Puneeth Rajkumar: ಪುನೀತ್​ ಪುಣ್ಯ ಸ್ಮರಣೆ: ಕುಟುಂಬದವರಿಂದ 11ನೇ ದಿನದ ಪೂಜೆ; ಸಮಾಧಿ ಬಳಿ ಯಾರಿಗೆ ಪ್ರವೇಶ?

Puneeth Rajkumar Samadhi: ಪುನೀತ್​ ರಾಜ್​ಕುಮಾರ್​ ಅವರ 11ನೇ ದಿನದ ಕಾರ್ಯವನ್ನು ಕುಟುಂಬದವರು ನೆರವೇರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಪುನೀತ್​ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಕಾರ್ಯ ಆರಂಭ ಆಗಿದೆ.

Puneeth Rajkumar: ಪುನೀತ್​ ಪುಣ್ಯ ಸ್ಮರಣೆ: ಕುಟುಂಬದವರಿಂದ 11ನೇ ದಿನದ ಪೂಜೆ; ಸಮಾಧಿ ಬಳಿ ಯಾರಿಗೆ ಪ್ರವೇಶ?
ಪುನೀತ್​ ರಾಜ್​ಕುಮಾರ್ ಸಮಾಧಿ
Follow us
TV9 Web
| Updated By: ಮದನ್​ ಕುಮಾರ್​

Updated on:Nov 08, 2021 | 8:45 AM

ನಟ ಪುನೀತ್​ ರಾಜ್​ಕುಮಾರ್​ ನಿಧನರಾಗಿ 11 ದಿನ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ. 11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ. ಭಾನುವಾರ (ನ.7) ರಾತ್ರಿಯಿಂದಲೇ ಈ ಕಾರ್ಯಕ್ಕೆ ಸಕಲ ಸಿದ್ಧತೆ ಶುರುವಾಗಿತ್ತು. ಇಂದು ಬೆಳಗ್ಗೆಯೇ ಪುನೀತ್​ ರಾಜ್​ಕುಮಾರ್​ ನಿವಾಸದಲ್ಲಿ ಪೂಜಾ ಕಾರ್ಯಗಳು ಆರಂಭ ಆಗಿವೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳಾದ ಧ್ರುತಿ, ವಂದಿತಾ, ಸಹೋದರರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪುನೀತ್​ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಲಿದ್ದಾರೆ.

ಹೇಗೆ ನಡೆಯಲಿದೆ ಕಾರ್ಯ?

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ ಕ್ಷಣದಿಂದಲೂ ಎಲ್ಲವನ್ನೂ ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಬರಲಾಗುತ್ತಿದೆ. ಎಲ್ಲಿಯೂ ಗೊಂದಲಕ್ಕೆ ಎಡೆಮಾಡಿಕೊಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅದೇ ರೀತಿ ಇಂದು ಕೂಡ 11ನೇ ದಿನದ ಕಾರ್ಯವನ್ನು ಕುಟುಂಬದವರು ನೆರವೇರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಪುನೀತ್​ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಕಾರ್ಯ ಆರಂಭ ಆಗಿದೆ.

ಮನೆಯನ್ನು ಹೂವಿನಿಂದ ಸಿಂಗರಿಸಲಾಗಿದೆ. ಮನೆ ಎದುರು ಶಾಮಿಯಾನ ಹಾಕಿ ವ್ಯವಸ್ಥೆ ಮಾಡಲಾಗಿದೆ. 10 ಗಂಟೆ ಸುಮಾರಿಗೆ ಅಪ್ಪು ಸಮಾಧಿ ಬಳಿ ಕುಟುಂಬಸ್ಥರು ಬರಲಿದ್ದಾರೆ. ಪುನೀತ್​ ಅವರಿಗೆ ಇಷ್ಟವಾದ ತಿಂಡಿ-ತಿನಿಸುಗಳನ್ನು ಸಮಾಧಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ಈ ಕಾರ್ಯಕ್ಕೆ ಕುಟುಂಬದವರ ಜೊತೆ ಕೆಲವೇ ಕೆಲವು ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

12 ಗಂಟೆವರೆಗೆ ಸಾರ್ವಜನಿಕರಿಗೆ ನೋ ಎಂಟ್ರಿ:

ಪ್ರತಿದಿನ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಜನರು ಕಿಲೋ ಮೀಟರ್​ಗಟ್ಟಲೆ ಉದ್ದದ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ದಿನವೂ ಕಂಡು ಬರುತ್ತಿದೆ. ಇಂದು 11ನೇ ದಿನದ ಕಾರ್ಯವಾದ್ದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ 12 ಗಂಟೆಯವರೆಗೆ ಕಂಠೀರವ ಸ್ಟುಡಿಯೋ ಆವರಣದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 12 ಗಂಟೆ ಬಳಿಕ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಅವಕಾಶ ಸಿಗಲಿದೆ. ಮಂಗಳವಾರ (ನ.9) ಅರಮನೆ ಮೈದಾನದಲ್ಲಿ ಅನ್ನ ಸಂತರ್ಪಣೆ ಮಾಡಲಾಗುವುದು.

ಇದನ್ನೂ ಓದಿ:

ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

ಎಂದಿಗೂ ಮುಗಿಯದ ಪುನೀತ್​ ರಾಜ್​ಕುಮಾರ್​ ನೆನಪು; ಇಲ್ಲಿವೆ ಅತಿ ಅಪರೂಪದ ಫೋಟೋಗಳು

Published On - 7:46 am, Mon, 8 November 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ