುನೀತ್​ ರಾಜ್​ಕುಮಾರ್​ ಕೂಡ ನೇತ್ರದಾನ ಮಾಡಿದ್ದಾರೆ. ನಾಲ್ಕು ಜನರ ಬಾಳಿಗೆ ಬೆಳಕು ನೀಡಿದ್ದಾರೆ.

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ
ಪುನೀತ್​ ರಾಜ್​ಕುಮಾರ್, ಡಾ. ಭುಜಂಗ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Nov 01, 2021 | 3:06 PM

ಬದುಕಿದ್ದಾಗ ಪುನೀತ್​ ರಾಜ್​ಕುಮಾರ್​ ಅವರು ಅನೇಕರಿಗೆ ಸಹಾಯ ಮಾಡಿದ್ದರು. ಸಾವಿನ ನಂತರವೂ ಅವರು ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ಅವರ ಎರಡು ಕಣ್ಣುಗಳನ್ನು ನಾಲ್ಕು ಜನರಿಗೆ ಅಳವಡಿಸಲಾಗಿದೆ. ಇದು ಹೇಗೆ ಸಾಧ್ಯ ಎಂಬ ಕುತೂಹಲದ ಪ್ರಶ್ನೆ ಎಲ್ಲರಲ್ಲೂ ಇದೆ. ಆ ಪ್ರಶ್ನೆಗೆ ಸ್ವತಃ ವೈದ್ಯರು ಉತ್ತರ ನೀಡಿದ್ದಾರೆ. ಅಪ್ಪು ಕಣ್ಣುಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಈ ಕುರಿತು ನಾರಾಯಣ ನೇತ್ರಾಲಯದ ಡಾ. ಭುಜಂಗ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಈ ಹಿಂದೆ ಡಾ. ರಾಜ್​ಕುಮಾರ್ ಕೂಡ ಕಣ್ಣುಗಳನ್ನು ದಾನ ಮಾಡಿದ್ದರು. ಅವರ ಹಾದಿಯಲ್ಲಿಯೇ ಪುನೀತ್​ ಕೂಡ ನೇತ್ರದಾನ ಮಾಡಿದ್ದಾರೆ. ನಾಲ್ಕು ಜನರ ಬಾಳಿಗೆ ಬೆಳಕು ನೀಡಿದ್ದಾರೆ. ‘ದಾನ ಮಾಡಲಾದ 2 ಕಣ್ಣುಗಳು ತುಂಬ ಆರೋಗ್ಯವಾಗಿದ್ದರೆ ಕಾರ್ನಿಯಾವನ್ನು ನಾವು ನಾಲ್ಕು ಭಾಗ ಮಾಡಬಹುದು. ಕಾರ್ನಿಯಾವನ್ನು ಒಂದು ಗ್ಲಾಸ್​ ಎಂದು ಊಹಿಸಿದರೆ ಅದರಲ್ಲಿ ಮುಂಭಾಗ ಮತ್ತು ಹಿಂಭಾಗ ಇರುತ್ತದೆ. ಮುಂಭಾಗದ ಕಾರ್ನಿಯಾ ತೊಂದರೆ ಇರುವವರಿಗೆ ದಾನ ಪಡೆದ ಕಣ್ಣಿನ ಮುಂಭಾಗವನ್ನು ಅಳವಡಿಸುತ್ತೇವೆ. ಹಿಂಭಾಗದ ತೊಂದರೆ ಇರುವವರಿಗೆ ಹಿಂಭಾಗದ ಕಾರ್ನಿಯಾವನ್ನು ಅಳವಡಿಸುತ್ತೇನೆ’ ಎಂದು ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ.

‘ಮೊದಲೆಲ್ಲ ನಾವು ಪೂರ್ತಿ ಕಾರ್ನಿಯಾವನ್ನು ಬದಲಾಯಿಸುತ್ತಿದ್ದೆವು. ಆದರೆ ಈಗ ತಂತ್ರಜ್ಞಾನ ಮುಂದುವರಿದಿದೆ. ಕಣ್ಣುಗಳನ್ನು ಪದರದ ರೀತಿ ಭಾಗ ಮಾಡಲು ಸಾಧ್ಯ ಇರುವುದರಿಂದ ಎರಡು ಕಣ್ಣನ್ನು ನಾಲ್ಕು ಜನರಿಗೆ ಜೋಡಿಸಿದ್ದೇವೆ. ನಮ್ಮ ರಾಜ್ಯದಲ್ಲಿ ಏಕಕಾಲಕ್ಕೆ ಒಬ್ಬರ ಕಣ್ಣನ್ನು ನಾಲ್ಕು ಮಂದಿಗೆ ಒಂದೇ ದಿನದಲ್ಲಿ ಜೋಡಿಸಿದ್ದು ಇದೇ ಮೊದಲು. ಇದನ್ನು ಸಾಧ್ಯವಾಗಿಸಿದ ನಮ್ಮ ವೈದ್ಯರ ತಂಡಕ್ಕೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.

ಕಣ್ಣುಗಳನ್ನು ದಾನ ಪಡೆದವರು ಯಾರು ಎಂಬುದನ್ನು ಬಹಿರಂಗಪಡಿಸುವಂತಿಲ್ಲ. ಆ ಕಾರಣಕ್ಕಾಗಿ ಅಪ್ಪು ಕಣ್ಣು ಪಡೆದವರು ಯಾರು ಎಂಬುದನ್ನು ಗೌಪ್ಯವಾಗಿಯೇ ಇಡಲಾಗಿದೆ. ಅಷ್ಟೇ ಅಲ್ಲ, ಕಣ್ಣು ಪಡೆದ ವ್ಯಕ್ತಿಗೂ ಕೂಡ ತಾವು ಪಡೆದಿರುವುದು ಪುನೀತ್​ ಅವರ ಕಣ್ಣು ಎಂಬುದು ಗೊತ್ತಾಗುವುದಿಲ್ಲ. ಕಾನೂನಿನ ಅನ್ವಯ ಆ ಮಾಹಿತಿಯನ್ನು ಗೌಪ್ಯವಾಗಿಯೇ ಇಡಲಾಗುತ್ತದೆ. ಒಟ್ಟಿನಲ್ಲಿ, ಪುನೀತ್​ ಅವರು ನಿಧನದ ನಂತರವೂ ಸಾರ್ಥಕತೆ ಮೆರೆದಿದ್ದಾರೆ. ನಾಲ್ಕು ಜನರ ಬಾಳಿಗೆ ಬೆಳಕಾಗುವ ಮೂಲಕ ಇತರರಿಗೂ ಮಾದರಿ ಆಗಿದ್ದಾರೆ.

ಇದನ್ನೂ ಓದಿ:

Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ