‘ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು’; ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ

ಪುನೀತ್ ರಾಜ್​ಕುಮಾರ್ ಅಭಿಮಾನಿ ಸಂಘಗಳ ನೂರಾರು ಸದಸ್ಯರು ವಾಣಿಜ್ಯ ಮಂಡಳಿ ಕಟ್ಟಡದ ಎದುರು ಜಮಾಯಿಸಿದ್ದು, ಸರ್ಕಾರದ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಉದ್ದೇಶಪೂರ್ವಕಾಗಿಯೇ ಯುವರತ್ನ ಚಿತ್ರಕ್ಕೆ ಈ ರೀತಿ ಮಾಡಲಾಗಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.

'ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು'; ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ
ಪುನೀತ್​ ರಾಜ್​ಕುಮಾರ್ - ಯುವರತ್ನ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 03, 2021 | 3:10 PM

ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ನಿಯಮಗಳು ಕನ್ನಡ ಚಿತ್ರರಂಗಕ್ಕೆ ಮುಳುವಾಗಿವೆ. ಚಿತ್ರಮಂದಿರಗಳಲ್ಲಿ ಕೇವಲ ಶೇ.50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು ಎಂಬ ನಿಯಮದಿಂದಾಗಿ ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಚಿತ್ರಕ್ಕೆ ತೊಂದರೆ ಆಗಿದೆ. ಅದನ್ನು ಪುನೀತ್ ಅಭಿಮಾನಿಗಳು ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಹೊಸ ನಿಯಮ ಘೋಷಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಇರುವ ಅಪ್ಪು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಚಿತ್ರರಂಗಕ್ಕೆ ಎದುರಾಗಿರುವ ಈ ಹೊಸ ಬಿಕ್ಕಟ್ಟಿನ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪ್ರಮುಖರ ಸಭೆ ನಡೆಸಲಾಗಿದೆ. ಮಂಡಳಿ ಅಧ್ಯಕ್ಷ ಜೈರಾಜ್, ಸಾ.ರಾ. ಗೋವಿಂದು, ಉಮೇಶ್ ಬಣಕಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಿದ್ದಾರೆ. ಸರ್ಕಾರದ ಕ್ರಮವನ್ನು ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ.

ಪುನೀತ್ ರಾಜ್​ಕುಮಾರ್ ಅಭಿಮಾನಿ ಸಂಘಗಳ ನೂರಾರು ಸದಸ್ಯರು ವಾಣಿಜ್ಯ ಮಂಡಳಿ ಕಟ್ಟಡದ ಎದುರು ಜಮಾಯಿಸಿದ್ದು, ಸರ್ಕಾರದ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಉದ್ದೇಶಪೂರ್ವಕಾಗಿಯೇ ಯುವರತ್ನ ಚಿತ್ರಕ್ಕೆ ಈ ರೀತಿ ಮಾಡಲಾಗಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ. ‘ವ್ಯವಸ್ಥಿತವಾಗಿ ಸರ್ಕಾರ ಸಂಚು ರೂಪಿಸುತ್ತಿದೆ. ಅಭಿಮಾನಿಗಳಿಗೆ ಏನೇ ಆದರೂ ಅದಕ್ಕೆ ಸರ್ಕಾರವೇ ಕಾರಣ ಎಂದು ಸುಧಾಕರ್ ಅವರಿಗೆ ಎಚ್ಚರಿಕೆ ನೀಡುತ್ತೇವೆ’ ಎಂದು ಅಪ್ಪು ಫ್ಯಾನ್ಸ್ ಗುಡುಗಿದ್ದಾರೆ.

ಸರ್ಕಾರದ ಈ ಕ್ರಮದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಅಭಿಮಾನಿಗಳು ಎಚ್ಚರಿಕೆ ನೀಡಿರುವ ಅಭಿಮಾನಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಪುನೀತ್ ರಾಜ್​ಕುಮಾರ್ ಅವರು 50 ಲಕ್ಷ ರೂ. ದೇಣಿಗೆ ನೀಡಿದ್ದರು. ಅದನ್ನು ಸರ್ಕಾರ ಮರೆತಿದೆ ಎಂಬುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

‘ಹಲವು ಅಭಿಮಾನಿ ಸಂಘಗಳಿಂದ ಮನವಿ ಬಂದಿದೆ. ಮಾಧ್ಯಮಗಳ ಮೂಲಕ ನಾವು ಮುಖ್ಯಮಂತ್ರಿಗಳಲ್ಲಿ ಮತ್ತು ಸಚಿವ ಸುಧಾಕರ್ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಶೇ.50 ಮಾಡಿದರೆ ನಮಗೆ ಏನೂ ಅಭ್ಯಂತರ ಇಲ್ಲ. ಆದರೆ ಏಕಾಏಕಿ ತೆಗೆದುಕೊಂಡ ನಿರ್ಧಾರ ಸರಿಯೇ ಎಂದು ಪ್ರಶ್ನೆ ಮಾಡುತ್ತಿದ್ದೇವೆ. ಹಾಗಾಗಿ ಕೂಡಲೇ ಈ ಹೊಸ ನಿಯಮ ರದ್ದು ಮಾಡಿ, ಮತ್ತೆ ಆ ಸಿನಿಮಾ ಶೇ.100 ಆಕ್ಯುಪೆನ್ಸಿಯಲ್ಲಿ ಪ್ರದರ್ಶನ ಕಾಣಬೇಕು’ ಎಂದು ಸಾ.ರಾ. ಗೋವಿಂದು ಹೇಳಿದ್ದಾರೆ.

ಇದನ್ನೂ ಓದಿ: Yuvarathnaa: ‘ಪುನೀತ್​ ರಾಜ್​ಕುಮಾರ್​ಗೆ ಯಾಕೆ ಇಂಥ ಅನ್ಯಾಯ?’ ಸರ್ಕಾರದ ವಿರುದ್ಧ ಸಿಡಿದೆದ್ದ ಅಪ್ಪು ಫ್ಯಾನ್ಸ್​!

Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

(Puneeth Rajkumar fans lay siege to Karnataka Film Chamber and express anger over Government for 50 percent occupancy rules)

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್