Puneeth Rajkumar: ‘ಡಾ. ರಾಜ್​ ಸಮಾಧಿ ಮಣ್ಣನ್ನು ಫ್ಯಾನ್ಸ್​ ತೋಡಿದ್ದರು; ಅಂಥ ಸ್ಥಿತಿ ಪುನೀತ್​ಗೆ ಬರಬಾರದು’; ರಾಘಣ್ಣ ಮನವಿ

Puneeth Rajkumar Funeral: ಈ ಹಿಂದೆ ಡಾ.ರಾಜ್​ ಅಂತ್ಯಕ್ರಿಯೆ ಬಳಿಕ ಕುಟುಂಬದವರು ಸಮಾಧಿ ಸ್ಥಳಕ್ಕೆ ಬರುವುದಕ್ಕೂ ಮುನ್ನವೇ ಅನೇಕ ಅಭಿಮಾನಿಗಳು ಅವರ ಸಮಾಧಿಗೆ ಹಾಲು ತುಪ್ಪ ಹಾಕಿ ಬಿಟ್ಟಿದ್ದರು. ಇನ್ನೂ ಕೆಲವರು ಸಮಾಧಿಯ ಮಣ್ಣನ್ನೇ ತೋಡಿದ್ದರು!

Puneeth Rajkumar: ‘ಡಾ. ರಾಜ್​ ಸಮಾಧಿ ಮಣ್ಣನ್ನು ಫ್ಯಾನ್ಸ್​ ತೋಡಿದ್ದರು; ಅಂಥ ಸ್ಥಿತಿ ಪುನೀತ್​ಗೆ ಬರಬಾರದು’; ರಾಘಣ್ಣ ಮನವಿ
ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ ಬಳಿಕ ಮಾತನಾಡಿದ ರಾಘಣ್ಣ
Follow us
| Updated By: ಮದನ್​ ಕುಮಾರ್​

Updated on:Oct 31, 2021 | 10:02 AM

ಇಡೀ ಕನ್ನಡ ಚಿತ್ರರಂಗಕ್ಕೆ ಕತ್ತಲು ಆವರಿಸಿದೆ. ಪುನೀತ್​ ರಾಜ್​ಕುಮಾರ್​ ನಿಧನದಿಂದ ಅವರ ಇಡೀ ಕುಟುಂಬ ಮತ್ತು ಅಭಿಮಾನಿ ಬಳಗ ಶೋಕ ಸಾಗರದಲ್ಲಿ ಮುಳುಗಿದೆ. ಇಂದು (ಅ.31) ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್​ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಅಭಿಮಾನಿಗಳು ಬಂದಿದ್ದರು. ಆದರೆ ಯಾರಿಗೂ ಕಂಠೀರವ ಸ್ಟುಡಿಯೋ ಆವರಣದ ಒಳಗೆ ಬರಲು ಅವಕಾಶ ನೀಡಿಲ್ಲ. ಕೇವಲ ಕುಟುಂಬದವರು ಮತ್ತು ಗಣ್ಯರು ಮಾತ್ರ ಭಾಗಿ ಆಗಿದ್ದರು. ಇನ್ನೂ ಮೂರು ದಿನಗಳ ಕಾಲ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದ್ದಾರೆ.

ರಾಘಣ್ಣ ಹೀಗೆ ಹೇಳುತ್ತಿರುವುದಕ್ಕೂ ಕಾರಣ ಇದೆ. ‘ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಆದರೆ ಸಮಾಧಿ ನೋಡಲು ಯಾರಿಗೂ ಈಗ ಅವಕಾಶ ಇಲ್ಲ. ಇನ್ನೂ ಮೂರು ದಿನ ಕಳೆದ ಬಳಿಕ ಅವಕಾಶ ಮಾಡಿಕೊಡುತ್ತೇವೆ. ಮಂಗಳವಾರ (ನ.2) ಹಾಲು-ತುಪ್ಪ ಕಾರ್ಯ ಇದೆ. ಮಕ್ಕಳು ಮತ್ತು ಮನೆಯವರಿಂದ ಅದನ್ನು ಮಾಡಿಸಬೇಕು. ಅದೊಂದು ಕಾರ್ಯ ಮುಗಿಸಿದ ಬಳಿಕವೇ ಬೇರೆಯವರಿಗೆ ಅನುಮತಿ ನೀಡೋಣ ಅಂತ ತೀರ್ಮಾನಿಸಿದ್ದೇವೆ’ ಎಂದು ರಾಘಣ್ಣ ಹೇಳಿದ್ದಾರೆ.

‘ಈ ಹಿಂದೆ ಅಪ್ಪಾಜಿ (ಡಾ.ರಾಜ್​) ನಿಧನರಾದಾಗ ನಾವು ಬರುವುದಕ್ಕೂ ಮುನ್ನವೇ ಸುಮಾರು ಜನ ಅವರ ಸಮಾಧಿಗೆ ಹಾಲು ತುಪ್ಪ ಹಾಕಿ ಬಿಟ್ಟಿದ್ದರು. ಇನ್ನೂ ಕೆಲವರು ಸಮಾಧಿಯ ಮಣ್ಣನ್ನೇ ತೋಡಿದ್ದರು! ಈಗ ಅಂಥದ್ದಕ್ಕೆಲ್ಲ ಅವಕಾಶ ಆಗಬಾರದು. ಕೆಲವು ಅಭಿಮಾನಿಗಳು ಆ ರೀತಿ ಇರುತ್ತಾರೆ. ತಾವು ಮೊದಲು ಮಾಡೋಣ ಎಂಬ ಆತುರ ಅವರಿಗೆ ಇರುತ್ತದೆ. ಹಾಗೆ ಆಗೋದು ಬೇಡ. ಮೊದಲು ಕುಟುಂಬದವರು ಹಾಲು-ತುಪ್ಪ ಹಾಕಿದ ಬಳಿಕ ಸಾರ್ವಜನಿಕರು ಬಂದು ನೋಡಲು ಅವಕಾಶ ಕೊಡುತ್ತೇವೆ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್​.

‘ಇಷ್ಟು ದಿನ ಈ ಸ್ಥಳಕ್ಕೆ ಬಂದಾಗ ಅಪ್ಪಾಜಿ-ಅಮ್ಮನನ್ನು ನೋಡುತ್ತಿದ್ವಿ. ಇನ್ಮೇಲೆ ಅವನನ್ನೂ (ಪುನೀತ್​) ನೋಡಿಕೊಂಡು, ನಮಸ್ಕಾರ ಮಾಡಿ ಹೋಗುತ್ತೇವೆ’ ಎಂದು ರಾಘಣ್ಣ ಭಾವುಕವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ:

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ

Published On - 9:59 am, Sun, 31 October 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ