ಭಾನುವಾರ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

| Updated By: ರಾಜೇಶ್ ದುಗ್ಗುಮನೆ

Updated on: Oct 30, 2021 | 2:02 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ. 

ಭಾನುವಾರ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಪುನೀತ್​ ರಾಜ್​ಕುಮಾರ್​, ಬಸವರಾಜ ಬೊಮ್ಮಾಯಿ
Follow us on

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ. 

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್​ಕುಮಾರ್​ಗೆ ಸಕಲ ಸರ್ಕಾರಿ​ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ-ತಾಯಿಯಾದ ಡಾ. ರಾಜ್ ಕುಮಾರ್ ಹಾಗೂ, ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಈ ಮೊದಲು ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಪುನೀತ್ ರಾಜ್​ಕುಮಾರ್ ಈ ಜಾಗದಲ್ಲಿ ಡಾ. ರಾಜಕುಮಾರ್ ಶಾಲೆ ಆರಂಭಿಸಬೇಕೆಂಬ ಕನಸು ಕಂಡಿದ್ದರು. ಆದರೆ, ಈ ಫಾರ್ಮ್​ಹೌಸಿನ ಬದಲು ಕಂಠೀರವ ಸ್ಟುಡಿಯೋದಲ್ಲೇ ಪುನೀತ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ದೊಡ್ಮನೆಯ ಪ್ರೀತಿಯ ಅಪ್ಪು ಪಂಚಭೂತಗಳಲ್ಲಿ ಲೀನವಾಗಲಿದ್ದಾರೆ.

ಇದನ್ನೂ ಓದಿ: ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 1:57 pm, Sat, 30 October 21