ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ
ಪುನೀತ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on:Dec 06, 2021 | 8:50 AM

ಪುನೀತ್​ ರಾಜ್​ಕುಮಾರ್​ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ​ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಇದರ ಟೈಟಲ್​ ಟೀಸರ್​ಅನ್ನು ನವೆಂಬರ್​ 1ಕ್ಕೆ ರಿಲೀಸ್​ ಮಾಡಬೇಕು ಎಂದು ಅವರು ಅಂದುಕೊಂಡಿದ್ದರು. ಅದಕ್ಕೂ ಮೊದಲೇ ಪುನೀತ್​ ನಿಧನ ಹೊಂದಿದರು. ಈಗ ಪುನೀತ್ ಕಂಡ ಕನಸು ಅನಾವರಣವಾಗುವ ಸಮಯ ಬಂದಿದೆ. ಇಂದು (ಡಿಸೆಂಬರ್​ 6) ಬೆಳಗ್ಗೆ 10 ಗಂಟೆಗೆ ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್​ ಆಗಲಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ಇಂದು ಮುಂಜಾನೆ 10 ಗಂಟೆಗೆ ಲಾಂಚ್​ ಆಗುತ್ತಿದೆ. ಈ ಬಗ್ಗೆ ಬರೆದುಕೊಂಡಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್. ‘ಹಿಂದೆಂದೂ ಕಾಣದ ಸಿನಿಮಾ ಅನುಭವ. PRK ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ನಿಮ್ಮ ಮುಂದೆ’ ಎಂದು ಬರೆದುಕೊಂಡಿದ್ದಾರೆ ಅವರು.

ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿಲ್ಲ. ಇಂದು ಆ ಟೀಸರ್ ರಿಲೀಸ್​ ಆಗುತ್ತಿದೆ.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್​ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್​ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಈಗ ಅವರಿಲ್ಲದೆ ಈ ಟೀಸರ್​ ರಿಲೀಸ್​ ಆಗುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಇದನ್ನೂ ಓದಿ: ಪುನೀತ್​ ಕಂಡ ಕನಸಿನ ಟೈಟಲ್​ ಟೀಸರ್ ರಿಲೀಸ್​​ ದಿನಾಂಕ ಘೋಷಣೆ ಮಾಡಿದ ಅಶ್ವಿನಿ

Published On - 6:30 am, Mon, 6 December 21

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ