ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ; ಇಲ್ಲಿದೆ ವೈರಲ್​ ವಿಡಿಯೋ

Puneeth Rajkumar: ಪುನೀತ್​ ರಾಜ್​ಕುಮಾರ್​ ಅವರು ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಹೃದಯಗಳಿಗೆ ಹತ್ತಿರ ಆಗಿದ್ದರು. ಆ ಕಾರಣದಿಂದ ಅವರನ್ನು ಕಂಡರೆ ಕೋಟ್ಯಂತರ ಜನರಿಗೆ ಈ ಪರಿ ಪ್ರೀತಿ-ಅಭಿಮಾನ.

ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ; ಇಲ್ಲಿದೆ ವೈರಲ್​ ವಿಡಿಯೋ
ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ
Follow us
TV9 Web
| Updated By: ಮದನ್​ ಕುಮಾರ್​

Updated on: Nov 20, 2021 | 11:36 AM

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಮೇಲೆ ಜನರು ಇಟ್ಟ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೃದಯಾಘಾತದಿಂದ ಅಪ್ಪು ಅಕಾಲಿಕ ಮರಣ (Puneeth Rajkumar Death) ಹೊಂದಿದ ಬಳಿಕ ಅವರ ಕೋಟ್ಯಂತರ ಅಭಿಮಾನಿಗಳಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಪುನೀತ್​ ನಿಧನರಾಗಿ 23 ದಿನ ಕಳೆದಿದೆ. ಹಾಗಿದ್ದರೂ ಅಭಿಮಾನಿಗಳ (Puneeth Rajkumar Fans) ಎದೆಯಲ್ಲಿನ ನೋವು ಕಡಿಮೆ ಆಗಿಲ್ಲ. ಅನೇಕ ಜನರು ಬೇರೆ ಬೇರೆ ರೀತಿಯಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ. ಈಗೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ಮಳೆಯಲ್ಲಿ ನೆನೆಯುತ್ತಿರುವ ದೃಶ್ಯ ಇದೆ. ಪುನೀತ್​ ರಾಜ್​ಕುಮಾರ್​ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಕಟ್ಟಿರುವ ಬ್ಯಾನರ್​ ಎದುರು ಸುರಿಯುವ ಮಳೆಯಲ್ಲಿ ಕೈ ಮುಗಿಯುತ್ತ ಕುಳಿತಿರುವ ಅಭಿಮಾನಿಯ ಪ್ರೀತಿ ಕಂಡು ನೆಟ್ಟಿಗರು ಅಚ್ಚರಿ ಪಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಕೇವಲ ನಟನೆಗೆ ಸೀಮಿತವಾಗಿ ಇದ್ದವರಲ್ಲ. ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಅವರು ಜನರ ಹೃದಯಗಳಿಗೆ ಹತ್ತಿರ ಆಗಿದ್ದರು. ಆ ಕಾರಣದಿಂದ ಅವರನ್ನು ಕಂಡರೆ ಕೋಟ್ಯಂತರ ಜನರಿಗೆ ಈ ಪರಿ ಪ್ರೀತಿ-ಅಭಿಮಾನ. ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯ ಮತ್ತು ರಾಷ್ಟ್ರಗಳಲ್ಲೂ ಪುನೀತ್​ ರಾಜ್​ಕುಮಾರ್​ ಅವರನ್ನು ಆರಾಧಿಸುವ ಜನರಿದ್ದಾರೆ. ಅಪ್ಪು ನಿಧನರಾದ ಬಳಿಕ ಪಾಕಿಸ್ತಾನದಲ್ಲಿರುವ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿ ವಿಡಿಯೋ ಮಾಡಿದ್ದೇ ಅದಕ್ಕೆ ಸಾಕ್ಷಿ.

ಪುನೀತ್​ ರಾಜ್​ಕುಮಾರ್​ ಎಂದರೆ ಎಲ್ಲ ವಯಸ್ಸಿನವರಿಗೂ ಇಷ್ಟ. ಅಪ್ಪು ಅಗಲಿಕೆಯಿಂದ ಅನೇಕ ಹಿರಿಯ ಜೀವಗಳು ಮರುಗುತ್ತಿವೆ. ಪುನೀತ್​ ಫೋಟೋ ಮುಂದೆ ಅಜ್ಜಿಯರು ಕಣ್ಣೀರು ಹಾಕುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ಬಸ್​ ನಿಲ್ದಾಣದಲ್ಲಿ ಇದೇ ರೀತಿಯ ಒಂದು ಘಟನೆ ಇತ್ತೀಚೆಗೆ ನಡೆದಿತ್ತು. ಬಸ್​ ಮೇಲೆ ಅಂಟಿಸಿದ್ದ ಜಾಹೀರಾತಿನಲ್ಲಿ ಇರುವ ಪುನೀತ್ ಫೋಟೋಗೆ ವೃದ್ಧೆಯೊಬ್ಬರು ಮುತ್ತಿಟ್ಟು ಕಂಬನಿ ಸುರಿಸಿದ್ದರು.

ಪುನೀತ್​ ಭಾವಚಿತ್ರಕ್ಕೆ ಅಜ್ಜಿ ಮುತ್ತಿಟ್ಟು ಕಣ್ಣೀರು ಹಾಕುತ್ತಿರುವ ಆ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿತ್ತು. ಅದು ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಪುನೀತ್​ ಅವರನ್ನು ತಮ್ಮ ಮನೆ ಮಗ ಎಂದೇ ಭಾವಿಸಿದ್ದ ಇಂಥ ಹೃದಯಗಳಿಗೆ ಆಗಿರುವ ಆಘಾತವನ್ನು ಪದಗಳಲ್ಲಿ ವಿವರಿಸಲು ಆಗದು. ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಜನರು ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ:

ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ರಾಜ್​-ಪುನೀತ್​ ಜೀವನ ಚರಿತ್ರೆ; ಇಲ್ಲಿದೆ ಅಭಿಮಾನಿಗಳಿಗೆ ಸಿಹಿ ಸುದ್ದಿ

ಮೈತುಂಬ ಅಪ್ಪು ಚಿತ್ರ, 300 ಕಿಮೀ ಸೈಕಲ್​ ಸವಾರಿ; ಪುನೀತ್​ ಸಮಾಧಿಗೆ ಅಪರೂಪದ ಅಭಿಮಾನಿ ಭೇಟಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್