ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’​; ಪುನೀತ್​ ಸಿನಿಮಾಗೆ ಯಾವ ಪ್ರಮಾಣಪತ್ರ?

ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’​; ಪುನೀತ್​ ಸಿನಿಮಾಗೆ ಯಾವ ಪ್ರಮಾಣಪತ್ರ?
ಪುನೀತ್

‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಅವರ ಸಹೋದರ ಶಿವರಾಜ್​ಕುಮಾರ್ ಡಬ್​ ಮಾಡಿದ್ದಾರೆ. ಟೀಸರ್​ನಲ್ಲಿ ಇದರ ಝಲಕ್​ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ನಿರ್ಧರಿಸಿದೆ.

TV9kannada Web Team

| Edited By: Rajesh Duggumane

Mar 05, 2022 | 7:12 PM

ಪುನೀತ್​ ರಾಜ್​ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್​’ ಸಿನಿಮಾ (James Movie) ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿದೆ. ಹೀರೋ ಆಗಿ ಪುನೀತ್​ ನಟಿಸಿದ ಕೊನೆಯ ಸಿನಿಮಾ ಇದು. ಈಗಾಗಲೇ ಟೀಸರ್​ ಹಾಗೂ ಹಾಡಿನ ಮೂಲಕ ಈ ಚಿತ್ರ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಪುನೀತ್​ ಜನ್ಮದಿನ (Puneeth Rajkumar Birthday)ಹಿನ್ನೆಲೆಯಲ್ಲಿ ಮಾರ್ಚ್​ 17ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ‘ಜೇಮ್ಸ್​’ ಸಿನಿಮಾ ಸೆನ್ಸಾರ್​ ಪ್ರಕ್ರಿಯೆಯನ್ನು ಮುಗಿಸಿದೆ. ಯಾವುದೇ ಕಟ್​ ಇಲ್ಲದೆ ಚಿತ್ರ ಸೆನ್ಸಾರ್​ ಪ್ರಕ್ರಿಯೆಯಲ್ಲಿ ಪಾಸ್​ ಆಗಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ್ದರು. ಅದಾಗಲೇ ಅವರು ‘ಜೇಮ್ಸ್​’ ಸಿನಿಮಾ ಕೆಲಸಗಳನ್ನು ಬಹುತೇಕ ಪೂರ್ಣಗೊಳಿಸಿದ್ದರು. ಒಂದು ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇತ್ತು. ಆದರೆ, ವಿಧಿಯಾಟವೇ ಬೇರೆ ಆಗಿತ್ತು. ಪುನೀತ್ ಅವರನ್ನು ದೇವರು ಬೇಗ ಕರೆಸಿಕೊಂಡರು. ಈಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಮಾರ್ಚ್​ 17ರಂದು ತೆರೆಗೆ ಬರುತ್ತಿದೆ.

ನಿರ್ದೇಶಕ ಚೇತನ್​ ಕುಮಾರ್ ‘ಜೇಮ್ಸ್​’ ಚಿತ್ರವನ್ನು ಸೆನ್ಸಾರ್ ಮಂಡಳಿ ಎದುರು ಇರಿಸಿದ್ದಾರೆ. ಈ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಇದರ ಜತೆಗೆ ಸಿನಿಮಾದಲ್ಲಿ ಯಾವುದೇ ದೃಶ್ಯವನ್ನು ಕಟ್​ ಮಾಡಲು ಸೆನ್ಸಾರ್ ಮಂಡಳಿ ಸೂಚನೆ ನೀಡಿಲ್ಲ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಮಾರ್ಚ್​ 17ರಂದು ಸಿನಿಮಾ ಕಣ್ತುಂಬಿಕೊಳ್ಳಬಹುದು.

ಈ ಮೊದಲು ‘ಜೇಮ್ಸ್​’ ಸಿನಿಮಾದ ಟೀಸರ್​ಅನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್​ನಲ್ಲಿ ಪುನೀತ್​ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ‘ಟ್ರೇಡ್​ಮಾರ್ಕ್​..’ ಸಾಂಗ್​ ರಿಲೀಸ್​ ಮಾಡಲಾಯಿತು. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಅವರ ಸಹೋದರ ಶಿವರಾಜ್​ಕುಮಾರ್ ಡಬ್​ ಮಾಡಿದ್ದಾರೆ. ಟೀಸರ್​ನಲ್ಲಿ ಇದರ ಝಲಕ್​ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್

ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್​ ರಾಜ್​ಕುಮಾರ್​: ವಂಶಿಕಾ ಸೂಪರ್​ ಮಾತು

Follow us on

Related Stories

Most Read Stories

Click on your DTH Provider to Add TV9 Kannada