ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು

Puneeth Rajkumar: ಅಯ್ಯಪ್ಪ ಸ್ವಾಮಿ ಭಕ್ತರು ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಹೊತ್ತುಕೊಂಡು ಶಬರಿಮಲೆ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು
ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಹೊತ್ತುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು
Follow us
| Updated By: ಮದನ್​ ಕುಮಾರ್​

Updated on:Dec 13, 2021 | 11:54 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಅಭಿಮಾನಿಗಳು ಹಲವು ರೀತಿಯಲ್ಲಿ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಫಿಟ್ನೆಸ್​ ಬಗ್ಗೆ ಅಷ್ಟೆಲ್ಲ ಕಾಳಜಿ ವಹಿಸುತ್ತಿದ್ದ ನಟ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಇಂದಿಗೂ ಸಾಧ್ಯವಾಗುತ್ತಿಲ್ಲ. ಅವರ ಅಭಿಮಾನಿಗಳು ಬೇರೆ ಬೇರೆ ಬಗೆಯಲ್ಲಿ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಶೇಷ ಏನೆಂದರೆ, ಅನೇಕರು ಪುನೀತ್​ ರಾಜ್​ಕುಮಾರ್​ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ( Sabarimala Yathra) ಮಾಡುತ್ತಿದ್ದಾರೆ. ಆ ಮೂಲಕ ಪುನೀತ್​ ರಾಜ್​ಕುಮಾರ್​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ (Ayyappa Swamy) ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್​ ನೆನಪು ಮತ್ತೆ ಮತ್ತೆ ಕಾಡುತ್ತದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ. ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್​ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಅಯ್ಯಪ್ಪ ಸ್ವಾಮಿಯ ಪರಮಭಕ್ತರು. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದಿದೆ. ಪುನೀತ್​ ರಾಜ್​ಕುಮಾರ್​ ಅವರು ಸಹ ಮಾಲೆ ಧರಿಸಿ ಅನೇಕ ಬಾರಿ ಶಬರಿಮಲೆಗೆ ತೆರಳಿದ್ದರು. ಈಗ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ​ ಫೋಟೋ ತೆಗೆದುಕೊಂಡು ಹೋಗಿ ದೇವರ ದರ್ಶನ ಮಾಡಿಬರುತ್ತಿರುವುದು ವಿಶೇಷ.

ಇದನ್ನೂ ಓದಿ:

‘ನನ್ನ ಉಸಿರು ಇರೋವರೆಗೆ ಪುನೀತ್​ ಫೋನ್​​ ನಂಬರ್​ ಡಿಲೀಟ್​ ಮಾಡಲ್ಲ’: ಜೋಗಿ ಪ್ರೇಮ್​ ಭಾವುಕ ಮಾತು

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Published On - 8:16 am, Mon, 13 December 21