AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಪುನೀತ್​ ಅಂತ್ಯಕ್ರಿಯೆ ಎಷ್ಟು ಗಂಟೆಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕುಟುಂಬಸ್ಥರು ಮತ್ತು ಅವರ ಆಪ್ತ ವಲಯಕ್ಕೆ ಮಾತ್ರ ಇಲ್ಲಿಗೆ ಕಂಠೀರವ ಸ್ಟುಡಿಯೋದಲ್ಲಿ ಅವಕಾಶ ಇದೆ. ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದ ಒಳಗಡೆಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಭಾನುವಾರ ಪುನೀತ್​ ಅಂತ್ಯಕ್ರಿಯೆ ಎಷ್ಟು ಗಂಟೆಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Oct 30, 2021 | 7:50 PM

Share

ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯೋಕೆ ಅಭಿಮಾನಿಗಳು ತಂಡೋಪ ತಂಡವಾಗಿ ಬರುತ್ತಿದ್ದಾರೆ. ನಗುಮುಖ ಹೊತ್ತು ಎಲ್ಲ ಕಡೆಗಳಲ್ಲೂ ತಿರುಗಾಡುತ್ತಿದ್ದ ಅವರು ಈಗ ಇಲ್ಲ ಎನ್ನುವ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಆರಂಭದಲ್ಲಿ ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ಮಾಡೋಕೆ ನಿರ್ಧರಿಸಲಾಗಿತ್ತು. ಆದರೆ, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಭಾನುವಾರ (ಅಕ್ಟೋಬರ್​ 31) ಅವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.

ನಾಳೆ ಬೆಳಗ್ಗೆ 10.30ರೊಳಗೆ ನಟ ಪುನೀತ್ ಅಂತ್ಯಕ್ರಿಯೆ ನೆರವರೇರಲಿದೆ. ಬೆಳಗ್ಗೆ 6 ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಅಂತಿಮಯಾತ್ರೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಪ್ಪ-ಅಮ್ಮನ ಪಕ್ಕದಲ್ಲೇ ಪುನೀತ್​ ಮಣ್ಣಾಗಲಿದ್ದಾರೆ. ಕುಟುಂಬಸ್ಥರು ಮತ್ತು ಅವರ ಆಪ್ತ ವಲಯಕ್ಕೆ ಮಾತ್ರ ಇಲ್ಲಿಗೆ ತೆರಳಲು ಅವಕಾಶ ಇದೆ. ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದ ಒಳಗಡೆಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಪುನೀತ್‌ ಅಣ್ಣ ರಾಘವೇಂದ್ರ ರಾಜ್ ಕುಮಾರ್‌ ಪುತ್ರ ವಿನಯ್ ರಾಜ್​ಕುಮಾರ್ ಅಂತಿಮ ಕಾರ್ಯ ನೆರವೇರಿಸಲಿದ್ದಾರೆ. ರಾಜ್​ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸಿದ್ದಾರೆ. ಪುನೀತ್‌ ರಾಜ್​ಕುಮಾರ್‌ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು. ಹಿಂದೂ ಧರ್ಮದ ಪ್ರಕಾರ ಹೆಣ್ಣುಮಕ್ಕಳು ಅಂತಿಮ ಸಂಸ್ಕಾರ ಮಾಡುವಂತಿಲ್ಲ. ಹೀಗಾಗಿ, ವಿನಯ್ ರಾಜ್​ಕುಮಾರ್ ಅವರಿಂದ ಕೊನೆಯ ಕಾರ್ಯಗಳು ನೆರವೇರಲಿದೆ.

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್