Puneeth Rajkumar: ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಮಾಲೆ ಧರಿಸಲು ಮುಂದಾದ ಅಭಿಮಾನಿಗಳು; ಇಲ್ಲಿದೆ ವಿವರ..

Appu Mala | Puneeth Rajkumar Birthday: ಅಪ್ಪು ದೇವರ ಮಾಲೆ ಧರಿಸುವವರು ಯಾವುದೇ ಕೆಟ್ಟ ಚಟಗಳನ್ನು ಮಾಡಬಾರದು. ಅಭಿಮಾನಿಗಳು 11, ಐದು ಮತ್ತು ಒಂದು ದಿನದ ಮಾಲೆ ಧರಿಸಬಹುದು.

Puneeth Rajkumar: ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಮಾಲೆ ಧರಿಸಲು ಮುಂದಾದ ಅಭಿಮಾನಿಗಳು; ಇಲ್ಲಿದೆ ವಿವರ..
ಪುನೀತ್​ ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on:Feb 22, 2023 | 1:56 PM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಅಭಿಮಾನಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಅವರು ಕನ್ನಡ ಚಿತ್ರರಂಗದಲ್ಲಿ ಮತ್ತು ಜನರ ಮನಸ್ಸಿನಲ್ಲಿ ಛಾಪು ಮೂಡಿಸಿದ್ದಾರೆ. ಹಲವು ಬಗೆಯ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಹಲವರಿಗೆ ಮಾದರಿ ಆಗಿದ್ದಾರೆ. ಅಪ್ಪಟ ಅಭಿಮಾನಿಗಳು (Puneeth Rajkumar Fans) ಅಪ್ಪು ಅವರನ್ನು ದೇವರ ರೀತಿ ನೋಡುತ್ತಾರೆ. ಎಷ್ಟೋ ಮನೆಗಳಲ್ಲಿ ದೇವರ ಫೋಟೋ ಜೊತೆ ಪುನೀತ್​ ರಾಜ್​ಕುಮಾರ್​ ಫೋಟೋ ಕೂಡ ಇಟ್ಟಿದ್ದಾರೆ. ಹಲವು ಜಾತ್ರೆ, ಉತ್ಸವಗಳಲ್ಲಿ ಅಪ್ಪು ಫೋಟೋವನ್ನು ಹೊತ್ತು ಸಾಗಿದ ಘಟನೆಗಳು ಸಹ ನಡೆದಿದ್ದವು. ಈಗ ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ‘ಅಪ್ಪು ದೇವರ ಮಾಲೆ’ (Appu Mala) ಧರಿಸಲು ನಿರ್ಧರಿಸಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆಯ ರೀತಿಯಲ್ಲಿ ಈ ವ್ರತ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ಇರುವ ಕರಪತ್ರದ ಫೋಟೋ ವೈರಲ್​ ಆಗಿದೆ.

ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪ್ರತಿಮೆ ಇದೆ. ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘದವರು ಈ ಮಾಲೆ ಧರಿಸುತ್ತಿದ್ದಾರೆ. ಮಾರ್ಚ್​ 1ರಿಂದ ಅಭಿಮಾನಿಗಳು ಮಾಲೆ ಹಾಕಬಹುದು. ಮಾರ್ಚ್​ 17ರ ತನಕ ವ್ರತ ಆಚರಿಸಬೇಕು. ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಬೇಕು. ಇವೆಲ್ಲವನ್ನೂ ಆಚರಿಸುವ ಮೂಲಕ ತಮ್ಮ ನೆಚ್ಚಿನ ನಟನಿಗೆ ಅಭಿಮಾನಿಗಳು ಗೌರವ ಸಲ್ಲಿಸಲಿದ್ದಾರೆ.

ಪುನೀತ್​ ರಸ್ತೆ ನಾಮಕರಣ ಕಾರ್ಯಕ್ರಮ ಫ್ಲೆಕ್ಸ್​ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾರಾಜಿಸಿದ ರಾಜಕೀಯ ನಾಯಕರು

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ದೇವರ ಮಾಲೆ ಧರಿಸುವವರು ಒಂದಷ್ಟು ನಿಯಮಗಳನ್ನು ಅನುಸರಿಸಬೇಕು. ಅದೇ ರೀತಿ ‘ಅಪ್ಪು ದೇವರ ಮಾಲೆ’ಯಲ್ಲೂ ಕೆಲವು ನಿಯಮಗಳಿವೆ. ಆ ಬಗ್ಗೆ ವೈರಲ್​ ಆಗಿರುವ ಕರಪತ್ರದಲ್ಲಿ ಮಾಹಿತಿ ಪ್ರಕಟಿಸಲಾಗಿದೆ. ಅಪ್ಪು ಫೋಟೋ ಇರುವ ಡಾಲರ್​ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್​ ಧರಿಸಬೇಕು. ಅಪ್ಪು ಫೋಟೋ ಇಟ್ಟು ಪೂಜೆ ಮಾಡಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು.

ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಅಪ್ಪು ದೇವರ ಮಾಲೆ ಧರಿಸುವವರು ಯಾವುದೇ ಕೆಟ್ಟ ಚಟಗಳನ್ನು ಮಾಡಬಾರದು. ಅಭಿಮಾನಿಗಳು 11, ಐದು ಮತ್ತು ಒಂದು ದಿನದ ಮಾಲೆ ಧರಿಸಬಹುದು. ದಿನಸಿ ವಸ್ತುಗಳಿರುವ ಇಡುಮುರಿಯನ್ನು ಹೊತ್ತು ಪುನೀತ್​ ರಾಜ್​ಕುಮಾರ್​ ಅವರ ಪುಣ್ಯಭೂಮಿಗೆ ತೆರಳಬೇಕು. ಅಪ್ಪು ಮಾಲೆ ಧರಿಸಿದವರು ಪುಣ್ಯಭೂಮಿಯ ದರ್ಶನ ಪಡೆದುಬಂದು ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾಹ ಮಾಡಿ, ಬಳಿಕ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸತಕ್ಕದ್ದು ಎಂದು ಕರಪತ್ರದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:56 pm, Wed, 22 February 23