AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Puneeth Rajkumar Daughters: ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ ನೆರವೇರಿದೆ. ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನಗಳನ್ನು ಮಾಡಿಸಲಾಯಿತು. ಬಳಿಕ ಪುನೀತ್​ ಪುತ್ರಿಯರು ಅಪ್ಪನ ಸಮಾಧಿಗೆ ಪೂಜೆ ಸಲ್ಲಿಸಿದರು.

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ
ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ
TV9 Web
| Edited By: |

Updated on: Oct 31, 2021 | 9:21 AM

Share

ಹೃದಯಾಘಾತದಿಂದ ಮೃತರಾದ ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆಯನ್ನು ಇಂದು (ಅ.31) ಮುಂಜಾನೆ ನೆರವೇರಿಸಲಾಗಿದೆ.​ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಣ್ಣ ಶಿವರಾಜ್​ಕುಮಾರ್​, ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಪುನೀತ್​ ಅವರಿಗೆ ಗಂಡು ಮಕ್ಕಳಿಲ್ಲ. ಆ ಕಾರಣದಿಂದ ಅವರ ಸಹೋದರ ರಾಘವೇಂದ್ರ ರಾಜ್​ಕುಮಾರ್​ ಅವರ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನಗಳನ್ನು ಮಾಡಿಸಲಾಯಿತು. ಬಳಿಕ ಪುನೀತ್​ ಪುತ್ರಿಯರು ಅಪ್ಪನ ಸಮಾಧಿಗೆ ಪೂಜೆ ಸಲ್ಲಿಸಿದರು.

ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಪುನೀತ್​ ಪುತ್ರಿ ಧೃತಿ ಕೆಲವೇ ತಿಂಗಳ ಹಿಂದೆ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಅಪ್ಪನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅವರು ನ್ಯೂಯಾರ್ಕ್​ನಿಂದ ಹೊರಟರು. 24 ಗಂಟೆಗೂ ಹೆಚ್ಚು ಕಾಲ ವಿಮಾನದಲ್ಲಿ ಪ್ರಯಾಣ ಮಾಡಿ ಶನಿವಾರ (ಅ.30) ಮಧ್ಯಾಹ್ನ ಬೆಂಗಳೂರು ತಲುಪಿದ್ದರು. ಕೂಡಲೇ ಅವರು ಕಂಠೀರವ ಸ್ಟೇಡಿಯಂಗೆ ತೆರಳಿ ಅಂತಿಮ ದರ್ಶನ ಪಡೆದುಕೊಂಡಿದ್ದರು. ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್​ ಅವರ ಇಬ್ಬರು ಪುತ್ರಿಯರು ತಂದೆಗಾಗಿ ಅಶ್ರ ಧಾರೆ ಹರಿಸಿದ್ದಾರೆ.

ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್​ ಹಣೆಗೆ ಮುತ್ತಿಟ್ಟು ಕಂಬನಿ ಮಿಡಿದರು. ಪುನೀತ್ ಅಂತಿಮ ದರ್ಶನ, ಮೆರವಣಿಗೆಗೆ ರಾಜ್ಯ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿತ್ತು. ಬೆಂಗಳೂರಿನಲ್ಲಿ ಭದ್ರತೆಗಾಗಿ 10 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. 2 ದಿನದಲ್ಲಿ 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಂದ ನಮನ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಆಗಮಿಸಿದ್ದರು. ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸಿದರು.

ಸಿದ್ದರಾಮಯ್ಯ, ಡಿಕೆ ಶಿವ​ಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿದಾಯ ಹೇಳಿದ್ದಾರೆ.

ಇದನ್ನೂ ಓದಿ:

Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ

Puneeth Rajkumar Funeral: ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಅಪ್ಪು ಚಿರ ನಿದ್ರೆ; ಈಡಿಗ ಸಂಪ್ರದಾಯದಂತೆ ಪುನೀತ್​ ಅಂತ್ಯಕ್ರಿಯೆ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!