Puneeth Rajkumar: ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಅಪ್ಪು ಫ್ಯಾನ್ಸ್​ ಮನವಿ; ‘ಪುನೀತ ಪರ್ವ’ಕ್ಕೆ ತಯಾರಿ ಜೋರು

Gandhada Gudi Pre-release Event: ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ.

Puneeth Rajkumar: ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಅಪ್ಪು ಫ್ಯಾನ್ಸ್​ ಮನವಿ; ‘ಪುನೀತ ಪರ್ವ’ಕ್ಕೆ ತಯಾರಿ ಜೋರು
ಪುನೀತ್​ ರಾಜ್​ಕುಮಾರ್
Follow us
TV9 Web
| Updated By: Digi Tech Desk

Updated on:Oct 21, 2022 | 12:42 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ. ಅಕ್ಟೋಬರ್​ 28ರಂದು ‘ಗಂಧದ ಗುಡಿ’ (Gandhada Gudi) ರಿಲೀಸ್​ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್​ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್​ 21ರಂದು ‘ಪುನೀತ ಪರ್ವ’ (Puneetha Parva) ಹೆಸರಿನಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್​ ರೆಡಿ ಆಗಿದ್ದಾರೆ. ಈ ಕುರಿತು ಮಾಹಿತಿ ನೀಡಲು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ರಾಜ್​ಕುಮಾರ್​ ಸಮಾಧಿ ಬಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಪುನೀತ​ ಪರ್ವ’ ಕಾರ್ಯಕ್ರಮಕ್ಕಾಗಿ ತಮ್ಮ ಪ್ಲ್ಯಾನ್ ಏನು ಎಂಬುದನ್ನು ವಿವರಿಸಿದ್ದಾರೆ.

ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಎಲ್ಲರಿಗೂ ಊಟ ಮತ್ತು ವಸತಿ ಸೌಕರ್ಯ ಕಲ್ಪಿಸಲು ಪ್ಲ್ಯಾನ್​ ನಡೆಯುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ಆಂಬ್ಯುಲೆನ್ಸ್​ಗಳ ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್​ 1ರಂದು ಎಲ್ಲೆಡೆ ಕನ್ನಡದ ಧ್ವಜ ಹಾರಾಡಬೇಕು. ಅಪ್ಪು ಭಾವಚಿತ್ರ ಕೂಡ ರಾರಾಜಿಸುವಂತಾಗಲಿ ಎಂದು ಅಪ್ಪು ಅಭಿಮಾನಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

‘ಪುನೀತ್​ ಪರ್ವ’ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಆಗಮಿಸಲಿದ್ದಾರೆ. ಅನೇಕ ಸೂಪರ್​ ಸ್ಟಾರ್​ಗಳಿಗೆ ಈಗಾಗಲೇ ಆಮಂತ್ರಣ ಪತ್ರಿಕೆ ತಲುಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಡಾ. ರಾಜ್​ಕುಮಾರ್​ ಕುಟುಂಬದವರು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ಹಾಗೂ ಮನವಿ ಪತ್ರವನ್ನು ನೀಡಲಾಯಿತು.

ಕರ್ನಾಟಕದ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ಕುರಿತು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮೂಡಿಬಂದಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅನೇಕ ಗಣ್ಯರು ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:01 pm, Fri, 14 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ