Puneeth Rajkumar Funeral: ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಅಪ್ಪು ಚಿರ ನಿದ್ರೆ; ಈಡಿಗ ಸಂಪ್ರದಾಯದಂತೆ ಪುನೀತ್​ ಅಂತ್ಯಕ್ರಿಯೆ

Puneeth Rajkumar Last Rites: ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮುಂಭಾಗ ಜಮಾಯಿಸಿದ್ದಾರೆ.

Puneeth Rajkumar Funeral: ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಅಪ್ಪು ಚಿರ ನಿದ್ರೆ; ಈಡಿಗ ಸಂಪ್ರದಾಯದಂತೆ ಪುನೀತ್​ ಅಂತ್ಯಕ್ರಿಯೆ
ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ
Follow us
TV9 Web
| Updated By: ಮದನ್​ ಕುಮಾರ್​

Updated on:Oct 31, 2021 | 9:23 AM

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ (ಅ.31) ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ರಾಜ್​ಕುಮಾರ್​ ಕುಟುಂಬದವರು ಈಡೀಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ತಂದೆ ಡಾ. ರಾಜ್​ಕುಮಾರ್​, ತಾಯಿ ಪಾರ್ವತಮ್ಮ ಸಮಾಧಿಯ ಪಕ್ಕದಲ್ಲೇ ಪುನೀತ್​ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಗಿದೆ.

ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್​ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ, ಸಹೋದರರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿಕೆ ಶಿವ​ಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿದಾಯ ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮುಂಭಾಗ ಜಮಾಯಿಸಿದ್ದರು.

ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್​ ಹಣೆಗೆ ಮುತ್ತಿಟ್ಟು ಕಂಬನಿ ಮಿಡಿದರು.

ಪುನೀತ್ ಅಂತಿಮ ದರ್ಶನ, ಮೆರವಣಿಗೆಗೆ ರಾಜ್ಯ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿತ್ತು. ಬೆಂಗಳೂರಿನಲ್ಲಿ ಭದ್ರತೆಗಾಗಿ 10 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. 2 ದಿನದಲ್ಲಿ 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಂದ ನಮನ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಆಗಮಿಸಿದ್ದರು. ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸಿದರು. ಎಲ್ಲ ಪೊಲೀಸ್​ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Published On - 7:56 am, Sun, 31 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ