ದೊಡ್ಮನೆ ಅನ್ನಸಂತರ್ಪಣೆ ಕಾರ್ಯಕ್ರಮ ಮುಕ್ತಾಯ; ಒಟ್ಟೂ ಊಟ ಮಾಡಿದವರ ಸಂಖ್ಯೆ ಎಷ್ಟು ಗೊತ್ತಾ?

25 ಸಾವಿರ ಜನರಿಗೆ ಮಾಂಸಾಹಾರದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಸಸ್ಯಾಹಾರದ ವ್ಯವಸ್ಥೆ ಇಡಲಾಗಿತ್ತು. ಒಟ್ಟು 28-30 ಸಾವಿರ ಜನರು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದೊಡ್ಮನೆ ಅನ್ನಸಂತರ್ಪಣೆ ಕಾರ್ಯಕ್ರಮ ಮುಕ್ತಾಯ; ಒಟ್ಟೂ ಊಟ ಮಾಡಿದವರ ಸಂಖ್ಯೆ ಎಷ್ಟು ಗೊತ್ತಾ?
ಪುನೀತ್ ಕುಟುಂಬದಿಂದ ಅನ್ನ ಸತರ್ಪಣೆ
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 10, 2021 | 9:27 AM

ಪುನೀತ್​ ರಾಜ್​ಕುಮಾರ್ (Puneeth Rajkumar)​ ದೊಡ್ಡ ಅಭಿಮಾನಿ ಬಳಗವನ್ನು ತೊರೆದು ಹೋಗಿದ್ದಾರೆ. ಅವರು ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ನವೆಂಬರ್​ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರನ ಹಮ್ಮಿಕೊಂಡಿತ್ತು. ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಹಾಗಾದರೆ ಈ ಕಾರ್ಯಕ್ರಮ ಹೇಗೆ ನಡೆಯಿತು? ಆ ಬಗ್ಗೆ ಇಲ್ಲಿದೆ ಮಾಹಿತಿ.  

ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿತ್ತು. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಿದ್ದಾರೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿತ್ತು. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿತ್ತು. ವೆಜ್​ ಮತ್ತು ನಾನ್​ವೆಜ್​ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.

25 ಸಾವಿರ ಜನರಿಗೆ ಮಾಂಸಾಹಾರದ ಊಟದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಸಸ್ಯಾಹಾರದ ಊಟಕ್ಕೆ ವ್ಯವಸ್ಥೆ ಇಡಲಾಗಿತ್ತು. ಒಟ್ಟು 28-30 ಸಾವಿರ ಜನರು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಒಂದು ಸಾವಿರಕ್ಕೂ ಹೆಚ್ಚು ಬಾಣಸಿಗರಿಂದ ಅಡುಗೆ ರೆಡಿ ಮಾಡಲಾಗಿತ್ತು.  ರಾಶಿರಾಶಿ ದಿನಸಿ ತರಿಸಲಾಗಿತ್ತು.

ನಟ ಪುನೀತ್​ ರಾಜ್​ಕುಮಾರ್​ ಅವರ 11ನೇ ದಿನ ಕಾರ್ಯವನ್ನು ಸೋಮವಾರ (ನ.8) ನೆರವೇರಿಸಲಾಯಿತು. ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ ಮಾತನಾಡಿದ ಶಿವರಾಜ್​ಕುಮಾರ್​ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘11ನೇ ದಿನ ಅಂದುಕೊಂಡು ಇದನ್ನೆಲ್ಲ ಮಾಡುವುದೇ ನಮಗೆ ನೋವಿನ ವಿಚಾರ. ಅಪ್ಪುಗೆ ಇದೆಲ್ಲ ಮಾಡುತ್ತಿದ್ದೇವಾ? ಮಾಡಬೇಕಾ ಅಂತ ಬೆಳಗ್ಗೆ ಅಂದುಕೊಳ್ಳುತ್ತಿದ್ದೆ. ಅದರ ಬಗ್ಗೆ ಮಾತನಾಡುವುದೇ ತುಂಬ ಬೇಜಾರು ಆಗುತ್ತದೆ. ವಿಧಿ ವಿಧಾನಗಳ ಪ್ರಕಾರ ಅದೆಲ್ಲ ನಡೆಯಲೇಬೇಕು’ ಎಂದು ಶಿವಣ್ಣ ಹೇಳಿದ್ದರು.

ಇದನ್ನೂ ಓದಿ: ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್

ಅಭಿಮಾನಿಗಳಿಗೆ ಪ್ರೀತಿಯಿಂದ ಊಟ ಬಡಿಸಿದ ಶಿವರಾಜ್​ಕುಮಾರ್​, ಅಶ್ವಿನಿ

Published On - 4:51 pm, Tue, 9 November 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ